ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

7th Pay Commission: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ - ಆಗಸ್ಟ್ 1 ರಿಂದಲೇ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಆದೇಶ !!

7th Pay Commission: ಆಗಸ್ಟ್ 1 ರಿಂದಲೇ ಸರ್ಕಾರಿ ನೌಕರರಿಗೆ 7 ವೇತನ ಆಯೋಗ ಜಾರಿಯಾಗುವಂತೆ ಸಿಎಂ ಸಿದ್ದರಾಮಯ್ಯನವರು ಆದೇಶ ಹೊರಡಿಸಿದ್ದಾರೆ.
07:58 AM Jul 16, 2024 IST | ಸುದರ್ಶನ್
UpdateAt: 07:58 AM Jul 16, 2024 IST
Advertisement

7th Pay Commission: ರಾಜ್ಯ ಸರ್ಕಾರಿ ನೌಕರರ ವರ್ಷಗಳ ಆಸೆ ಕೊನೆಗೂ ನೆರವೇರಿದೆ. ಆಗಸ್ಟ್ 1 ರಿಂದಲೇ ಸರ್ಕಾರಿ ನೌಕರರಿಗೆ 7 ವೇತನ ಆಯೋಗ ಜಾರಿಯಾಗುವಂತೆ ಸಿಎಂ ಸಿದ್ದರಾಮಯ್ಯನವರು ಆದೇಶ ಹೊರಡಿಸಿದ್ದಾರೆ.

Advertisement

ಹೌದು, 7ನೇ ವೇತನ ಆಯೋಗದ (7th Pay Commission) ಶಿಫಾರಸ್ಸು ಜಾರಿಗೊಳಿಸಲು ಸರ್ಕಾರ (Karnataka Government) ತೀರ್ಮಾನಿಸಿದ್ದು ಆಗಸ್ಟ್​ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಂಯ್ಯ(CM Siddaramaiah) ಪ್ರಕಟಿಸಿದ್ದಾರೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.

ಮಾ.16 ರಂದು ಸುಧಾಕರ್ ರಾವ್(Sudhakar Rao) ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ (Siddaramaiah) ಸ್ವೀಕಾರ ಮಾಡಿದ್ದರು. ಬಳಿಕ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಹಣಕಾಸು ಇಲಾಖೆಯಿಂದ ಹಣದ ಹೊಂದಾಣಿಕೆ ಕುರಿತು ಮಾಹಿತಿ ಕೇಳಲಾಗಿತ್ತು. ಇದೀಗ ಹಣಕಾಸು ಇಲಾಖೆಯ ವರದಿ ಬಳಿಕ ಸರ್ಕಾರ ತೀರ್ಮಾನ ಕೈಗೊಂಡಿದೆ.

Advertisement

Rajya Sabha: ಮೋದಿ ಸರ್ಕಾರಕ್ಕೆ ಬಿಗ್ ಶಾಕ್, ರಾಜ್ಯಸಭೆಯಲ್ಲಿ NDA ಬಲ ಕುಸಿತ – ಇನ್ಮುಂದೆ ಸುಲಭವಲ್ಲ ಬಿಲ್ ಪಾಸ್ !!

ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ (CS Shadakshari) ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದ್ದು, ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಜಾಸ್ತಿಯಾಗಲಿದೆ.

7 ನೇ ವೇತನ ಆಯೋಗದ ಪ್ರಮುಖ ಶಿಫಾರಸುಗಳೇನು?
7 ನೇ ವೇತನ ಆಯೋಗವು ಶೇ.27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 7500 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುವ ನಿರೀಕ್ಷೆಯಿದೆ.

7 ನೇ ವೇತನ ಆಯೋಗ ಜಾರಿಯಿಂದ ಎಷ್ಟು ಹೆಚ್ಚಾಗುತ್ತೆ ಸಂಬಳ ?!
7ನೇ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ಮೂಲ ವೇತನದಲ್ಲಿ 27.5% ಹೆಚ್ಚಳ ಮಾಡುವುದರ ಜೊತೆಗೆ ಅವರ ಕನಿಷ್ಠ ವೇತನವನ್ನು ತಿಂಗಳಿಗೆ 17,000 ರೂ.ನಿಂದ 27,000 ರೂ.ಗೆ ಹೆಚ್ಚಿಸುವಂತೆ ಆಯೋಗವು ಶಿಫಾರಸು ಮಾಡಿದೆ. ಒಟ್ಟಿನಲ್ಲಿ ಪ್ರಸ್ತುತ 1:8.86 ಕನಿಷ್ಠ ಮತ್ತು ಗರಿಷ್ಠ ವೇತನಗಳ ಅನುಪಾತವನ್ನು 1:8.93ಕ್ಕೆ ಹೆಚ್ಚಿಸಲಾಗಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳ ಬೋಧಕೇತರ ನೌಕರರಿಗೂ ಈ ಶಿಫಾರಸು ಅನ್ವಯವಾಗಲಿದ್ದು, 2022ರ ಜೂನ್‌ನಿಂದ ಪೂರ್ವಾನ್ವಯವಾಗುವಂತೆ ಜಾರಿ ಮಾಡುವಂತೆ ಶಿಫಾರಸು ಮಾಡಿದೆ. ಬೆನ್ನಲ್ಲೇ ಸರ್ಕಾರವು ಮೂಲ ವೇತನದಲ್ಲಿ 27.5% ಹೆಚ್ಚಳ ಘೋಷಿಸಿದೆ.

ಅಂದಹಾಗೆ ಈಗಾಗಲೇ ಮಧ್ಯಂತರವಾಗಿ ಶೇ.17ರಷ್ಟು ಮೂಲ ವೇತನ ಹೆಚ್ಚಳ ಮಾಡಿದ್ದು, ಅಂತಿಮವಾಗಿ ಇನ್ನೂ ಶೇ.8 ರಿಂದ ಶೇ.8.5 ರಷ್ಟು ವೇತನ ಹೆಚ್ಚಳ ನಿರೀಕ್ಷಿಸಲಾಗಿದೆ. ಒಟ್ಟಾರೆ ಏರಿಕೆ ಮೂಲವೇತನದ ಶೇ.25 ರಿಂದ ಶೇ.25.5 ತಲುಪುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ.

ಇದರ ಜೊತೆಗೆ ಬೇಸಿಕ್ ಸ್ಯಾಲರಿ 17,000 ರೂ.ನಿಂದ 27,000 ರೂಪಾಯಿಗೆ ಏರಿಕೆಯಾಗಲಿದೆ. ಹಳೇಯ ಬೇಸಿಕ್ ಸ್ಯಾಲರಿ 20900 ಆದರೆ ಹೊಸ ವರದಿ ಪ್ರಕಾರ 33300ಕ್ಕೆ ಏರಿಕೆಯಾಗಲಿದೆ. 40,900 ಇದ್ದರೆ ಅದು 65,950ಕ್ಕೆ ಏರಿಕೆಯಾಗುತ್ತದೆ. ಬೇಸಿಕ್ 50,150 ಇದ್ದರೆ ವೇತನ ಆಯೋಗದ ವರದಿ ಪ್ರಕಾರ ಅದು 79,900 ಬೇಸಿಕ್‌ಗೆ ಬರಲಿದೆ. ಇದರ ಜೊತೆಗೆ ಡಿಎ, ಐಆರ್ ಎಲ್ಲವೂ ಸೇರಿಕೊಂಡು ಸಂಬಳ ಮತ್ತಷ್ಟು ಹೆಚ್ಚಾಗಲಿದೆ. ಹಿರಿಯ ಶ್ರೇಣಿ ನೌಕರರ ಆರಂಭಿಕ ಕನಿಷ್ಠ ವೇತನ ಈಗ 1,04,600 ರೂಪಾಯಿಯಿದ್ದು, ಅದನ್ನು 1,67,200 ರೂಪಾಯಿಗೆ ಪರಿಷ್ಕರಿಸುವಂತೆ ಶಿಫಾರಸು ಮಾಡಲಾಗಿದೆ.

Moss Cleaning Tips: ಮಳೆಗಾಲದಲ್ಲಿ ಪಾಚಿ ಕಟ್ಟಿದ ಮನೆ ಅಂಗಳವನ್ನ ಸ್ವಚ್ಛಗೊಳಿಸಲು ಇಲ್ಲಿದೆ ಸುಲಭ ಉಪಾಯ!

Related News

Advertisement
Advertisement