ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Nalin Kumar Kateel: ಟಿಕೆಟ್‌ ಕೈ ತಪ್ಪುವ ಸುಳಿವು; ನಳಿನ್‌ ಕುಮಾರ್‌ ಕಟೀಲ್‌ ಭಾವುಕ ಮಾತು

11:37 AM Mar 12, 2024 IST | ಹೊಸ ಕನ್ನಡ
UpdateAt: 11:52 AM Mar 12, 2024 IST
Advertisement

Nalin Kumar Kateel: ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಲೋಕಸಭಾ ಎಲೆಕ್ಷನ್‌ (Lok Sabha Election) ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ಪ್ರಕಟ ಮಾಡಿದೆ. ಈ ಕುರಿತು ಮಂಗಳೂರಿನಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರು ಭಾವುಕರಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಇದನ್ನೂ ಓದಿ: Dakshina Kannada: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಗೌಡ ಬುಡ್ಲೆ ಗುತ್ತು ಆಯ್ಕೆ

ಪಕ್ಷವು ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು ಎಂದು ನಳಿನ್ ಹೇಳಿದರು. ನಾವು ಪಕ್ಷ ಏನೇ ಹೇಳಿದರೂ ಮಾಡುತ್ತೇವೆ. ಪಕ್ಷದವರು ನಮ್ಮ ಬಳಿ ಗುಡಿಸು ಎಂದರೆ ಗುಡಿಸುತ್ತೇವೆ. ಒರೆಸು ಎಂದು ಹೇಳಿದರೆ ಒರೆಸುತ್ತೇವೆ. ನಮಗೆ ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕೋ ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ. ಸಾಮಾಜಿಕ ಜಾಲತಾಣಗಳ ಚರ್ಚೆ ಬಗ್ಗೆ ನಾನು ಹೆಚ್ಚು ತಲೆಕಡಿಸಿಕೊಳ್ಳುವುದಿಲ್ಲ. ನಾವು ಕಾರ್ಯವನ್ನು ನಂಬಿರುವಂಥವರು. ಕಾರ್ಯಕರ್ತರ ಆಧಾರದಲ್ಲಿ ಬೆಳೆದವರು ಎಂದು ಹೇಳಿರುವುದಾಗಿ ಟಿವಿ9 ಕನ್ನಡ ವರದಿ ಮಾಡಿದೆ.

Advertisement

ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿರುವುದನ್ನು ರಾತ್ರಿ ನೋಡಿದೆ. ರಾಷ್ಟ್ರೀಯ ನಾಯಕರು ಯಾವ ತೀರ್ಮಾನ ತಗೊಂಡರೂ ಅದು ಪಾರ್ಟಿಯ ತೀರ್ಮಾನ. ಆ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ನನಗೂ ಮೂರು ಬಾರಿ‌ ಅವಕಾಶ ನೀಡಿದ್ದಾರೆ. ಹದಿನೈದು ವರ್ಷ ಕೆಲಸ ಮಾಡಿದ್ದೇನೆ. ಪಕ್ಷ ಈ ಬಗ್ಗೆ ನಿರ್ಧಾರ ಮಾಡುತ್ತದೆ. ನಮ್ಮ ಪಾರ್ಟಿಯಲ್ಲಿ ತುಳಿಯುವ ಕೆಲಸ ಆಗಲ್ಲ. ಅದರ ಬದಲಿಗೆ ಬೆಳೆಸುವ ಕೆಲಸ ಕಾರ್ಯ ಆಗುತ್ತದೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಬಂದವನು. ಸಂಘದ ಕಾರ್ಯಕ್ಕೋಸ್ಕರ ಬಂದಿದ್ದು. ಬಿಜೆಪಿ ಕೆಲಸ ಮಾಡು ಎಂದಾಗ ಮಾಡಿದೆ. ಲೋಕಸಭೆ ಚುನಾವಣೆಗೆ ನಿಲ್ಲು ಎಂದರು, ಸ್ಪರ್ಧಿಸಿದೆ. ಆ ಬಳಿಕ ರಾಜ್ಯಾಧ್ಯಕ್ಷನೂ ಆದೆ. ಯಾವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ ರಾಜ್ಯಾಧ್ಯಕ್ಷ ಆಗುತ್ತಾರೆ ಎಂದು ನಳಿನ್ ಪ್ರಶ್ನಿಸಿದರು ಎಂದು ಟಿವಿ9 ವರದಿ ಮಾಡಿದೆ.

ಬಿಜೆಪಿಯಲ್ಲಿ ಯಾರನ್ನೂ ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ. ಅವಕಾಶ ಸಿಕ್ಕಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ. ಎಲ್ಲರನ್ನೂ ಪಾರ್ಟಿ ಬೆಳೆಸಿದೆ. ಟಿಕೆಟ್ ಸಿಕ್ಕಿಲ್ಲ ಎಂದ ಕೂಡಲೇ ಅಂಥವರನ್ನು ಕೈಬಿಟ್ಟಿದೆ ಎಂದು ಅರ್ಥ ಅಲ್ಲ. ಮುಂದಕ್ಕೆ ಬಹಳಷ್ಟು ಅವಕಾಶ ಸಿಗಬಹುದು. ಪಕ್ಷದ ಕೆಲಸ ಮಾಡೋದಕ್ಕೂ ಜನ ಬೇಕಲ್ಲ. ಈ ಬಗ್ಗೆ ಯೋಚನೆ ಮಾಡಿಕೊಂಡೇ ರಾಷ್ಟ್ರೀಯ ನಾಯಕರು ಪಟ್ಟಿ ಘೋಷಣೆ ಮಾಡುತ್ತಾರೆ. ನಾವು ಸಂಘಟನೆ ಕಾರ್ಯ ಮಾಡುವವರು, ಹೀಗಾಗಿ ಯಾವುದೇ ಅಸಮಾಧಾನ ಇಲ್ಲ ಎಂದು ಕಟೀಲ್ ಹೇಳಿದರು ಎಂದು ಟಿವಿ9 ಕನ್ನಡ ವರದಿ ಮಾಡಿದೆ.

Advertisement
Advertisement