For the best experience, open
https://m.hosakannada.com
on your mobile browser.
Advertisement

Free LPG Cylinder: ಗೃಹಿಣಿಯರೇ ಗಮನಿಸಿ, ಕೇಂದ್ರ ಸರ್ಕಾರ ನೀಡುತ್ತೆ ಉಚಿತ ಗ್ಯಾಸ್ ಸಿಲಿಂಡರ್; ಇಂದೇ ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡೆಯಿರಿ!!

02:51 PM Jan 16, 2024 IST | ಅಶ್ವಿನಿ ಹೆಬ್ಬಾರ್
UpdateAt: 02:51 PM Jan 16, 2024 IST
free lpg cylinder  ಗೃಹಿಣಿಯರೇ ಗಮನಿಸಿ  ಕೇಂದ್ರ ಸರ್ಕಾರ ನೀಡುತ್ತೆ ಉಚಿತ ಗ್ಯಾಸ್ ಸಿಲಿಂಡರ್   ಇಂದೇ ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡೆಯಿರಿ
Advertisement

Free LPG Cylinder:ಕೇಂದ್ರ ಸರ್ಕಾರ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಬಡ ಕುಟುಂಬಗಳಿಗಾಗಿ ಜಾರಿಗೆ ತಂದಿರುವ ಯೋಜನೆಯಾಗಿದೆ.ಈ ಯೋಜನೆಯ ಅಡಿಯಲ್ಲಿ ಫಲಾನುಭಾವಿಗಳಿಗೆ ಉಚಿತ LPG ಸಂಪರ್ಕಗಳನ್ನು (Free LPG Cylinder)ಒದಗಿಸಲಾಗುತ್ತದೆ.

Advertisement

ಬಡತನ ರೇಖೆಗಿಂತ ಕೆಳಗಿರುವಂತಹ ಕುಟುಂಬಗಳಿಗೆ ಈ ಯೋಜನೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಈ ಯೋಜನೆಯ ಲಾಭ ಪಡೆಯಲು ಆನ್‌ಲೈನ್‌ನಲ್ಲಿ ಕೂಡ ಅರ್ಜಿ ಸಲ್ಲಿಸಬಹುದು.ಈ ಯೋಜನೆಯಡಿ, ಫಲಾನುಭವಿಗಳಿಗೆ ಉಚಿತ ಎಲ್ ಪಿಜಿ ಮತ್ತು ಗ್ಯಾಸ್ ಸ್ಟವ್ ನೀಡಲಾಗುತ್ತದೆ. ನೀವು PMUYಗಾಗಿ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ, ನಿಮ್ಮ ಪ್ರದೇಶದ ಹತ್ತಿರದ ಎಲ್‌ಪಿಜಿ ವಿತರಕರನ್ನು ಸಂಪರ್ಕಿಸಬೇಕಾಗುತ್ತದೆ.

PMUY ಗಾಗಿ ಅರ್ಹತಾ ಮಾನದಂಡಗಳು ಹೀಗಿವೆ:

Advertisement

* ಅರ್ಜಿದಾರರು ಮಹಿಳೆಯಾಗಿರಬೇಕು.

* ಅರ್ಜಿದಾರರ ವಯೋಮಿತಿ 18 ವರ್ಷಕ್ಕಿಂತ ಹೆಚ್ಚಾಗಿರಬೇಕು.

* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ 1 ಲಕ್ಷಕ್ಕಿಂತ ಕಡಿಮೆ ಮತ್ತು ನಗರ ಪ್ರದೇಶದಲ್ಲಿ 2 ಲಕ್ಷಕ್ಕಿಂತ ಕಡಿಮೆಯಿರಬೇಕು.

* ಅರ್ಜಿದಾರರ ಕುಟುಂಬವು ಈಗಾಗಲೇ ಯಾವುದೇ LPG ಸಂಪರ್ಕವನ್ನು ಹೊಂದಿರಬಾರದು.

PMUYಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಹೀಗೆ ಮಾಡಿ:

# ಮೊದಲಿಗೆ, PMUY ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ.

# ಇದರ ನಂತರ, ."Apply for New Ujjwala 2.0 Connection" ಲಿಂಕ್ ಅನ್ನು ಕ್ಲಿಕ್ ಮಾಡಿಕೊಳ್ಳಿ.

# ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಆಧಾರ್‌ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ನಮೂದಿಸಿಕೊಳ್ಳಿ.

#"Send OTP" ಮೇಲೆ ಕ್ಲಿಕ್ ಮಾಡಿಕೊಳ್ಳಿ.

# ನಿಮ್ಮ ಮೊಬೈಲ್‌ನಲ್ಲಿ ಸ್ವೀಕರಿಸಿದ OTP ಅನ್ನು ನಮೂದಿಸಬೇಕು.

# ನಿಮ್ಮ ಹೆಸರು, ವಿಳಾಸ ಮತ್ತು ಅಗತ್ಯವಿರುವ ಇತರ ಮಾಹಿತಿಯನ್ನು ಭರ್ತಿ ಮಾಡಿಕೊಳ್ಳಿ.

# ನಿಮ್ಮ ಒಪ್ಪಿಗೆಯನ್ನು ನೀಡಿ ಮತ್ತು "Submit" ಬಟನ್ ಕ್ಲಿಕ್ ಮಾಡಬೇಕು

ಇದನ್ನೂ ಓದಿ: K S Chaitra: ಖ್ಯಾತ ಗಾಯಕಿ ಕೆಎಸ್‌ ಚಿತ್ರಾ ವಿರುದ್ಧ ಎಡಪಂಥೀಯರ ಸೈಬರ್‌ ದಾಳಿ: ಬೆಚ್ಚಿ ಬೀಳಿಸುತ್ತೆ ಇದರ ಹಿಂದಿನ ಕಾರಣ!!

Advertisement
Advertisement
Advertisement