ಬಂಟ್ವಾಳ : ಬೈಕ್‌ಗಳ ನಡುವೆ ಅಪಘಾತ -ಬಾಲಕಿ ಮೃತ್ಯು
ಬಂಟ್ವಾಳ : ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಜ.14ರ ರಾತ್ರಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.
11:19 AM Jan 15, 2025 IST
|
ಸುದರ್ಶನ್
UpdateAt: 11:19 AM Jan 15, 2025 IST
Advertisement
ಬಂಟ್ವಾಳ : ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಜ.14ರ ರಾತ್ರಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.
Advertisement
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ಸವಾರ ಬಾಲಕಿಯ ತಂದೆ ಅಬ್ದುಲ್ ರಹಮಾನ್ ಕೂಡ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ.ರೋಡ್ ಕಡೆಯಿಂದ ತುಂಬೆ ಕಡೆಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದ್ದು ರಂಜಿತ್ ಗೆ ಕೂಡ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.ಅಪಘಾತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ.
Advertisement
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement