ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Dengue Fever: ಸರ್ಕಾರದಿಂದ ಡೆಂಗ್ಯೂ ಜ್ವರ ಟೆಸ್ಟ್ ಮಾಡಲು ದರ ನಿಗಧಿ: ಖಾಸಗಿ ಆಸ್ಪತ್ರೆಗಳಿಗೂ ದರ ನಿಯಮ ಅನ್ವಯ!

Dengue Fever: ಡೆಂಗ್ಯೂ ಜ್ವರ (Dengue Fever) ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಒಂದನ್ನು ಹೊರಡಿಸಿದೆ.
10:33 AM Jul 04, 2024 IST | ಕಾವ್ಯ ವಾಣಿ
UpdateAt: 10:33 AM Jul 04, 2024 IST
Advertisement

Dengue Fever: ರಾಜ್ಯದೆಲ್ಲೆಡೆ ಮಹಾಮಾರಿ ಡೆಂಗ್ಯೂ ಜ್ವರ ಜನರನ್ನು ಆವರಿಸಿದ್ದು, ಜನಸಾಮಾನ್ಯರು ಡೆಂಗ್ಯೂ ಜ್ವರದ ಚಿಕಿತ್ಸೆಗಾಗಿ ಅಲೆದಾಡುವ ಪರಿಸ್ಥಿತಿ ಬಂದಿದೆ. ಇನ್ನು ಖಾಸಗಿ ಆಸ್ಪತ್ರೆ, ಲ್ಯಾಬ್ ಗಳಲ್ಲಿ ಡೆಂಗ್ಯೂ ಟೆಸ್ಟ್ ಮಾಡಲು ಹೆಚ್ಚಿನ ಹಣ ದೋಚುತ್ತಿದ್ದಾರೆ. ಆದ್ದರಿಂದ ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯೂ ಜ್ವರ (Dengue Fever) ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಒಂದನ್ನು ಹೊರಡಿಸಿದೆ.

Advertisement

Murder: ಏಳು ಪೊಲೀಸರನ್ನೇ ‌ಹತ್ಯೆ ಮಾಡಿದ್ದ ನಕ್ಸಲ್‌ ಚಂದ್ರ ಮುತ್ಯಾಲು ಬಂಧನ!

Advertisement

ಪ್ರಸ್ತುತ ಡೆಂಗ್ಯೂ ಜ್ವರಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಕೂಡ ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್‌ಗೆ ಬೆಲೆ ವಿಧಿಸುತ್ತಿದ್ದಾರೆ. ಅದಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗ್ಯೂ ಟೆಸ್ಟಿಂಗ್ ಗೆ ದರ ನಿಗದಿಪಡಿಸಿದೆ.

ಸದ್ಯ ಡೆಂಗ್ಯೂ ಜ್ವರದ ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ ಗಳನ್ನ ನಿಗದಿಪಡಿಸಲಾಗಿದೆ. ಸದ್ಯ ಈ ದರ ನಿಗಧಿಯಂತೆ ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗ್ಯೂ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ.

ಈ ಕುರಿತು ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್  ಸಭೆಯನ್ನು ಕರೆದಿದ್ದು, ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗಿ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾದ ನಿಟ್ಡಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.

Bharat Rice: APL-BPL ಪಡಿತರ ಚೀಟಿ ಹೊಂದಿರುವವರಿಗೆ ಬಿಗ್‌ ಶಾಕಿಂಗ್‌ ನ್ಯೂಸ್‌

Related News

Advertisement
Advertisement