For the best experience, open
https://m.hosakannada.com
on your mobile browser.
Advertisement

Actor Darshan: ಮತ್ತೆ ನಟ ದರ್ಶನ್‌ಗೆ ಜೈಲೇ ಗತಿ: ಆಗಸ್ಟ್‌ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್‌

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಗಳಾದ ದರ್ಶನ್ ಮತ್ತು ಸಹಚರರ (Darshan And Gang) ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್‌ ಆಗಸ್ಟ್‌ 14 ರವರೆಗೆ ವಿಸ್ತರಿಸಿದೆ.
03:41 PM Aug 01, 2024 IST | ಸುದರ್ಶನ್
UpdateAt: 03:50 PM Aug 01, 2024 IST
actor darshan  ಮತ್ತೆ ನಟ ದರ್ಶನ್‌ಗೆ ಜೈಲೇ ಗತಿ   ಆಗಸ್ಟ್‌ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ ಕೋರ್ಟ್‌
Advertisement

Actor Darshan: ಕೊಲೆ ಆರೋಪದ ಮೇಲೆ ಜೈಲು ಪಾಲಾಗಿರುವ ದರ್ಶನ್‌ ಮತ್ತೆ ಜೈಲಿನಲ್ಲೇ ಉಳಿಯುವಂತಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಗಳಾದ ದರ್ಶನ್ ಮತ್ತು ಸಹಚರರ (Darshan And Gang) ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್‌ ಆಗಸ್ಟ್‌ 14 ರವರೆಗೆ ವಿಸ್ತರಿಸಿದೆ.

Advertisement

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಹಾಜರುಪಡಿಸಲಾಯಿತು. ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಆರೋಪಿಗಳು, ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲಾಗಿತ್ತು.

ಎಸ್‌ಐಟಿ ಪೊಲೀಸರು (Kamakshipalya Police), ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್‌ಗೆ (Karnataka Highcourt) ಮನವಿ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ದರ್ಶನ್, ಪವಿತ್ರಾಗೌಡ, ಪವನ್, ಪ್ರದೂಷ್, ವಿನಯ್, ದೀಪಕ್ ಸೇರಿ 17 ಮಂದಿ ಅರೆಸ್ಟ್ ಆಗಿದ್ದು ಪುನಃ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಸ್‌ಐಟಿ ನ್ಯಾಯಾಧೀಶರ ಮುಂದೆ ರಿಮ್ಯಾಂಡ್‌ ಕಾಪಿಯನ್ನು ಸಲ್ಲಿಸಿ ಮನವಿ ಮಾಡಿತ್ತು.

Advertisement

ದರ್ಶನ್‌ ಮತ್ತು ಅವರ ಸಹಚರರ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಣೆ ಮಾಡಲು ಎಸ್‌ಐಟಿ ಪೊಲೀಸರು ಹತ್ತಕ್ಕೂ ಅಧಿಕ ಅಂಶಗಳ ರಿಮ್ಯಾಂಡ್ ಅಪ್ಲಿಕೇಷನ್ ಅನ್ನು ತಯಾರಿ ಮಾಡಿಕೊಂಡಿದ್ದರು. ಈ ಅಂಶಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಕೋರ್ಟ್‌ಗೆ ರಿಮ್ಯಾಂಡ್ ಅರ್ಜಿಯನ್ನು ಸಲ್ಲಿಸಿದರು.

Paris Olympics 2024: ಒಲಿಂಪಿಕ್ಸ್‌ನಲ್ಲಿ ಮುಂದುವರೆದ ಭಾರತದ ಪದಕದ ಬೇಟೆ : ರೈಫಲ್‌ನಲ್ಲಿ ಕಂಚು ಗೆದ್ದ ಸ್ವಪ್ನಿಲ್

Advertisement
Advertisement
Advertisement