Anna Hazare: ಸಿಎಂ ಅರವಿಂದ ಕೇಜ್ರಿವಾಲ್ ಬಂಧನ ವಿಚಾರ - ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿ ಅಣ್ಣಾ ಹಜಾರೆ ಹೇಳಿದ್ದಿಷ್ಟು !!
Anna Hazare: ಹಗರಣದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನದ ಆಗಿದ್ದು ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ಕುರಿತು ಅವರ ಒಂದು ಕಾಲದ ಒಡನಾಡಿ, ಗುರು ಅಣ್ಣಾ ಹಜಾರೆ(Anna Hazare) ಅಸಮಾಧಾನದಿಂದಲೇ ಪ್ರತಿಕ್ರಿಯಿಸಿದ್ದಾರೆ.
ಹೌದು, ಒಂದು ಕಾಲದಲ್ಲಿ ಲೋಕಪಾಲನೀತಿ ಜಾರಿಗೆ ತರಲು 2010 ರ ದಶಕದ ಆರಂಭದಲ್ಲಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಲೋಕಪಾಲ್ ಚಳವಳಿಯ ನೇತೃತ್ವ ವಹಿಸಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಅರವಿಂದ ಕೇಜ್ರಿವಾಲ್(Arvind kejriwal) ಅವರ ಬಂಧನದ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಇದು ಅವರೇ ಮಾಡಿದ ಕೆಲಸಗಳಿಂದಾಗಿ ಅನುಭವಿಸುತ್ತಿರುವ ಫಲ. ಅದಕ್ಕಾಗಿಯೇ ಜಾರಿ ನಿರ್ದೇಶನಾಲಯವು ಬಂಧಿಸಿದೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
ಈ ಬಗ್ಗೆ ಮಹಾರಾಷ್ಟ್ರ(Maharastra)ದ ಅಹಮದ್ ನಗರದಲ್ಲಿ ಮಾತನಾಡಿದ ಅಣ್ಣಾ ಹಜಾರೆ, ಅರವಿಂದ ಕೇಜ್ರಿವಾಲ್ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ನನ್ನ ಜೊತೆ ಹಲವು ಹೋರಾಟದಲ್ಲಿ ಪಾಲ್ಗೊಂಡಿರುವ ಅರವಿಂದ್ ಕೇಜ್ರಿವಾಲ್ ಮದ್ಯದ ವಿರುದ್ದ ಧ್ವನಿ ಎತ್ತಿದ್ದರು. ಹೋರಾಟ ಮಾಡಿದ್ದರು. ಆದರೆ ಈಗ ಅದೇ ಮದ್ಯ ನೀತಿ ಮಾಡಿ ಬಂಧನವಾಗಿದ್ದಾರೆ. ಆದರೆ ಅವರ ಕೃತ್ಯದಿಂದಲೇ ಬಂಧನವಾಗಿದೆ. ಈಗ ಅವರೇನು ಮಾಡುತ್ತಾರೆ? ಅಧಿಕಾರದ ಮುಂದೆ ಏನೂ ನಡೆಯುವುದಿಲ್ಲ. ಈಗ ಬಂಧನವಾಗಿದೆ. ಇನ್ನು ಕಾನೂನು ಪ್ರಕಾರ ಏನು ಆಗಬೇಕು ಅದು ನಡೆಯಲಿದೆ ಹೇಳಿದ್ದಾರೆ.
ಅಲ್ಲದೆ ನನ್ನೊಂದಿಗೆ ಕೆಲಸ ಮಾಡುತ್ತಿದ್ದ ಮತ್ತು ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ಅರವಿಂದ್ ಕೇಜ್ರಿವಾಲ್ ಅವರಂತಹ ವ್ಯಕ್ತಿ ಇಂದು ಮದ್ಯ ನೀತಿಯನ್ನು ಸಿದ್ಧಪಡಿಸುತ್ತಿದ್ದಾರೆ ಎಂದು ನನಗೆ ತುಂಬಾ ದುಃಖವಾಗಿದೆ ಎಂದು ಅವರು ಹೇಳಿದರು.