For the best experience, open
https://m.hosakannada.com
on your mobile browser.
Advertisement

NEET ಪರೀಕ್ಷೆ ವಿರುದ್ಧ ಸಿಡಿದು ಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ- NTA ಮತ್ತು ಕೇಂದ್ರ ಸರ್ಕಾರದ ಮೌನದ ವಿರುದ್ಧ ವಾಗ್ದಾಳಿ

NEET: ನೀಟು ಪರೀಕ್ಷೆಯಲ್ಲಿ ಒಟ್ಟು 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕ ಗಳಿಸಿರುವ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಫಲಿತಾಂಶದ ಬಗ್ಗೆ ಅಘಾತ ವ್ಯಕ್ತಪಡಿಸಿದ್ದಾರೆ.
08:25 AM Jun 08, 2024 IST | ಸುದರ್ಶನ್
UpdateAt: 08:25 AM Jun 08, 2024 IST
neet ಪರೀಕ್ಷೆ ವಿರುದ್ಧ ಸಿಡಿದು ಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ  nta ಮತ್ತು ಕೇಂದ್ರ ಸರ್ಕಾರದ ಮೌನದ ವಿರುದ್ಧ ವಾಗ್ದಾಳಿ
Image Credit: Mint
Advertisement

NEET: ನೀಟು ಪರೀಕ್ಷೆಯಲ್ಲಿ ಒಟ್ಟು 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕ ಗಳಿಸಿರುವ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಫಲಿತಾಂಶದ ಬಗ್ಗೆ ಅಘಾತ ವ್ಯಕ್ತಪಡಿಸಿದ್ದಾರೆ.

Advertisement

ರ್ಯಾಪರ್‌ ಚಂದನ್‌ ಶೆಟ್ಟಿ ದಾಂಪತ್ಯದಲ್ಲಿ ಬಿರುಕು ; ಕೋರ್ಟ್‌ಗೆ ಕೈ ಕೈ ಹಿಡಿದುಕೊಂಡೇ ಬಂದ ನಿವಿ-ಚಂದನ್‌; ಫೋಟೋ ವೈರಲ್‌

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯನವರು, “ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವೂ ಉತ್ತರಿಸಿಲ್ಲ. ಕೇಂದ್ರ ಸರ್ಕಾರವು ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

“ನೀಟ್ (NEET) ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು‌ ಬಂದಿದೆ. ಆದರೆ, ಈ ಹಿಂದೆ ಬಂದ ಟಾಪರ್‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಘೋರವಾಗಿ ಬಡಿಯುತ್ತದೆ. 2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ ಬರೋಬ್ಬರಿ 67 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

“ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನೀಟ್‌ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕ ಗಳಿಸುವುದು ಅಸಾಧ್ಯವೇ ಸರಿ. ಇದು ಕಾಕತಾಳೀಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಮೋದಿ ಸರ್ಕಾರವೇ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಮೇಲ್ನೋಟಕ್ಕೆ ಪರೀಕ್ಷಾ ಅಕ್ರಮ ನಡೆದಿರುವುದು ಸ್ಪಷ್ಟವಾಗಿ ಕಂಡುಬಂದರೂ ಎನ್‌ಟಿಎ ಮತ್ತು ಮೋದಿ ಸರ್ಕಾರ ಈ ಫಲಿತಾಂಶವನ್ನು ಸಮರ್ಥಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಸೋಲಿನಿಂದಲೂ ಪಾಠ ಕಲಿತಂತೆ ಕಾಣುತ್ತಿಲ್ಲ” ಎಂದು ಅವರು ಹೇಳಿದ್ದಾರೆ. ಒಟ್ಟಾರೆ ದೇಶ ವಾಪಿಯಾಗಿ ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ನಿಧಾನವಾಗಿ ಅಕ್ರೋಶಗಳು ಮತ್ತು ಪ್ರತಿಭಟನೆಗಳು ಏರುತ್ತಿವೆ.

Neet ವಿದ್ಯಾರ್ಥಿಗಳ ಸಾವಿನ ಸರಮಾಲೆ; ರಾಜಸ್ಥಾನದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

Advertisement
Advertisement
Advertisement