ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Srinivas Prasad passed away: ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಿಧಿವಶ !!

Srinivas Prasad passed away: ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (76 ವ) ಅವರು ಮಧ್ಯರಾತ್ರಿ 1.20ರ ಸುಮಾರಿಗೆ ನಿಧನ ಹೊಂದಿದ್ದಾರೆ.
09:06 AM Apr 29, 2024 IST | ಸುದರ್ಶನ್
UpdateAt: 09:49 AM Apr 29, 2024 IST

Srinivas Prasad passed away: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (Srinivas Prasad passed away) (76 ವ) ಅವರು ಮಧ್ಯರಾತ್ರಿ 1.20ರ ಸುಮಾರಿಗೆ ನಿಧನ ಹೊಂದಿದ್ದಾರೆ.

Advertisement

ಇದನ್ನೂ ಓದಿ:  CET ಮರು ಪರೀಕ್ಷೆ ಇಲ್ಲ - ಮೇ ಅಂತ್ಯಕ್ಕೆ ರಿಸಲ್ಟ್ !!

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್‌ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ (Private Hospital) ನಸುಕಿನ ಜಾವ 1.20ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಅಸ್ಪತ್ರೆಗೆ ಎಪ್ರಿಲ್ 27ರಂದು ದಾಖಲಿಸಲಾಗಿತ್ತು.

Advertisement

ಇದನ್ನೂ ಓದಿ:  Annapurna Suicide Case: ಭೋಜ್‌ಪುರಿ ನಟಿ ಅಮೃತಾ ಪಾಂಡೆ ಆತ್ಮಹತ್ಯೆ

ಇದೀಗ ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಅವರ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗಿದ್ದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಸಾದ್‌ ಅವರಿಗೆ ಪತ್ನಿ, ಮೂವರು ಪುತ್ರಿಯರು (ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್ ಮತ್ತು ಪೂನಂ ಪ್ರಸಾದ್) ಇದ್ದಾರೆ.

ರಾಜಕೀಯ ನಡೆ:

• 1947ರ ಆಗಸ್ಟ್ 6ರಂದು ಮೈಸೂರಿನಲ್ಲಿ ಜನಿಸಿದ ವೆಂಕಟಯ್ಯ ಶ್ರೀನಿವಾಸ್ ಪ್ರಸಾದ್ ಅವರು ಮೈಸೂರು ಭಾಗದ ಪ್ರಮುಖ ದಲಿತ ನಾಯಕರಲ್ಲಿ ಒಬ್ಬರಾಗಿದ್ದರು.

• 1974ರಲ್ಲಿ ರಾಜಕೀಯಕ್ಕೆ ಪದಾರ್ಪಣೆ ಮಾಡಿದ ಅವರು 1980ರಲ್ಲಿ ಮೊದಲ ಬಾರಿಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸಂಸದರಾಗಿ ಲೋಕಸಭೆಗೆ ಕಾಲಿಟ್ಟರು. 1984, 1989, 1991ರಲ್ಲೂ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿದರು.

• 1999ರಿಂದ ಜೆಡಿಯು ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ 1999ರಿಂದ 2004ರವರೆಗೆ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

• 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

• 2016ರಲ್ಲಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಿಂದ ತೆಗೆದಾಗ ಮುನಿಸಿಕೊಂಡು ಬಿಜೆಪಿ ಸೇರಿದ್ದರು.

• 2019ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದು ಕಾಂಗ್ರೆಸ್ ನ ಆರ್ ಧ್ರುವನಾರಾಯಣ್ ಅವರನ್ನು ಸೋಲಿಸಿದ್ದರು.

ಕಳೆದ ತಿಂಗಳಷ್ಟೇ ನಿವೃತ್ತಿ ಘೋಷಣೆ:

ಸುದೀರ್ಘ 50 ವರ್ಷಗಳ ರಾಜಕೀಯ ಜೀವನದ ಅನುಭವ ಹೊಂದಿದ್ದ ಅವರು ಅನಾರೋಗ್ಯ ತೀವ್ರವಾಗಿ ಬಿಗಡಾಯಿಸಿದ್ದರಿಂದ ಕಳೆದ ತಿಂಗಳು ಸಕ್ರೀಯ ರಾಜಕೀಯದಿಂದ ನಿವೃತ್ತಿ ಹೊಂದುತ್ತಿರುವುದಾಗಿ ಮೈಸೂರಿನಲ್ಲಿ ಘೋಷಿಸಿದ್ದರು.

Advertisement
Advertisement
Next Article