For the best experience, open
https://m.hosakannada.com
on your mobile browser.
Advertisement

UP: ಉತ್ತರ ಪ್ರದೇಶ ರಾಜಕೀಯದಲ್ಲಿ ಮಹಾನ್ ಸಂಚಲನ? ಸಿಎಂ ಸ್ಥಾನದಿಂದ ಯೋಗಿಯನ್ನು ಕೆಳಗಿಳಿಸಲು BJP ಹೈಕಮಾಂಡ್ ಪ್ಲಾನ್?!

UP: ಸಿಎಂ ಆಗಿರುವ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(CM Yogi Adityanath) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ವೇದಿಕೆ ಸಜ್ಜಾಗಿದೆ ಎನ್ನಲಾಗಿದೆ.
09:02 AM Jul 18, 2024 IST | ಸುದರ್ಶನ್
UpdateAt: 09:02 AM Jul 18, 2024 IST
up  ಉತ್ತರ ಪ್ರದೇಶ ರಾಜಕೀಯದಲ್ಲಿ ಮಹಾನ್ ಸಂಚಲನ  ಸಿಎಂ ಸ್ಥಾನದಿಂದ ಯೋಗಿಯನ್ನು ಕೆಳಗಿಳಿಸಲು bjp ಹೈಕಮಾಂಡ್  ಪ್ಲಾನ್
Advertisement

UP: ಉತ್ತರ ಪ್ರದೇಶದ ರಾಜಕೀಯದಲ್ಲಿ ಮಹಾನ್ ಸಂಚಲನ ಎದುರಾಗುವ ಲಕ್ಷಣಗಳು ಕಂಡುಬರುತ್ತಿದ್ದು ದೇಶದ ಪ್ರಭಾವಿ ಸಿಎಂ ಆಗಿರುವ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(CM Yogi Adityanath) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ವೇದಿಕೆ ಸಜ್ಜಾಗಿದೆ ಎನ್ನಲಾಗಿದೆ.

Advertisement

ಹೌದು, ಉತ್ತರ ಪ್ರದೇಶ(UP) ರಾಜಕೀಯದಲ್ಲಿ ಸದ್ಯದಲ್ಲೇ ಮಹಾನ್ ಭೂಕಂಪ ಸಂಭವಿಸಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ(DCM Keshav Prasad Mourya) ಅವರು ಮಾಡಿರುವ ಟ್ವೀಟ್. ಈ ಟ್ವೀಟ್ ಮುಂದೆ ರಾಜಕೀಯದಲ್ಲಾಗುವ ಬಹು ದೊಡ್ಡ ಬದಲಾವಣೆಯ ಸುಳಿವು ನೀಡಿದಂತಿದೆ. ಅಲ್ಲದೆ ಯೋಗಿ ಆದಿತ್ಯನಾಥ್ ರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ವೇದಿಕೆ ಸಜ್ಜಾಗುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ.

ಕೇಶವ್ ಪ್ರಸಾದ್ ಮೌರ್ಯ ಮಾಡಿದ ಟ್ವೀಟ್ ಏನು? “ಸಂಘಟನೆ, ಸರ್ಕಾರಕ್ಕಿಂತಲೂ ದೊಡ್ಡದು. ಎಲ್ಲ ಕಾರ್ಯಕರ್ತರ ನೋವು ನನ್ನ ನೋವೂ ಆಗಿದೆ. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ. ಕಾರ್ಯಕರ್ತರೇ ನಮ್ಮ ಹೆಮ್ಮೆ” ಎಂದು ಹೇಳಿಕೊಂಡಿದ್ದಾರೆ. ಇದು ಉತ್ತರ ಪ್ರದೇಶ ರಾಜಕೀಯದಲ್ಲಿ ಬೀಸುವ ಬದಲಾವಣೆಯ ಗಾಳಿಯ ಸುಳಿವು ನೀಡಿದಂತಿದೆ.

Advertisement

ಅಲ್ಲದೆ ಕಾಕಾತಾಳೀಯವೆಂಬಂತೆ ಮೌರ್ಯ ಅವರು ಮಂಗಳವಾರದಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ(JP Nadda) ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ನಡ್ಡಾ ಅವರು ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದರ್ ಚೌಧರಿ(Bhoopendar Choudhary) ಅವರನ್ನು ಕೂಡ ಇದೇ ಸಂದರ್ಭದಲ್ಲಿ ಭೇಟಿ ಮಾಡಿದ್ದರು. ಈ ಭೇಟಿ ಬಳಿಕ ಕೇಶವ್ ಪ್ರಸಾದ್ ಮೌರ್ಯ ಈ ಪೋಸ್ಟ್ ಹಾಕಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ(Parliament Election )ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದ್ದು, ಈ ಕಾರಣಕ್ಕಾಗಿಯೇ ಯೋಗಿ ಆದಿತ್ಯನಾಥ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉತ್ತರ ಪ್ರದೇಶ ಸಿಎಂ ಸ್ಥಾನದಿಂದ ಯೋಗಿ ಆದಿತ್ಯನಾಥ್ ಅವರನ್ನು ಕೆಳಗಿಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದು, ಅದು ಈಗ ನಿಜವಾಗುತ್ತದಾ ಎಂಬ ಪ್ರಶ್ನೆ ಕೂಡ ಈಗ ರಾಜಕೀಯ ವಲಯದಲ್ಲಿ ಮೂಡಿದೆ.

ಆದರೆ ಯೋಗಿ ಆದಿತ್ಯನಾಥ್ ಅವರನ್ನು ಅಷ್ಟು ಸುಲಭವಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಸಾಧ್ಯವಾಗುತ್ತದಾ? ಮೋದಿ ಬಳಿಕ ಅವರೇ ದೇಶದ ಪ್ರಧಾನಿ ಆಗುತ್ತಾರೆ ಎಂದೆಲ್ಲಾ ಬಣ್ಣಿಸಲಾಗಿತ್ತು. ಹೀಗಾಗಿ ಹೈಕಮಾಂಡ್ ಈ ನಿರ್ಧಾರ ತಾಳಲು ಸಾಧ್ಯವೇ? ಎಂಬ ಪ್ರಶ್ನೆ ಸಹ ಕೇಳಿ ಬರುತ್ತಿದೆ.

School Holiday: ಬೈಂದೂರು, ಹೆಬ್ರಿ ತಾಲೂಕಿನ ಎಲ್ಲಾ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಣೆ

Advertisement
Advertisement
Advertisement