ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Siddaramaiah: ಕನ್ನಡಿಗರಿಗೆ ಗುಡ್​ನ್ಯೂಸ್​! ಇಂತವರಿಗೆ 5 ಲಕ್ಷ ಪ್ರೋತ್ಸಾಹಧನ ಘೋಷಿಸಿದ ಸಿಎಂ ಸಿದ್ದರಾಮಯ್ಯ!

Siddaramaiah ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮಾಹಿತಿ ನೀಡಿದ್ದಾರೆ.
10:07 AM Jul 22, 2024 IST | ಕಾವ್ಯ ವಾಣಿ
UpdateAt: 10:08 AM Jul 22, 2024 IST
Advertisement

Siddaramaiah: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಿಗರಿಗೆ ಗುಡ್​ನ್ಯೂಸ್​ ಒಂದನ್ನು ನೀಡಿದ್ದಾರೆ. ಹೌದು, ಪ್ಯಾರಿಸ್ ಒಲಂಪಿಕ್ಸ್​ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮಾಹಿತಿ ನೀಡಿದ್ದಾರೆ.

Advertisement


ಇದೇ ತಿಂಗಳು ಜುಲೈ 26 ರಿಂದ ಪ್ರಾರಂಭವಾಗುವ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics) ಭಾರತದಿಂದ (Indian) 117 ಕ್ರೀಡಾಪಟುಗಳು (Athletes) ಭಾಗವಹಿಸಲಿದ್ದಾರೆ. ಈ 117 ಕ್ರೀಡಾಪಟುಗಳ ಪೈಕಿ ಕರ್ನಾಟಕದ (Karnataka) ಒಂಬತ್ತು ಮಂದಿ ಇದ್ದಾರೆ. ಈ ಒಂಬತ್ತು ಮಂದಿಗೆ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಲಾ ಐದು ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಈ ಕುರಿತು, ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ಯಾರಿಸ್ ಒಲಂಪಿಕ್ಸ್​ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

Advertisement

ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರಿಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್​ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್​ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದು, ಇದು ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ.

ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್‌ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಮನದುಂಬಿ ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ.

ಇನ್ನು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕೆ.ಗೋವಿಂದರಾಜು ಅವರು ಕರ್ನಾಟಕದಿಂದ ಭಾರತವನ್ನು ಪ್ರತಿನಿಧಿಸುತ್ತಿರುವ 9 ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಬೇಕು ಎಂದು ಮನವಿ ಮಾಡಿದ್ದು, ಅವರ ಮನವಿಗೆ ಸ್ಪಂದಿಸಿ ಈ ಘೋಷಣೆ ಮಾಡಲಾಗಿದೆ.

Mashco Piro: ಪ್ರಪ್ರಥಮ ಬಾರಿಗೆ ಹೊರ ಜಗತ್ತಿಗೆ ಕಾಣಿಸಿಕೊಂಡ ‘ಮಾಶ್ಕೊ ಪಿರೋ’ ಬುಡಕಟ್ಟು ಜನಾಂಗ !! ಇದಕ್ಕಿಂದ್ದಂತೆ ಇವರು ಹೊರಟದ್ದೆಲ್ಲಿಗೆ ?

 

Related News

Advertisement
Advertisement