ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Parliament Election: ಬಿಜೆಪಿ 40% ಕಮಿಶನ್ ಆರೋಪ : ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ ನ್ಯಾಯಾಲಯ

Parliament Election: ರಾಹುಲ್ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ.
10:38 AM Mar 29, 2024 IST | ಸುದರ್ಶನ್

Parliament Election: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿದ್ದ ಶೇ.40 ಕಮಿಷನ್‌ ಜಾಹೀರಾತು ಕುರಿತಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಎಐಸಿಸಿ ನಾಯಕ ರಾಹುಲ್ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

Advertisement

ಇದನ್ನೂ ಓದಿ: Crime: ಪ್ರಿಯತಮೆಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು

ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾ‌ರ್ ಇಬ್ಬರಿಗೂ ಏಪ್ರಿಲ್ 29 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ಸಮನ್ಸ್ ಕಳುಹಿಸಲಾಗಿದೆ. ಚುನಾವಣಾ ಬದ್ಧತೆಗಳಿಂದಾಗಿ ನ್ಯಾಯಾಲಯಕ್ಕೆ ಹಾಜರಾಗಲು ವಿನಾಯಿತಿಗಾಗಿ ಅವರ ವಕೀಲರು ಅರ್ಜಿ ಸಲ್ಲಿಸಲು ಪ್ರಯತ್ನಿಸಿದಾಗಲೂ, ಜೂನ್ 1 ರಂದು ರಾಹುಲ್ ಗಾಂಧಿ ಹಾಜರಾಗುವಂತೆ ತಿಳಿಸಿದೆ.

Advertisement

ಇದನ್ನೂ ಓದಿ: Ph.D: ಪಿಎಚ್ ಡಿ ಪ್ರವೇಶಕ್ಕೆ ಇನ್ನು ಮುಂದೆ 'ಎನ್ ಇಟಿ' ಅಂಕ ಪರಿಗಣನೆ

ಕಳೆದ ವರ್ಷ ಜೂನ್‌ನಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.ಕೇಶವಪ್ರಸಾದ್ ಅವರು ಸರ್ಕಾರಿ ಗುತ್ತಿಗೆಗಳಲ್ಲಿ 40% ಕಮಿಷನ್ ಪಡೆದು 1.5 ಲಕ ಕೋಟಿ ಲೂಟಿ ಮಾಡಿದ್ದಾರೆ ಎಂದು ಜಾಹೀರಾತು ಪ್ರಕಟಿಸಿದ್ದಕ್ಕಾಗಿ ಮೇ 9 ರಂದು ದೂರು ಸಲ್ಲಿಸಿದ ನಂತರ ನ್ಯಾಯಾಲಯವು ನಾಯಕರಿಗೆ ಮತ್ತೆ ಸಮನ್ಸ್ ನೀಡಿತ್ತು. ರಾಜ್ಯದಲ್ಲಿ ಈ ಜಾಹೀರಾತು ಬಿಜೆಪಿಯ ಪ್ರತಿಷ್ಠೆಗೆ ಮಸಿ ಬಳಿದಿದೆ ಎಂದು ಕೇಶವಪ್ರಸಾದ್‌ ಆರೋಪಿಸಿದ್ದಾರೆ.

ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದ ಸಂದರ್ಭದಲ್ಲಿ, ಬಿಜೆಪಿ ಪ್ರತಿ ಸರ್ಕಾರಿ ಗುತ್ತಿಗೆಯಲ್ಲೂ 40% ಲಂಚ ಪಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಬಿಜೆಪಿಯನ್ನು ಮೂಲೆಗುಂಪು ಮಾಡಿತ್ತು.

Advertisement
Advertisement
Next Article