Bappanadu Temple: ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಲ್ಲಿ ಮತ್ತೆ ಧರ್ಮ ದಂಗಲ್ ; ಅನ್ಯಮತೀಯರಿಗೆ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ಬೇಡ ಎಂಬ ಆಗ್ರಹ
Mangaluru: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಿ ದೇವಸ್ಥಾನವಾದ ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ(Bappanadu Durga Parameshwari Temple) ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಮಾತೊಂದು ಕೇಳಿ ಬಂದಿದೆ.
ಹಿಂದೂ ಜಾತ್ರಾ ವ್ಯಾಪರಸ್ಥರ ಸಂಘದ ಜಯರಾಮ್ ಶೆಟ್ಟಿಗಾರ್ ಅವರು ದೇವಸ್ಥಾನದ 150 ಮೀ. ವ್ಯಾಪ್ತಿಯೊಳಗೆ ಅನ್ಯಮತೀಯ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು ಹಾಗೂ ದೇವಸ್ಥಾನದ ವಠಾರದಲ್ಲಿ ಹಿಂದೂಗಳೇ ವ್ಯಾಪಾರ ಮಾಡಬೇಕು ಎಂದು ಮನವಿ ಮಾಡಿರುವುದಾಗಿ ಟಿವ9 ವರದಿ ಮಾಡಿದೆ.
ಇದನ್ನೂ ಓದಿ: Belthangady: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ; ಆರು ಮಂದಿ ವಶಕ್ಕೆ
ಕಳೆದ ವರ್ಷ ಈ ಕ್ಷೇತ್ರದಲ್ಲಿ ವ್ಯಾಪಾರದ ವಿಷಯದಲ್ಲಿ ಧರ್ಮ ದಂಗಲ್ ಸದ್ದು ಮಾಡಿತ್ತು. ಈ ಕ್ಷೇತ್ರದಲ್ಲಿ ಎಲ್ಲಾ ಜನರು ಜಾತ್ರೆ ಸಂದರ್ಭದಲ್ಲಿ ಮತ, ಧರ್ಮ ಮೀರಿ ಭಾಗವಹಿಸುತ್ತಾರೆ. ಆದರೆ ಕಳೆದ 2,3 ವರ್ಷಗಳಿಂದ ಇಲ್ಲಿ ಧರ್ಮ ದಂಗಲ್ ನಡೆಯುತ್ತಿದ್ದು, ಜಾತ್ರೆ ನಡೆಯುವ ಸಂದರ್ಭದಲ್ಲಿ ಇದು ಮತ್ತೆ ಎದ್ದು ಬಂದಿದೆ.