For the best experience, open
https://m.hosakannada.com
on your mobile browser.
Advertisement

Aadhar Pahani link: ಇನ್ನು ಮುಂದೆ ಭಾನುವಾರವೂ ತೆರೆದಿರಲಿದೆ ಸಬ್ ರಿಜಿಸ್ಟ್ರಾರ್ ಕಚೇರಿ, ಪಹಣಿಗಳಿಗೆ ಆಧಾರ್ ಜೋಡಣೆ ಶುರು !

08:08 PM Mar 12, 2024 IST | ಹೊಸ ಕನ್ನಡ
UpdateAt: 10:33 PM Mar 12, 2024 IST
aadhar pahani link  ಇನ್ನು ಮುಂದೆ ಭಾನುವಾರವೂ ತೆರೆದಿರಲಿದೆ ಸಬ್ ರಿಜಿಸ್ಟ್ರಾರ್ ಕಚೇರಿ  ಪಹಣಿಗಳಿಗೆ ಆಧಾರ್ ಜೋಡಣೆ ಶುರು

Property Registration: ಕರ್ನಾಟಕ ರಾಜ್ಯದಲ್ಲಿ ಅಕ್ರಮ ಆಸ್ತಿಗಳ ನೋಂದಣಿ ತಡೆಗಟ್ಟುವ ನಿಟ್ಟಿನಲ್ಲಿ ಕಂದಾಯ ಇಲಾಖೆ (Revenue Department) ಕೈಗೊಳ್ಳುತ್ತಿರುವ ಸುಧಾರಣೆಯ ಒಂದು ಭಾಗವಾಗಿ ಇದೀಗ ಪಹಣಿಗಳಿಗೆ ಆಧಾರ್ ಜೋಡಣೆ ಶುರುವಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು (Minister Krishna Bairegowdru) ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಆ ಸಂದರ್ಭ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಠಾರಿಯಾ, ಆಯುಕ್ತ ಸುನೀಲ್‌ ಕುಮಾರ್‌ ರವರು ಹಾಜರಿದ್ದರು.

Advertisement

ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು, ಅದಕ್ಕಾಗಿ ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು ಎಂಬ ಮೂಲ ಉದ್ದೇಶ ಇಟ್ಟುಕೊಂಡು ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗ ಅದರ ಮುಂದುವರಿದ ಭಾಗವಾಗಿ ಪಹಣಿಗೆ ಆಧಾರ್ ಜೋಡಣೆಯ ಮಹತ್ವದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದನ್ನು 'ನನ್ನ ಆಸ್ತಿ ನನ್ನ ಗುರುತು' ಎಂಬ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದೆ. ಸದ್ಯಕ್ಕೆ ರಾಜ್ಯದ ಕೆಲವೆಡೆ ಪೈಲಟ್ ಟ್ರಯಲ್ ಮಾದರಿಯಲ್ಲಿ ಕಾರ್ಯ ಆರಂಭವಾಗಿತ್ತು. ಇಂದಿನಿಂದ ಇದನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ.
ಇಂದು ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು, ನಮ್ಮ ಗ್ರಾಮಾಧಿಕಾರಿಗಳು 19 ಲಕ್ಷ ರೈತರನ್ನು ಸಂಪರ್ಕಿಸಿದ್ದಾರೆ. ಪಹಣಿ ಹಾಗೂ ಆಧಾರ್‌ ಜೋಡಣೆ ಸಂಬಂಧ 6 ಲಕ್ಷ ಪಹಣಿಗಳಿಗೆ ಸಂಬಂಧಿಸಿದಂತೆ ಅದರ ಖಾತೆದಾರರು ಮೃತಪಟ್ಟಿದ್ದಾರೆ. ಈ ರೀತಿ ಮೃತಪಟ್ಟವರ ಹೆಸರಿನಲ್ಲಿ ಪಹಣಿಗಳು ಇದ್ದರೆ ಅದು ದುರಪಯೋಗವಾಗುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಆಧಾರ್ ಜೋಡಣೆ ಮಾಡುವುದರಿಂದ ಯಾರದ್ದೋ ಆಸ್ತಿಯನ್ನು ಮತ್ಯಾರೋ ನೋಂದಣಿ ಮಾಡಿಸಿಕೊಳ್ಳುವಂತಹ ಅಕ್ರಮ ಕಾರ್ಯಗಳಿಗೆ ಕಡಿವಾಣ ಹಾಕಬಹುದು ಎಂದು ಕೃಷ್ಣ ಭೈರೇಗೌಡರವರು ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭೆ ಕಾಂಗ್ರೆಸ್ಸ್ ಅಭ್ಯರ್ಥಿಗಳ ಎರಡನೆಯ ಪಟ್ಟಿ ಪ್ರಕಟ, 43 ಅಭ್ಯರ್ಥಿಗಳ ಘೋಷಣೆ

Advertisement

ಇನ್ನು ಲೋಕಸಭಾ ಚುನಾವಣೆ ಘೋಷಣೆಯಾದರೂ ಸಹ ಅದರ ಮಧ್ಯೆಯೂ ಆಧಾರ್ ಜೋಡಣೆ ಕಾರ್ಯ ಮಾಡಬೇಕು ಎಂದು ಗ್ರಾಮಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು. ಅಲ್ಲದೆ ನಮ್ಮ ಗ್ರಾಮಾಧಿಕಾರಿಗಳೇ ಮನೆ ಮನೆಗೆ ತೆರಳಿ ಪಹಣಿ ಮತ್ತು ಆಧಾರ್ ಜೋಡಣೆ ಕಾರ್ಯ ಮಾಡುತ್ತಾರೆ. ಸಾರ್ವಜನಿಕರೂ ಸಹ ತಮ್ಮ ಸಮೀಪದ ಕಂದಾಯ ಕಚೇರಿಗೆ ತೆರಳಿ ಆಧಾರ್ ಜೋಡಣೆ ಮಾಡಿಸಲು ಸಹ ಅವಕಾಶ ನೀಡಲಾಗಿದೆ ಎಂದು ಸಚಿವರು ವಿವರವಾಗಿ ತಿಳಿಸಿದ್ದಾರೆ.

Board Exams: 5,8 ಮತ್ತು 9 ನೇ ತರಗತಿಗಳ ಬೋರ್ಡ್‌ ಪರೀಕ್ಷೆ ಸುಪ್ರೀಂ ತಡೆ, ಪರೀಕ್ಷೆ ಮುಂದೂಡಿಕೆ

Advertisement
Advertisement