C M Siddaramaiah: ಖಾಸಗಿ ಕಂಪೆನಿಗಳಲ್ಲಿ ಕನ್ನಡಿಗರಿಗೆ 100% ಮೀಸಲಾತಿ ಕುರಿತ ಸಿಎಂ ಟ್ವೀಟ್ ಡಿಲೀಟ್ - ದುಡ್ಡಿರುವವರ ವಿರೋಧಕ್ಕೆ ಮಣಿದರಾ ಸಿದ್ದರಾಮಯ್ಯ ?!
C M Siddaramaiah: ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಲ್ಲೂ ಸಿ ಮತ್ತು ಡಿ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಕಲ್ಪಿಸುವುದು, ಖಾಸಗಿ ಕಂಪೆನಿಗಳಲ್ಲಿ ಕನ್ನಡಿಗರಿಗೆ ಕಡ್ಡಾಯ ನೇಮಕಾತಿ ಸೇರಿದಂತೆ ಏಳು ವಿಧೇಯಕಗಳನ್ನು ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದದರು. ಆದರೆ ಇದೀಗ ಇದ್ದಕ್ಕಿದ್ದಂತೆ ಸಿಎಂ ಸಿದ್ದರಾಮಯ್ಯ(CM Siddaramaiah) ತಮ್ಮ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಹೌದು, ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ(Private Sector Reservation)ಕುರಿತು ಸಿಎಂ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್ ಡಿಲೀಟ್ ಆಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಟ್ವೀಟ್ ನಲ್ಲಿ ಯಾವುದಾದರೂ ತಪ್ಪಿರುವ ಕಾರಣಕ್ಕೆ ಡಿಲೀಟ್ ಮಾಡಲಾಯಿತಾ..? ಅಥವಾ ಬೇರೆ ಇನ್ಯಾವುದೋ ಕಾರಣಕ್ಕೆ ಟ್ವೀಟ್ ಡಿಲೀಟ್ ಆಯಿತಾ..? ಎಂಬ ಹಲವು ಪ್ರಶ್ನೆ ಹುಟ್ಟಿದೆ.
ಕೆಲವು ದಿನಗಳ ಹಿಂದೆ ಮಾಡಿದ ಟ್ವೀಟ್ ನಲ್ಲಿ ರಾಜ್ಯದಲ್ಲಿ ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಲ್ಲೂ ಸಿ ಮತ್ತು ಡಿ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಕಲ್ಪಿಸುವುದು ಸೇರಿದಂತೆ ಏಳು ವಿಧೇಯಕಗಳನ್ನು ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಇಷ್ಟೇ ಅಲ್ಲದೆ ರಾಜ್ಯದಲ್ಲಿನ ಭೂಮಿ, ನೀರು ಸೇರಿ ಮೂಲಸೌಕರ್ಯ ಪಡೆಯುವ ಕೈಗಾರಿಕೆಗಳು ಸ್ಥಳೀಯರಿಗೆ ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಇಲಾಖೆಯು ವಿಧೇಯಕ ರೂಪಿಸಿದ್ದು, ಇದಕ್ಕೆ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂಬ ವಿಚಾರಗಳನ್ನು ಹಂಚಿಕೊಂಡಿದ್ದರು.
H D Revanna: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್ ಡಿ ರೇವಣ್ಣ; ಪಕ್ಕೆಲುಬಿಗೆ ಪೆಟ್ಟು
ಕನ್ನಡಿಗರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಂಡಿರುವ ವಿಚಾರ ಇಡೀ ಕನ್ನಡಿಗರಿಗೆ ಖುಷಿ ಕೊಟ್ಟಿತ್ತು. ಆದರೆ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಕಲ್ಪಿಸಬೇಕು ಎಂಬ ಯೋಚನೆಗೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೈಗಾರಿಕೋದ್ಯಮಿಗಳ ವಿರೋಧ ವ್ಯಕ್ತಪಡಿಸಿದ್ದರು. ಈ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಆದರೆ ಇದೀಗ ಟ್ವೀಟ್ ಡಿಲೀಟ್ ಆಗಲು ಮುಖ್ಯ ಕಾರಣ ಮುಖ್ಯಮಂತ್ರಿಗಳು ಖಚಿತ ಮಾಹಿತಿ ನೀಡದೇ ಇರುವುದು ಎನ್ನಲಾಗಿದೆ. ಸಿ ಮತ್ತು ಡಿ ದರ್ಜೆ ಹುದ್ದೆಗಳಿಗೆ ಶೇ. 100 ರಷ್ಟು ಅನ್ನುವುದು ಇತ್ತು. ಆದರೆ ಬಿಲ್ ನಲ್ಲಿ ಆ ರೀತಿ ಇಲ್ಲ. ಮ್ಯಾನೇಜ್‌ಮೆಂಟ್ ಕೋಟಾದಲ್ಲಿ 50% ನಾನ್ ಮ್ಯಾನೇಜ್‌ಮೆಂಟ್ ಕೋಟಾ 70% ಎಂಬ ನಿಯಮ ಬಿಲ್ ನಲ್ಲಿ ಇದೆ. ಹೀಗಾಗಿ ಸಿಎಂ ನೂರಕ್ಕೆ ನೂರರಷ್ಟು ಅನ್ನುವ ಪದ ಬಳಕೆ ಟ್ವೀಟ್ ನಲ್ಲಿ ಮಾಡಿದ್ದಕ್ಕೆ ಡಿಲೀಟ್ ಆಗಿದೆ ಎನ್ನುವ ಪ್ರಶ್ನೆ ಎದ್ದಿದೆ. ಮತ್ತೊಂದೆಡೆ ಕೈಗಾರಿಕೋದ್ಯಮಿಗಳ ತೀವ್ರ ವಿರೋಧದ ಹಿನ್ನೆಲೆ ಅವರನ್ನು ವಿಶ್ವಾಸಕ್ಕೆ ಪಡೆದು ಮತ್ತೊಮ್ಮೆ ಪುನರ್ ಪರಿಶೀಲನೆ ಮಾಡುವ ಸಲುವಾಗಿ ಕೂಡ ಡಿಲೀಟ್ ಮಾಡಿರಬಹುದು ಎನ್ನಲಾಗಿದೆ. ಹೀಗಾಗಿಸಿಎಂ ಸಿದ್ದರಾಮಯ್ಯ ಟ್ವೀಟ್ ಡಿಲೀಟ್ ಆಗಿರುವ ಬಗ್ಗೆ ಸರ್ಕಾರ ಯಾವ ರೀತಿ ಸ್ಪಷ್ಟನೆ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.