ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Dakshina Kannada:ಕರಾವಳಿ ಭಾಗದಲ್ಲಿ ನಳೀನ್ ಕುಮಾರ್ ಕಟೀಲ್ ಅವರಿಗೆ ಲೋಕಸಭಾ ಟಿಕೇಟ್ ಡೌಟ್?!: ಕಮಲ ಪಾಳಯದಲ್ಲಿ ಯಾರು ಊಹಿಸದ ಅಚ್ಚರಿಯ ಬೆಳವಣಿಗೆ!!

10:11 AM Jan 25, 2024 IST | ಅಶ್ವಿನಿ ಹೆಬ್ಬಾರ್
UpdateAt: 10:13 AM Jan 25, 2024 IST
Advertisement

Dakshina Kannada : ಲೋಕಸಭಾ ಚುನಾವಣೆಗೆ (Lok Sabha Constituency)ಕೆಲವು ತಿಂಗಳು ಬಾಕಿ ಇರುವ ನಡುವೆ ನಳಿನ್ ಕುಮಾರ್ ಕಟೀಲ್ ಹಾಲಿ ಸಂಸದರಾಗಿರುವ ದಕ್ಷಿಣ ಕನ್ನಡ(Dakshina Kannada) ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್( Lok Sabha Constituency Ticket Race)ಲಾಬಿ ಜೋರಾಗಿ ನಡೆಯುತ್ತಿದೆ. ಈ ನಡುವೆ, ಕಮಲ ಪಾಳಯದಲ್ಲಿ ಸ್ಪರ್ಧಿ ಕುರಿತು ಭಾರೀ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

Advertisement

ಇದನ್ನೂ ಓದಿ: Puttur: ಮಿನಿ ಟೆಂಪೋ ನಿಲ್ಲಿಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಚಾಲಕ

ಬಿಜೆಪಿಯ ಭದ್ರಕೋಟೆ ಎಂದೇ ಖ್ಯಾತಿ ಪಡೆದ ಕರಾವಳಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಕಾಂಗ್ರೆಸ್ ಅಸ್ಥಿತ್ವ ಸಾಧಿಸಲು ಹಿಂದಿನಿಂದಲೂ ಪ್ರಯತ್ನಿಸುತ್ತಿದೆ. ಸದ್ಯ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸಂಸದರಾಗಿರುವ ದಕ್ಷಿಣ ಕನ್ನಡದಲ್ಲಿ ಅಚ್ಚರಿಯ ಬೆಳವಣಿಗೆ ಕಂಡುಬರುತ್ತಿದೆ. ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ (Captain Brijesh Chowta) ಅವರು ಬಿಜೆಪಿ ಟಿಕೆಟ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.

Advertisement

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದರು ಕೂಡ ಈ ಬಾರಿ ಲೊಕಸಭಾ ಚುನಾವಣೆಯಲ್ಲಿ ಕಟೀಲ್ ಅವರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಕರಾವಳಿ ಬಿಜೆಪಿ ಕಾರ್ಯಕರ್ತರು ಹಾಗೂ ಸಂಘಟನೆ ಕಾರ್ಯಕರ್ತರಲ್ಲಿ ಕಟೀಲ್ ಬಗ್ಗೆ ಒಲವು ಕಮ್ಮಿಯಾಗಿದೆ. ಕಾರ್ಯಕರ್ತರ ಅಭಿಪ್ರಾಯವನ್ನು ಕಡೆಗಣಿಸಿ ಕಟೀಲ್ಗೆ ಟಿಕೆಟ್ ನೀಡಿದರೆ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಾದ ಬಂಡಾಯದ ಬಿಸಿ ಲೋಕಸಭಾ ಚುನಾವಣೆಯಲ್ಲಿ ಮರುಕಳಿಸುವ ಸಂಭವ ಹೆಚ್ಚಿದೆ.

ಪಕ್ಷದ ಹಿತದೃಷ್ಟಿಯಿಂದ ಈ ಬಾರಿ ಹೊಸ ಮುಖಕ್ಕೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ. ಬ್ರಿಜೇಶ್ ಚೌಟಾ(Captain Brijesh Chowta) ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ನ ಪ್ರಬಲ ಆಕಾಂಕ್ಷಿ ಎನ್ನಲಾಗಿದೆ. ಮತ್ತೊಂದೆಡೆ ಇವರು ಆರ್ಎಸ್ಎಸ್ ಹಿನ್ನೆಲೆಯುಳ್ಳ ಕಾರಣದಿಂದ ಚೌಟಾ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Advertisement
Advertisement