ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Covid-19: ರಾಜ್ಯದಲ್ಲಿ ಕೋವಿಡ್ ಹೆಚ್ಚಳ- ಇಂತವರು ತಪ್ಪದೇ ಈ ಇಂಜೆಕ್ಷನ್ ಹಾಕಿಸಿಕೊಳ್ಳಿ !!

01:33 PM Jan 04, 2024 IST | ಹೊಸ ಕನ್ನಡ
UpdateAt: 01:35 PM Jan 04, 2024 IST
Advertisement

Covid-19: ದೇಶಾದ್ಯಂತ ಕೋವಿಡ್ 4ನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿಯೂ ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಹೀಗಾಗಿ ಇಂತವರು ಕೋರ್ಬಿವ್ಯಾಕ್ಸ್(Corbiwax) ಲಸಿಕೆಯನ್ನು ಪಡೆಯಬೇಕೆಂದು ಸರ್ಕಾರ ಸೂಚನೆ ನೀಡಿದೆ.

Advertisement

ಹೌದು, ಕೋವಿಡ್(Covid-19) ಹೆಚ್ಚಳ ಭೀತಿಯಿಂದ ಸರ್ಕಾರ ಕೆಲವು ನಿಯಮಗಳನ್ನು ಈಗಾಗಲೇ ಜಾರಿಗೊಳಿಸಿದೆ. 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯಬೇಕೆಂದು ಸರ್ಕಾರ ಸೂಚನೆ ನೀಡಿದೆ.

ಯಾರು ಈ ಲಸಿಕೆ ಪಡೆಯಬೇಕು?

Advertisement

18 ವರ್ಷ ಮೇಲ್ಪಟ್ಟವರು, 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಆರೋಗ್ಯ ಕಾರ್ಯಕರ್ತೆಯರು, ಮುಂಚೂಣಿ ಕಾರ್ಯಕರ್ತೆಯರು ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣಕ್ಕೆ ಬಾಕಿ ಇರುವ ಫಲಾನುಭವಿಗಳು ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯುಬಹುದು.

ಇದನ್ನು ಓದಿ: Vastu Tips For Floor:ಮನೆಯಲ್ಲಿ ಟೈಲ್ಸ್ ಹಾಕುವ ಮುನ್ನ, ವಾಸ್ತು ಶಾಸ್ತ್ರದ ಈ ಸಂಗತಿಗಳನ್ನು ತಿಳಿದುಕೊಳ್ಳಿ!!

ಸದ್ಯ ಎಲ್ಲಿ ಸಿಗುತ್ತೆ ಈ ಲಸಿಕೆ?

ಮಡಿಕೇರಿ ಮತ್ತು ತಾಲ್ಲೂಕು ಆಸ್ಪತ್ರೆ, ಸೋಮವಾರಪೇಟೆ ಮತ್ತು ವಿರಾಜಪೇಟೆಗೆ ಭೇಟಿ ನೀಡಿ ಜನವರಿ, 04 ರಿಂದ ಲಸಿಕೆಯನ್ನು ಉಚಿತವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಅವರು ತಿಳಿಸಿದ್ದಾರೆ.

Advertisement
Advertisement