ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Karnataka Politics: ಅಜ್ಞಾತ ಸ್ಥಳಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ, ದಿಢೀರ್ ಪತ್ರಿಕಾಗೋಷ್ಠಿ ಕರೆದ ಡಿಕೆಶಿ !! ರಾಜ್ಯ ರಾಜಕೀಯದಲ್ಲಿ ಸಂಚಲನ

Karnataka Politics: ಸಿಎಂ ಸಿದ್ದರಾಮಯ್ಯ(CM Siddaramaiah) ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
08:13 AM Aug 02, 2024 IST | ಸುದರ್ಶನ್
UpdateAt: 08:26 AM Aug 02, 2024 IST
Advertisement

Karnataka Politics: ರಾಜ್ಯದಲ್ಲಿ ಭಾರೀ ಸದ್ದುಮಾಡುತ್ತಿರುವ ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರು ಭಾರೀ ಇರುಸು ಮುರುಸು ಅನುಭವಿಸುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿ(BJP) ಕೂಡ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮೈಸೂರು ಪಾದಯಾತ್ರೆಗೆ ಸಿದ್ಧತೆ ನಡೆಸಿದೆ. ಈ ಬೆನ್ನಲ್ಲೇ ಸದ್ಯ ಸಿಎಂ ಸಿದ್ದರಾಮಯ್ಯ(CM Siddaramaiah) ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

Advertisement

ಹೌದು ಕಾವೇರಿ ನಿವಾಸದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಮುಡಾ’(MUDA) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ಎಂಬವರ ದೂರಿನನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜು.26ರಂದು ರಾಜ್ಯಪಾಲರು ಶೋಕಾಸ್ ನೋಟೀಸ್ ಅನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ(ಆ 1) ನಡೆದ ಸಚಿವ ಸಂಪುಟದಿಂದ ಸಿಎಂ ಸಿದ್ದರಾಮಯ್ಯ ಹೊರಗೆ ಉಳಿದಿದ್ದರು. ಇದಾದ ನಂತರ ಅವರು ಅಜ್ಞಾತ ಸ್ಥಳಕ್ಕೆ ಹೋಗಿದ್ದಾರೆ ಎನ್ನಲಾಗಿದೆ.

ಡಿಕೆಶಿ ತುರ್ತು ಸುದ್ದಿಗೋಷ್ಠಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಿಂದ ಹೊರಗೆ ಉಳಿದಿದ್ದರಿಂದ ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(D K Shivkumar)ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಇದಾದ ಬಳಿಕ ಇಂದು ಸಂಜೆ 4 ಗಂಟೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯಪಾಲರು ಮುಖ್ಯಮಂತ್ರಿ ಅವರಿಗೆ ನೀಡಿದ ನೋಟಿಸ್ ಪಡೆಯಬೇಕು ಎಂದು ಮನವಿ ಮಾಡಿದರು.

Advertisement

ಅಲ್ಲದೆ ಅಬ್ರಹಾಂ ಅವರು ದೂರು ಕೊಟ್ಟ ದಿನವೇ ರಾಜ್ಯಪಾಲರು ಸಿಎಸ್ ಬಳಿ ವರದಿ ಕೇಳಿದ್ದಾರೆ. ಸಂವಿಧಾನದ ಕಗ್ಗೊಲೆ, ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ಪರಿಸ್ಥಿತಿ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ. ಕಾನೂನು ಮತ್ತು ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನ ಬಳಸಿಕೊಂಡಿದೆ ಎಂದು ಹರಿಹಾಯ್ದರು.

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್ – ವೈರಲ್ ವಿಡಿಯೋಗಳು ಅಸಲಿ ಎಂದ FSL ವರದಿ !!

Related News

Advertisement
Advertisement