ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Belagavi: ಪುತ್ತೂರು ಮೂಲದ ನಟೋರಿಯಸ್‌ ಪಾತಕಿ ಜಯೇಶ್‌ ಪೂಜಾರಿ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ

Belagavi: ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಇದೀಗ ಜಿಲ್ಲಾ ನ್ಯಾಯಾಲಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಮಾಹಿತಿ ಬೆಳಕಿಗೆ ಬಂದಿದೆ.
02:03 PM Jun 12, 2024 IST | ಕಾವ್ಯ ವಾಣಿ
UpdateAt: 02:03 PM Jun 12, 2024 IST
Advertisement

Belagavi: ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಇದೀಗ ಜಿಲ್ಲಾ ನ್ಯಾಯಾಲಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಮಾಹಿತಿ ಬೆಳಕಿಗೆ ಬಂದಿದೆ.

Advertisement

ಕೇಂದ್ರ ಸರಕಾರದಿಂದ ಬಡವರಿಗೆ ಭರ್ಜರಿ ಉಡುಗೊರೆ!ಬಿಪಿಎಲ್ ಕಾರ್ಡ್ ಇದ್ದರೆ ಸಾಕು!

ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಎಂಬ ಕಿಡಿಗೇಡಿ ಬೆಳಗಾವಿ (Belagavi)ಹಿಂಡಲಗಾ ಜೈಲಿನಲ್ಲೇ ಇದ್ದುಕೊಂಡು ಕೇಂದ್ರ ಸಚಿವ ನಿತಿನ್​ ಗಡ್ಕರಿ (Nitin Gadkari)  ಮತ್ತು ಎಡಿಜಿಪಿ ಅಲೋಕ್​ ಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದನು. ಆದ್ದರಿಂದ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ಜಯೇಶ್ ಪೂಜಾರಿಯನ್ನು ಪೊಲೀಸರು ಇಂದು (ಜೂ.12) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯದಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಎಂಬ ಕಾರಣಕ್ಕೆ ಪಾಕಿಸ್ತಾನ (Pakistan) ಜಿಂದಾಬಾದ್ ಘೋಷಣೆ ಕೂಗಿದ್ದಾನೆ.

Advertisement

ಸದ್ಯ ಪಾತಕಿ ಜಯೇಶ್ ಪೂಜಾರಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗುತ್ತಿದ್ದಂತೆ ವಕೀಲರು ಮತ್ತು ಸಾರ್ವಜನಿಕರು ಆತನಿಗೆ ಧರ್ಮದೇಟು ನೀಡಿದರು. ಧರ್ಮದೇಟು ಬೀಳುತ್ತಿದ್ದಂತೆ ಪಾತಕಿ ಜಯೇಶ್ ಪೂಜಾರಿಯನ್ನು ರಕ್ಷಣೆ ಮಾಡಿ ಪೊಲೀಸರು ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಮಾಹಿತಿ ಪ್ರಕಾರ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಕಳೆದ ವರ್ಷ ಜನವರಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಮಾಡಿದ್ದನು. 10 ಕೋಟಿ ನೀಡದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಪ್ರಕರಣವನ್ನು ದಾಖಲಿಸಿಕೊಂಡು ಮಹಾರಾಷ್ಟ್ರ ಪೊಲೀಸರು ತನಿಖೆ ನಡೆಸಿದ ವೇಳೆ ಮಂಗಳೂರಿನ ಡಬಲ್ ಮರ್ಡರ್ ಆರೋಪಿ ಹಾಗೂ ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಜಯೇಶ್ ಪೂಜಾರಿ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದನು ಎಂದು ಪತ್ತೆಯಾಗಿತ್ತು. ಅಲ್ಲದೆ ಈತನಿಗೆ ಭಯೋತ್ಪಾದಕ ಅಫ್ಸರ್ ಪಾಷಾ ನಂಟಿರುವುದು ತಿಳಿದು ಬಂದಿದೆ.

ದಯವಿಟ್ಟು ಸೋಷಿಯಲ್ ಮೀಡಿಯಾ ಖಾತೆಗಳಿಂದ 'ಮೋದಿ ಕಾ ಪರಿವಾರ್' ತೆಗೆದು ಹಾಕಿ; ಪ್ರಧಾನಿ ಮೋದಿಯಿಂದ ಅಚ್ಚರಿ ಮನವಿ !!

Advertisement
Advertisement