ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

D K Shivakumar: ಮೇಕೆದಾಟು ವಿಚಾರದಲ್ಲಿ ದೇವೇಗೌಡರ ನಿಲುವನ್ನು ಬೆಂಬಲಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

D K Shivakumar: ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಹೇಳಿಕೆ ಡಿ ಕೆ ಶಿವಕುಮಾ‌ರ್ ಸ್ವಾಗತಿಸಿದ್ದಾರೆ.
11:28 AM Mar 26, 2024 IST | ಸುದರ್ಶನ್
UpdateAt: 11:32 AM Mar 26, 2024 IST
Advertisement

D K Shivakumar: ಎರಡು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಜೆಡಿಎಸ್ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಹೇಳಿಕೆಯನ್ನು ಡಿ ಕೆ ಶಿವಕುಮಾ‌ರ್ ಸ್ವಾಗತಿಸಿದ್ದಾರೆ.

Advertisement

ಇದನ್ನೂ ಓದಿ: Puttur KSRTC Bus Stop: ಪುತ್ತೂರು ಬಸ್‌ಸ್ಟಾಪ್‌ನಲ್ಲಿ ಚೂರಿ ಇರಿತ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಾವು ಮಾಡಿದ "ನಮ್ಮ ನೀರು, ನಮ್ಮ ಹಕ್ಕು" ಹೋರಾಟಕ್ಕೆ ಮಾಜಿ ಪ್ರಧಾನಿ ಶ್ರೀ ದೇವೇಗೌಡ ಅವರು ಧ್ವನಿಗೂಡಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ .

Advertisement

ಇದನ್ನೂ ಓದಿ: UAE Arrested 45 Beggars: ರಂಜಾನ್ ಸಮಯದಲ್ಲಿ ಯುಎಇಯಲ್ಲಿ 45 ಭಿಕ್ಷುಕರ ಬಂಧನ

ಈಗ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆಯನ್ನಾದರೂ ಮನಗಂಡು ಕೇಂದ್ರ ಸರಕಾರ ಮೇಕೆದಾಟು ಆಣೆಕಟ್ಟು ಯೋಜನೆಗೆ ಅನುಮತಿ ನೀಡುತ್ತದೆ ಎಂಬ ವಿಶ್ವಾಸ ನನ್ನದು. ಈ ಎಲ್ಲ ಸಮಸ್ಯೆಗಳನ್ನು ನಿರೀಕ್ಷೆ ಮಾಡಿಯೇ ಕಾಂಗ್ರೆಸ್‌ ಪಕ್ಷವು "ನಮ್ಮ ನೀರು ನಮ್ಮ ಹಕ್ಕು" ಪಾದಯಾತ್ರೆ ಮಾಡಿತ್ತು. ಆ ಮೂಲಕ ನಮ್ಮ ಹಕ್ಕೊತ್ತಾಯವನ್ನು ಕನ್ನಡಿಗರ ಮನೆ-ಮನಗಳಿಗೆ ತಲುಪಿಸಿತ್ತು ಎಂದು ತಿಳಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕೆಂಬ ಸಂಕಲ್ಪದಿಂದಲೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಮೇಕೆದಾಟು ಯೋಜನೆಗಾಗಿ ಕಾನೂನು ಹೋರಾಟ ಮುಂದುವರೆದಿದೆ. ನಮಗೆ ಗೆಲುವು ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಈ ಸಂದರ್ಭದಲ್ಲಿ ದೇವೇಗೌಡರು ನಮ್ಮ ಹೋರಾಟಕ್ಕೆ ಧ್ವನಿಗೂಡಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಆದರೆ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಗಾಲು ಹಾಕಿ ಕುಳಿತಿದೆ. ಇತ್ತೀಚೆಗೆ ಒಂದು ಕಾರ್ಯಕ್ರಮದಲ್ಲಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ INDIA ಒಕ್ಕೂಟ ಈ ಬಾರಿ ಚುನಾವಣೆಯಲ್ಲಿ ಗೆದ್ದರೆ ಮೇಕೆದಾಟು ಯೋಜನೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದಾಗಿ ಹೇಳಿದ್ದಾರೆ. ಸ್ಟಾಲಿನ್ ನೀಡಿದ ಈ ಹೇಳಿಕೆ INDIA ಒಕ್ಕೂಟದ ಮುಖ್ಯ ಪಕ್ಷವಾಗಿರುವ ಕಾಂಗ್ರೆಸ್'ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Advertisement
Advertisement