Bridge Collapse: ನಿರ್ಮಾಣ ಹಂತದ ಸೇತುವೆ ಕುಸಿತ : 1 ಸಾವು, 9 ಮಂದಿಗೆ ಗಂಭೀರ ಗಾಯ
ಶುಕ್ರವಾರ ಬೆಳಗ್ಗೆ ಬಿಹಾರದ ಭೇಜಾ-ಬಕೌರ್ ನಡುವಿನ ಮರೀಚಾ ಬಳಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ಕುಮಾರ್ ತಿಳಿಸಿದ್ದಾರೆ.
ಕೋಶಿ ನದಿಗೆ ಸೇತುವೆಯನ್ನು ನಿರ್ಮಿಸಲಾಗುತ್ತಿದ್ದು ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ಬಾಕುರ್ ಮತ್ತು ಭೇಜಾ ನಡುವಿನ ಮಾರೀಚ ಬಳಿ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ಕುಮಾರ್ ತಿಳಿಸಿದರು. ಈ ದುರಂತದಲ್ಲಿ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಂಭೀರ ಗಾಯಗಳಾಗಿವೆ. ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಇನ್ನು ಹೆಚ್ಚಿನ ಸಾವು ನೋವು ಸಂಭವಿಸಿರಬಹುದು ಎಂದು ತಿಳಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ ಗುರುವಾರ ಈಶಾನ್ಯ ದೆಹಲಿಯ ಸ್ವಾಗತ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು ಇನ್ನೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದವು.
ಎರಡು ಅಂತಸ್ತಿನ ಕಟ್ಟಡದ ಕುಸಿತದ ಬಗ್ಗೆ ಬೆಳಿಗ್ಗೆ 2:15 ರ ಸುಮಾರಿಗೆ ಈ ಘಟನೆ ಸಂಭವಿಸಿತ್ತು ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿ ತಿಳಿಸಿದ್ದಾರೆ. ಜಾಯ್ ಟಿರ್ಕಿ ಅವರು ಅದರ ಮೊದಲ ಮಹಡಿ ಖಾಲಿಯಾಗಿದ್ದು, ನೆಲ ಮಹಡಿಯನ್ನು ಜೀನ್ಸ್ ಫ್ಯಾಕ್ಟರಿಯಾಗಿ ಬಳಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಗಾರ್ಮೆಂಟ್ಸ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳು ಸಾವನ್ನಪ್ಪಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇನ್ನೂಬ್ಬ ಕಾರ್ಮಿಕನನ್ನು ಹೊರತೆಗೆದು ಜಿಟಿಬಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದರು.