For the best experience, open
https://m.hosakannada.com
on your mobile browser.
Advertisement

CM Siddaramaiah: ಅಪರೇಶನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ - ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

07:14 AM Mar 23, 2024 IST | ಹೊಸ ಕನ್ನಡ
UpdateAt: 07:21 AM Mar 23, 2024 IST
cm siddaramaiah  ಅಪರೇಶನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ   ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

‘ಆಪರೇಷನ್ ಕಮಲ’ (Operation Kamala) ಮತ್ತೆ ಸುದ್ದಿ ಮಾಡಿದೆ. ಅದರ ಭಾಗವಾಗಿ ಇದೀಗ ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ರಾಜೀನಾಮೆ ನೀಡಲು ಬಿಜೆಪಿ ಪಕ್ಷವು ತಲಾ 50 ಕೋಟಿ ರೂಪಾಯಿಗಳ ಆಮಿಷ ಒಡ್ಡುತ್ತಿದೆ, ಅಲ್ಲದೆ ಅವರು ರಾಜೀನಾಮೆ ನೀಡಿ, ನಂತರ ನಡೆಯೋ ಉಪಚುನಾವಣೆಯಲ್ಲೂ ಕೂಡಾ ಹಣ ನೀಡುವುದಾಗಿ ಭರವಸೆ ನೀಡುತ್ತಿದೆ ಎನ್ನುವ ಗಂಭೀರ ಆರೋಪವನ್ನು ಮುಖ್ಯಮಂತ್ರಿ (CM Siddaramayya) ಸಿದ್ದರಾಮಯ್ಯ, ನಿನ್ನೆ ಶುಕ್ರವಾರ ಮಾಡಿದ್ದಾರೆ.

Advertisement

ಇದನ್ನೂ ಓದಿ: Pratap Simha: ಟಿಕೆಟ್ ಕೈ ತಪ್ಪುತ್ತಿದ್ದಂತೆ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಪ್ರತಾಪ್ ಸಿಂಹ!!

ನಿನ್ನೆ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ "ಆಪರೇಷನ್ ಕಮಲ" ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಈ ಪ್ರಯತ್ನ ಇವತ್ತೂ ಕೂಡಾ ನಡೆಯುತ್ತಿದೆ. ಈಗ ಶಾಸಕರಿಗೆ ಐವತ್ತು ಕೋಟಿ ಆಫರ್ ನೀಡುತ್ತಿದ್ದಾರೆ. ನೀವು ರಾಜೀನಾಮೆ ಕೊಡಿ, ನಿಮ್ಮ ಚುನಾವಣಾ ಖರ್ಚನ್ನು ನಾವೇ ನೋಡಿಕೊಳ್ಳುತ್ತೇವೆ ಎಂಬ ಭರವಸೆಯನ್ನು ಅವರು ಕೊಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ನವರು ಗುರುತರವಾದ ಆರೋಪವನ್ನು ಮಾಡಿದ್ದಾರೆ. ಈ ಎಲ್ಲಾ ಹಣ ಎಲ್ಲಿಂದ ಬರುತ್ತದೆ? ಇದು ಕಪ್ಪು ಹಣ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Advertisement

ಇದನ್ನೂ ಓದಿ: Bengaluru: ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ಹೆದುರಿಸುತ್ತಿದ್ದ ದುಷ್ಕರ್ಮಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

"ಎಲ್ಲೆಲ್ಲೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದೆ, ಆದ್ರೆ ಅಕ್ರಮ ಆಸ್ತಿ ಗಳಿಸಿದ ಶ್ರೀಮಂತರು ಕೇವಲ ವಿರೋಧ ಪಕ್ಷಗಳಲ್ಲಿ ಮಾತ್ರ ಇದ್ದಾರೆಯೇ? ಬಿಜೆಪಿಯಲ್ಲಿ ಯಾರೂ ಇಲ್ಲವೇ? ಅವರು ಭ್ರಷ್ಟಾಚಾರದ ಪಿತಾಮಹರು. ಕರ್ನಾಟಕದಲ್ಲಿ ಬಿಜೆಪಿ ಈ ಹಿಂದೆಯೂ ಆಪರೇಷನ್ ಕಮಲ ನಡೆಸಿತ್ತು. ಆಗ ರಾಜೀನಾಮೆ ನೀಡಿದ ಶಾಸಕರಿಗೆ ಕೋಟಿ ಕೋಟಿ ರೂಪಾಯಿ ಹಣವನ್ನು ನೀಡಿತ್ತು ಮತ್ತು ಉಪಚುನಾವಣೆಗಳಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಖರ್ಚು ಎಂದು ಸಿದ್ದರಾಮಯ್ಯನವರು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಪಕ್ಷವು ಪ್ರಜಾಪ್ರಭುತ್ವದ ಮೌಲ್ಯವನ್ನು ನಾಶ ಮಾಡುತ್ತಿದೆ. ಈಗ ಜನರ ಅಭಿಪ್ರಾಯ ಅವರ ಪರವಾಗಿಲ್ಲ ಎಂದು ಗೊತ್ತಾಗಿದೆ. ಅದಕ್ಕಾಗಿ ಈಗ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಜನರ ದಾರಿ ತಪ್ಪಿಸುವ ಪ್ರಯತ್ನ ನಡೆಸುತ್ತಿದೆ. ಕೇಂದ್ರ ಸರ್ಕಾರದ ನಡೆ ಖಂಡನೀಯ. ಇಡಿ, ಐಟಿ ದಾಳಿ ಕೇವಲ ವಿರೋಧ ಪಕ್ಷಗಳ ಮೇಲೆ ಏಕೆ? ಎಂದು ಅವರು ಪ್ರಶ್ನಿಸಿದರು.

Advertisement
Advertisement