For the best experience, open
https://m.hosakannada.com
on your mobile browser.
Advertisement

Vijayalakshmi Darshan: ಇದ್ದಕ್ಕಿದ್ದಂತೆ ಶಾಕಿಂಗ್ ಪೋಸ್ಟ್ ಹಂಚಿಕೊಂಡ ದರ್ಶನ್ ಪತ್ನಿ ವಿಜಯಲಕ್ಷ್ಮೀ!!

Vijayalakshmi Darshan: ವಿಜಯಲಕ್ಷ್ಮೀ ಅವರು ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಒಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
10:06 PM Jun 26, 2024 IST | ಸುದರ್ಶನ್
UpdateAt: 10:06 PM Jun 26, 2024 IST
vijayalakshmi darshan  ಇದ್ದಕ್ಕಿದ್ದಂತೆ ಶಾಕಿಂಗ್ ಪೋಸ್ಟ್ ಹಂಚಿಕೊಂಡ ದರ್ಶನ್ ಪತ್ನಿ ವಿಜಯಲಕ್ಷ್ಮೀ
Advertisement

Vijayalakshmi Darshan: ನಟ ದರ್ಶನ್ ಅವರು ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿಕೊಂಡಿದ್ದಾರೆ. ಕೆಲವು ದಿನಗಳ (ಜೂನ್ 24)ಹಿಂದಷ್ಟೇ ಅವರ ಪತ್ನಿ ವಿಜಯಲಕ್ಷ್ಮಿ, ದರ್ಶನ್(Vijayalakshmi Darshan) ಅವರನ್ನು ಭೇಟಿ ಮಾಡಿ ಬಂದಿದ್ದರು. ಈ ಬೆನ್ನಲ್ಲೇ ವಿಜಯಲಕ್ಷ್ಮೀ ಅವರು ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಒಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

Advertisement

ಹೌದು, ನಟ ದರ್ಶನ್(Actor Darshan)ಅವರಿಗೆ ಕೇಡು ಬಯಸಿದವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ. ಆದರೆ, ದರ್ಶನ್ ಅಭಿಮಾನಿಗಳು ತಾಳ್ಮೆ ಕಳೆದುಕೊಂಡು ಮಾತನಾಡದೇ ಶಾಂತಿಯಿಂದ ಇರಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿರುವ ವಿಜಯಲಕ್ಷ್ಮೀ ನಮಗೆ ನ್ಯಾಯ ಸಿಕ್ಕೇ ಸಿಗುತ್ತೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ?
ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು" ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.

Advertisement

ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನ ಅವರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ' ಎಂದು ಪೋಸ್ಟ್ ಅನ್ನು ಬರೆದುಕೊಂಡದ್ದಾರೆ. ಇದನ್ನು ಇಂಗ್ಲೀಷ್‌ನಲ್ಲಿಯೂ ತರ್ಜುಮೆ ಮಾಡಿ ಮತ್ತೊಂದು ಪೋಸ್ಟ್ ಅನ್ನೂ ಹಂಚಿಕೊಂಡಿದ್ದಾರೆ.

ಅಂದಹಾಗೆ ನಟ ದರ್ಶನ್ ತೂಗುದೀಪ ಅವರನ್ನು ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಈ ಮಧ್ಯೆ ಸೆಂಟ್ರಲ್‌ ಜೈಲಿನಲ್ಲಿರುವ ಪತಿ ದರ್ಶನ್‌ರನ್ನು ವಿಜಯಲಕ್ಷ್ಮಿ ಅವರು ಭೇಟಿಯಾಗಿ, ಮಾತನಾಡಿಸಿಕೊಂಡು ಬಂದಿದ್ದಾರೆ. ಈ ವೇಳೆ ದರ್ಶನ್ ತುಂಬ ಭಾವುಕರಾಗಿದ್ದರು. ಆದರೆ ಹೆಂಡತಿ ಭೇಟಿ ಬಳಿಕ ನಿಶ್ಚಿಂತೆಯಿಂದ ಇದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು.

https://www.instagram.com/p/C8rf8CGolVI/?igsh=MXdieHJnbHppc2IycQ==

Advertisement
Advertisement
Advertisement