For the best experience, open
https://m.hosakannada.com
on your mobile browser.
Advertisement

Cauvery Water Dispute: ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತ- ಇಷ್ಟು ನೀರು ಬಿಡಲೇಬೇಕು ಎಂದ CWRC

04:06 PM Nov 23, 2023 IST | ಕಾವ್ಯ ವಾಣಿ
UpdateAt: 04:06 PM Nov 23, 2023 IST
cauvery water dispute  ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತ  ಇಷ್ಟು ನೀರು ಬಿಡಲೇಬೇಕು ಎಂದ cwrc
image source: Hindustan times
Advertisement

Cauvery Water Dispute:  ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ದೆಹಲಿಯಲ್ಲಿ ಗುರುವಾರ ನಡೆದಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery Water Dispute) ಸಂಬಂಧ ಚರ್ಚೆ ನಡೆದು, ಪ್ರತಿನಿತ್ಯ 2700 ಕ್ಯೂಸೆಕ್ ನೀರು ಬಿಡುವಂತೆ CWRC ಸೂಚನೆ ನೀಡಿದೆ.

Advertisement

ಮಾಹಿತಿ ಪ್ರಕಾರ CWRC, ಡಿಸೆಂಬರ್ ಅಂತ್ಯದವರೆಗೂ ನೀರು ಬಿಡಲು ಹೇಳಿದ್ದು. ಬಾಕಿ ಇರುವ 7.5ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬಾಕಿ ಬಿಡಬೇಕಾಗಿದ್ದ ನೀರನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಸೂಚನೆ ನೀಡಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಬಾಕಿ ಬಿಡಬೇಕಾಗಿದ್ದ ನೀರನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳಿನಲ್ಲಿ ಬಿಡುವಂತೆ ಕರ್ನಾಟಕಕ್ಕೆ ಶಿಫಾರಸ್ಸು ಮಾಡಲಾಗಿದೆ. ಸಭೆಯಲ್ಲಿ ಹಳೇ ಬಾಕಿ ನೀರು ಬಿಡಲು ತಮಿಳುನಾಡು ಆಗ್ರಹಿಸಿತು. ಹಳೇ ಬಾಕಿ 11 tmc ನೀರು ಬಿಡಲು ಬಾಕಿ ಇದೆ. ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿತು.

Advertisement

ಸದ್ಯ ಚೆನ್ನೈನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಅದನ್ನು ಶೇಖರಣೆ ಮಾಡುವ ಬಗ್ಗೆ ತಮಿಳುನಾಡು ಸರಕಾರ ಯಾವುದೇ ಚಿಂತನೆ ನಡೆಸುತ್ತಿಲ್ಲ. ತಮಿಳುನಾಡಿನಲ್ಲಿ ಮಳೆ ಹೆಚ್ಚಾದ್ರೆ ಪುನಃ ನೀರು ಕರ್ನಾಟಕ ಪಡೆಯಲು ಸಾಧ್ಯ ಇಲ್ಲ. ಅಲ್ಲದೇ ಮೆಟ್ಟೂರು ಜಲಾಶಯದಿಂದ ತಮಿಳುನಾಡು ತುಂಬ ಕಡಿಮೆ ಪ್ರಮಾಣದಲ್ಲಿ ನೀರು ಬಿಡುತ್ತಿದೆ. ಹಾಗಾಗಿ ಕರ್ನಾಟಕ ದಿಂದ ಪುನಃ ನೀರು ಬಿಡಲು ಸಾಧ್ಯ ಇಲ್ಲ ಎಂಬುದು ಕರ್ನಾಟಕದ ವಾದವಾಗಿದೆ.

ಅದಲ್ಲದೆ ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿಯ ಜಲಾಶಯಗಳಲ್ಲಿ ನೀರಿನ ಸಂಗ್ರಹ ತಳ ಸೇರುತ್ತಿದೆ. ಸಂಕಷ್ಟದ ನಡುವೆಯೂ ಕಾವೇರಿ ಪ್ರಾಧಿಕಾರದ ಸೂಚನೆಯಂತೆ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಈ ಮಧ್ಯೆ, ತಮಿಳುನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ, ಕರ್ನಾಟಕದಿಂದ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸಲು ರಾಜ್ಯದ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ.

ಇದನ್ನು ಓದಿ: MP Nalin Kumar Kateel :ನಾನು ಈ ಕೆಲಸ ಮಾಡಿಯೇ ಇಲ್ಲ ಎಂದು ಕಟೀಲು ದೇವರ ಮೇಲೆ ನಳಿನ್ ಕುಮಾರ್ ಪ್ರಮಾಣ - ಯಾವ ಕೆಲಸವದು ?!

Advertisement
Advertisement
Advertisement