For the best experience, open
https://m.hosakannada.com
on your mobile browser.
Advertisement

Board Exams: ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡಲು ಬೋರ್ಡ್‌ ಪರೀಕ್ಷೆ- ರಾಜ್ಯ ಸರಕಾರ

09:53 AM Mar 14, 2024 IST | ಹೊಸ ಕನ್ನಡ
UpdateAt: 10:35 AM Mar 14, 2024 IST
board exams  ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡಲು ಬೋರ್ಡ್‌ ಪರೀಕ್ಷೆ  ರಾಜ್ಯ ಸರಕಾರ
Advertisement

Board Exams: ರಾಜ್ಯದ ಎಲ್ಲ ಶಾಲೆಗಳಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡಲು ಶಿಕ್ಷಣ ಇಲಾಖೆ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುತ್ತಿದೆ ಎಂದು ರಾಜ್ಯ ಸರಕಾರ ಬುಧವಾರ ಹೈಕೋರ್ಟ್‌ಗೆ ತಿಳಿಸಿದೆ.

Advertisement

ಇದನ್ನೂ ಓದಿ: Pitbull Dog: ಪಿಟ್‌ಬುಲ್‌, ಬುಲ್‌ಡಾಗ್‌, ಅರ್ಜೆಂಟಿನೋ ತಳಿ ಸೇರಿ ಒಟ್ಟು ಸೇರಿ 20 ಕ್ಕೂ ಅಧಿಕ ತಳಿಗೆ ನಿಷೇಧಕ್ಕೆ ಶಿಫಾರಸು ಮಾಡಿದ ಕೇಂದ್ರ ಸರಕಾರ

ರಾಜ್ಯ ಪಠ್ಯ ಕ್ರಮ ಅಳವಡಿಸಿಕೊಂಡಿರುವ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ಸರಕಾರ ಹೊರಡಿಸಿದ್ದ ಎರಡು ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರಕಾರ ಸಲ್ಲಿಸಿರುವ ಮೇಲ್ಮನವಿ ಕುರಿತು ನ್ಯಾಯಮೂರ್ತಿಗಳು ದ ಕೆ.ಸೋಮಶೇಖರ್ ಮತ್ತು ರಾಜೇಶ್ ಕೆ. ರೈ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

Advertisement

ಇದನ್ನೂ ಓದಿ: AI Software Engineer: ವಿಶ್ವದ ಮೊದಲ 'ಎಐ' ಎಂಜಿನಿಯರ್ ಬಿಡುಗಡೆ, ಈತನ ಹೆಸರು ಡೆವಿನ್!

ವಾದ ಮಂಡಿಸಿದ್ದ ಹೆಚ್ಚುವರಿ ಅಡ್ವಕೇಟ್ ಜನರಲ್ ವಿಕ್ರಮ್ ಹುಯಿಲಗೋಳ, "ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ ವ್ಯವಸ್ಥೆ ಬೇಕಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆಗೆ ಮುಂದಾಗಿದೆ,'' ಎಂದರು.

'ಪರೀಕ್ಷೆಗಾಗಿ ಮಕ್ಕಳು ಹಲವು ದಿನಗಳಿಂದ ಸಿದ್ದತೆ ಮಾಡಿಕೊಂಡಿರುತ್ತಾರೆ. ಆದರೆ, ದಿನಾಂಕಗಳನ್ನು ಮತ್ತೆ ಮತ್ತೆ ಬದಲಾವಣೆ ಮಾಡುವುದರಿಂದ ವಿದ್ಯಾರ್ಥಿಗಳು ತೀವ್ರ ಗೊಂದಲಕ್ಕೆ ಸಿಲುಕುತ್ತಾರೆ. ಜತೆಗೆ, ರಾಜ್ಯ ಶಿಕ್ಷಣ ಇಲಾಖೆಗೆ ಆರ್‌ಟಿಐ ಕಾಯಿದೆಯಡಿ ಪರೀಕ್ಷೆ ನಡೆಸುವುದಕ್ಕೆ ಅವಕಾಶ ಇದೆ. ಕಳೆದ ವರ್ಷವೂ ಸುತ್ತೋಲೆ ಹೊರಡಿಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು,'' ಎಂದು ವಿವರಿಸಿದರು.

Advertisement
Advertisement
Advertisement