For the best experience, open
https://m.hosakannada.com
on your mobile browser.
Advertisement

2024 Budget Highlights: ಮಹಿಳೆಯರು ಹಾಗೂ ಕೃಷಿಕರಿಗೆ ಕೇಂದ್ರದಿಂದ ಬಂಪರ್ ಕೊಡುಗೆ: ಇವರಿಗೆ ಮೋದಿ ನೀಡಿದ ಅನುದಾನ ಎಷ್ಟು?

2024 Budget Highlights:  ಕೇಂದ್ರ ವಿತ್ತ ಸಚಿವೆ ನಿರ್ಮಾಲ ಸೀತಾರಾಮನ್ ಅವರು ಇಂದು 2024-25 ಸಾಲಿನ ಕೇಂದ್ರ ಬಜೆಟ್​​​ (2024 Budget Highlights) ಮಂಡನೆ ಮಾಡುತ್ತಿದ್ದಾರೆ.
02:30 PM Jul 23, 2024 IST | ಕಾವ್ಯ ವಾಣಿ
UpdateAt: 02:30 PM Jul 23, 2024 IST
2024 budget highlights  ಮಹಿಳೆಯರು ಹಾಗೂ ಕೃಷಿಕರಿಗೆ ಕೇಂದ್ರದಿಂದ ಬಂಪರ್ ಕೊಡುಗೆ  ಇವರಿಗೆ ಮೋದಿ ನೀಡಿದ ಅನುದಾನ ಎಷ್ಟು
Advertisement

2024 Budget Highlights:  ಕೇಂದ್ರ ವಿತ್ತ ಸಚಿವೆ ನಿರ್ಮಾಲ ಸೀತಾರಾಮನ್ ಅವರು ಇಂದು 2024-25 ಸಾಲಿನ ಕೇಂದ್ರ ಬಜೆಟ್​​​ (2024 Budget Highlights) ಮಂಡನೆ ಮಾಡುತ್ತಿದ್ದಾರೆ. ಅನೇಕ ಕ್ಷೇತ್ರ ವಲಯಕ್ಕೆ ಅನುಗುಣವಾಗಿ ಬಜೆಟ್​​​ ಮಂಡನೆ ಮಾಡಿದ್ದು, ಶಿಕ್ಷಣ, ಉದ್ಯೋಗ, ಕೈಗಾರಿಕೆ, ಮಹಿಳೆ, ಕೃಷಿ, ಹೀಗೆ ಅನೇಕ ಕ್ಷೇತ್ರಗಳಿಗೆ ಅನುದಾನ ನೀಡಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಮಹಿಳೆಯರಿಗೆ ದೊಡ್ಡ ಸ್ಥಾನ ನೀಡಿದೆ. ನಿರ್ಮಲಾ ಸೀತಾರಾಮನ್ ಅವರು ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂಪಾಯಿ ಉದ್ಯೋಗ, ಶಿಕ್ಷಣಕ್ಕೆ 1.48 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ.

Advertisement

ಮಹಿಳೆಯರ ಕೌಶಲ್ಯಾಭಿವೃದ್ಧಿಗಾಗಿ  ಮಹಿಳೆಯರಿಗೆ 3 ಲಕ್ಷ ಕೋಟಿ ರೂಪಾಯಿ, 20 ಲಕ್ಷ ಯುವಕ-ಯುವತಿಯರಿಗೆ ತರಬೇತಿ ನೀಡಲು ಉದ್ಯೋಗಿ ಮಹಿಳಾ ಹಾಸ್ಟೆಲ್‌ಗಳನ್ನು ಸ್ಥಾಪಿಸಿ ಹೊಸ ಕಾರ್ಯಕ್ರಮ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಉಳಿದಂತೆ ಬಜೆಟ್-2024 ರಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ (MSME) ವಲಯವನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಮುದ್ರಾ ಯೋಜನೆಯಡಿ ಸಾಲದ ಮಿತಿಯನ್ನು ಹೆಚ್ಚಿಸಿದೆ. ಪ್ರಸ್ತುತ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ 10 ರೂಪಾಯಿ ಲಕ್ಷದವರೆಗೆ ಸಾಲ ನೀಡಲಾಗುತ್ತದೆ.

Advertisement

ಆದರೆ ಈಗ ಈ ಸಾಲದ ಮಿತಿಯನ್ನು 20 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಇದಂರಂತೆ ನೀವು 20 ಲಕ್ಷದವರೆಗೂ ಸಾಲ ಪಡೆಯಬಹುದು. ಇದು ನಿರುದ್ಯೋಗಿಗಳಿಗೆ ಮತ್ತು ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬಯಸುವ ಯುವಕರನ್ನು ಬೆಂಬಲಿಸುತ್ತದೆ.

ಇನ್ನು ಕೃಷಿ ಕ್ಷೇತ್ರಕ್ಕೆ ಒಟ್ಟು 1.52 ಲಕ್ಷ ಕೋಟಿ ರೂಪಾಯಿ ಮೀಸಲು ಇಡಲಾಗಿದೆ. 5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್‌ ನೀಡಲು ನಿರ್ಧಾರವನ್ನು ಈ ಬಜೆಟ್​​ನಲ್ಲಿ ಮಾಡಿದ್ದಾರೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ. ಇನ್ನು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಎಲ್ಲ ರೀತಿ ಸಹಾಯವನ್ನು ಕೇಂದ್ರ ಮಾಡಲಿದೆ ಎಂದಿದ್ದಾರೆ.

ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಮತ್ತು ಹಾಗೂ ಸಾವಯುವ ಕೃಷಿಗೆ ಆದ್ಯತೆ ನೀಡಲಾಗುವುದು ಎಂದು ಬಜೆಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಎಣ್ಣೆ ಕಾಳುಗಳ ಉತ್ಪಾದನೆ, ಶೇಖರಣೆ, ಮಾರುಕಟ್ಟೆಗಳಿಗೂ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.

Kumki Land: ಕುಮ್ಕಿ ಜಮೀನು ಮಂಜೂರು ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

Advertisement
Advertisement
Advertisement