For the best experience, open
https://m.hosakannada.com
on your mobile browser.
Advertisement

MLC Election: ಬಿಜೆಪಿ-ಜೆಡಿಎಸ್ ಮೈತ್ರಿಗೆ ಪ್ರಾರಂಭದಲ್ಲೇ ದೊಡ್ಡ ಆಘಾತ !! ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಭರ್ಜರಿ ಗೆಲುವು

07:28 PM Feb 20, 2024 IST | ಹೊಸ ಕನ್ನಡ
UpdateAt: 07:28 PM Feb 20, 2024 IST
mlc election  ಬಿಜೆಪಿ ಜೆಡಿಎಸ್ ಮೈತ್ರಿಗೆ ಪ್ರಾರಂಭದಲ್ಲೇ ದೊಡ್ಡ ಆಘಾತ     ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಭರ್ಜರಿ ಗೆಲುವು
Advertisement

MLC Election: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಆರಂಬಿಕ ಹಂತದಲ್ಲೇ ದೊಡ್ಡ ಆಘಾತ ಎದುರಾಗಿದ್ದು, ಅಭ್ಯರ್ಥಿ ಸೋಲಾಗಿದೆ.

Advertisement

ಹೌದು, ಕರ್ನಾಟಕ ವಿಧಾನ ಪರಿಷತ್(Vidhanaparishath) ಸ್ಥಾನಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ರಂದು ಮತನಾದ ನಡೆದಿತ್ತು. ಈ ವೇಳೆ ಬಿಜೆಪಿ-ಜೆಡಿಎಸ್(BJP-JDS) ಮೈತ್ರಿ ಅಭ್ಯರ್ಥಿಗೆ ಸೋಲುಂಟಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿಯಿದೆ ಎನ್ನಲಾಗಿದೆ.

Advertisement

ಅಂದಹಾಗೆ ಉಪಚುನಾವಣೆಯಲ್ಲಿ ಕಾಂಗ್ರೆಸ್​ನ ಪುಟ್ಟಣ್ಣ(Puttanna) ಒಟ್ಟು 8,260 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರಿಗೆ ಒಟ್ಟು 6753 ಮತಗಳು ಬಿದ್ದಿವೆ. ಇನ್ನು 1239 ಮತಗಳು ತಿರಸ್ಕೃತಗೊಂಡಿವೆ. ಒಟ್ಟಿನಲ್ಲಿ ಕಾಂಗ್ರೆಸ್ ನ ಪುಟ್ಟಣ್ಣ 1506 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಗೊಂಡಿದ್ದ ಪುಟ್ಟಣ್ಣ ಅಂತಿಮವಾಗಿ ಎಪಿ ರಂಗನಾಥ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಪುಟ್ಟಣ್ಣ ಗೆಲುವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಪುಟ್ಟಣ್ಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಕಳೆದ ಮಾರ್ಚ್ ನಲ್ಲಿ ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.

Advertisement
Advertisement
Advertisement