ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

School Rules: ರಾಜ್ಯದ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ: ರಾಜ್ಯ ಸರ್ಕಾರ ಆದೇಶ!

School Rules: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
02:12 PM Jul 04, 2024 IST | ಕಾವ್ಯ ವಾಣಿ
UpdateAt: 02:14 PM Jul 04, 2024 IST
Advertisement

School Rules: ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯ ಹೆಚ್ಚಳದಿಂದ ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದ್ದು, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆ ಎಂಬ ಹಿನ್ನಲೆಯಲ್ಲಿ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

Advertisement

ಹೌದು, ವಿದ್ಯಾರ್ಥಿಗಳು ತರಗತಿಗಳಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದು, ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಇದರೊಂದಿಗೆ ಅನೇಕ ಪಾಲಕ-ಪೋಷಕರು ಕೂಡಾ ಅನೇಕ ಸಂದರ್ಭಗಳಲ್ಲಿ ಆತಂಕ ವ್ಯಕ್ತಪಡಿಸಿರುತ್ತಾರೆಂಬ ಅಂಶ ಸರ್ಕಾರಕ್ಕೆ ಮನವರಿಕೆ ಆಗಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ.

Advertisement

ಸದ್ಯ ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ (1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ. ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ.

ಒಂದು ವೇಳೆ ಮೊಬೈಲ್ ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು - ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು. ಸದ್ಯ ಈ ನಿಷೇದವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಜವಾಬ್ದಾರಿ/ಅಧಿಕಾರ ವ್ಯಾಪ್ತಿ ನಿಗಧಿಪಡಿಸಲಾಗಿದೆ.

Gold Price Hike: ಆಭರಣ ಪ್ರಿಯರಿಗೆ ಕಹಿ ಸುದ್ದಿ! ಚಿನ್ನ ದರದಲ್ಲಿ ಏರಿಕೆ!

 

Advertisement
Advertisement