ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Dakshina Kananda: ಹೆಚ್ಚಿದ ವರುಣನ ಆರ್ಭಟ; ನಾಳೆ (ಜೂ.28) ರಂದು ದ.ಕ. ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ- ಡಿಸಿ ಆದೇಶ

Dakshina Kananda: ನಾಳೆ ಕೂಡಾ (ಜೂ.28) ರಂದು ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ. ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಅವರು ಆದೇಶ ಮಾಡಿದ್ದಾರೆ.
06:48 PM Jun 27, 2024 IST | ಸುದರ್ಶನ್
UpdateAt: 07:48 PM Jun 27, 2024 IST
Advertisement

Dakshina Kananda: ಕರಾವಳಿ ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಕಾರಣ ನಾಳೆ ಕೂಡಾ (ಜೂ.28) ರಂದು ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ (ಪಿಯು ಕಾಲೇಜಿಗಳಿಗೆ) ರಜೆ ಘೋಷಣೆ ಮಾಡಿ ದ. ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಅವರು ಆದೇಶ ಮಾಡಿದ್ದಾರೆ.

Advertisement

ಅಂಗನವಾಡಿ-ಅನುದಾನಿತ ಖಾಸಗಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಆದೇಶ ನೀಡಿದ್ದಾರೆ.

ಇದರ ಜೊತೆಗೆ ಮೀನುಗಾರರು ಕೂಡಾ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಹಲವು ದಿನಗಳಿಂದ ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

Advertisement

ಮಳೆಯ ಜೊತೆಗೆ ಗಾಳಿಯ ರಭಸ ಹೆಚ್ಚಿರುವುದರಿಂದ ಅಲ್ಲಲ್ಲಿ ಮರಗಳು, ವಿದ್ಯುತ್‌ ಕಂಬಗಳು ಬಿದ್ದಿರುವ ಘಟನೆಗಳು ವರದಿಯಾಗುತ್ತಲೇ ಇದೆ. ಜೊತೆಗೆ ಅವಘಡಗಳು ಕೂಡಾ ಸಂಭವಿಸಿದೆ. ಹೀಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

ಜಿಲ್ಲಾಡಳಿತದ ಪ್ರಕಟಣೆ ಹೀಗಿದೆ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 28-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.

1) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ: 28-06-2024 ರಂದು ರಜೆಯನ್ನು ಘೋಷಿಸಲಾಗಿದೆ.
2) ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ
3) ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.
4) ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

5) ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಸಮೀಪ ಹೋಗದಂತೆ ಎಚ್ಚರಿಕೆವಹಿಸುವುದು.
6) ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.
7) ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.

Advertisement
Advertisement