Harish Poonja: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಳಿ ಅಂಕ ನಡೆಸಲು ಅನುಮತಿ ನೀಡಲು ಶಾಸಕ ಹರೀಶ್ ಪೂಂಜಾ ಆಗ್ರಹ!!
Harish Poonja: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ (Harish Poonja)ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಳಿ ಅಂಕ (Cock Fighting)ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆದಿದ್ದು, ಇದರಲ್ಲಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜಾ, ದಕ್ಷಿಣ ಕನ್ನಡ(Dakshina Kannada)ಜಿಲ್ಲೆಯಲ್ಲಿ ದೈವ - ದೇವಸ್ಥಾನಗಳಲ್ಲಿ ನೇಮ, ಕೋಲ ಉತ್ಸವಗಳ ಸಲುವಾಗಿ ಕೋಳಿ ಅಂಕ ನಡೆಯುತ್ತದೆ. ಕೋಳಿ ಅಂಕಗಳಿಗೆ(Cock Fighting)ಪೊಲೀಸರು ದಾಳಿ ಮಾಡುವ ಪ್ರಕರಣಗಳು ನಡೆಯುತ್ತಿದ್ದು, ಹೀಗಾಗಿ ಜಿಲ್ಲೆಯಲ್ಲಿ ದೈವಸ್ಥಾನ ದೇವಸ್ಥಾನಗಳಲ್ಲಿ ನೇಮ, ಕೋಲ ಉತ್ಸವಗಳ ನಂತರ ನಡೆಯುವ ಕೋಳಿ ಅಂಕಕ್ಕೆ ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಶಾಸಕ ಹರೀಶ್ ಪೂಂಜಾ ಮನವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿನಲ್ಲಿ ಕೋಳಿ ಅಂಕಕ್ಕೆ ಅನುಮತಿಯಿಲ್ಲದೆ ಹೋದರು ಕೂಡ ಹಿಂದಿನಿಂದಲೂ ಬಂದಿರುವ ಸಂಪ್ರದಾಯದ ಹಿನ್ನೆಲೆಯಲ್ಲಿ ಕೋಳಿ ಅಂಕ ನಡೆಸಲು ಅವಕಾಶವಿದೆ. ಪರಂಪರೆಯ ಕೋಳಿ ಅಂಕಕ್ಕೆ ಅನುಮತಿ ಬೇಕಾಗಿಲ್ಲ. ಆದರೆ ಐದಾರು ದಿನಗಳವರೆಗೆ ಕೋಳಿ ಅಂಕ ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.