ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Defamation Case: ಡಿಕೆಶಿ ಮಾನಹಾನಿ ಮೊಕದ್ದಮೆ : ಶಾಸಕ ಯತ್ನಾಳ್ ಗೆ ಸೂಕ್ತ ಭದ್ರತೆ ಒದಗಿಸುವಂತೆ ರಾಮನಗರ ಎಸ್. ಪಿ. ಗೆ ಕೋರ್ಟ್ ಆದೇಶ

Defamation Case: ಸಾಕ್ಷಿಗಳ ಮೇಲೆ ಡಿಕೆ ಶಿವಕುಮಾರ್ ಪ್ರಭಾವ ಬೀರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರಾಮನಗರ ಎಸ್ ಪಿ ಅವರಿಗೆ ಆದೇಶ .
10:33 AM Mar 28, 2024 IST | ಸುದರ್ಶನ್
UpdateAt: 10:41 AM Mar 28, 2024 IST
Advertisement

Defamation Case: ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್, ಡಿಕೆ ಶಿವಕುಮಾರ್ ಅವರು ನನ್ನ ವಿರುದ್ಧ ಕೂಡಿರುವ ಮಾನಹಾನಿ ಪ್ರಕರಣವನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಪಡಿಸಿದ್ದು, ಯತ್ನಾಳ್ ಅವರಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಮತ್ತು ಸಾಕ್ಷಿಗಳ ಮೇಲೆ ಡಿಕೆ ಶಿವಕುಮಾರ್ ಪ್ರಭಾವ ಬೀರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರಾಮನಗರ ಎಸ್ ಪಿ ಅವರಿಗೆ ಆದೇಶ ನೀಡಿದೆ.

Advertisement

ಇದನ್ನೂ ಓದಿ: Puttur Crime News: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದ್ದಕ್ಕೆ ಕತ್ತಿಯಿಂದ ಹಲ್ಲೆ

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಅವರ ಏಕ ಸದಸ್ಯ ಪೀಠವು ಆದೇಶ ಹೊರಡಿಸಿದೆ.

Advertisement

ಯತ್ನಾಳ್ ಅವರು ವಿಚಾರಣೆಗೆಂದು ಕನಕಪುರಕ್ಕೆ ಹೋದ ಸಂದರ್ಭದಲ್ಲಿ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಹಾಗೆಯೇ ಡಿಕೆ ಶಿವಕುಮಾರ್ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಎಚ್ಚರಿಕೆ ವಹಿಸಬೇಕು ಎಂದು ನ್ಯಾಯಾಲಯ ಜಿಲ್ಲಾ ಎಸ್ ಪಿ ಅವರಿಗೆ ಸೂಚನೆ ನೀಡಿದೆ.

ಇದನ್ನೂ ಓದಿ: Toll Plaza: ದೇಶಾದ್ಯಂತ ಟೋಲ್ ಫ್ಲಾಜಾಗಳು ರದ್ದು, ಸದ್ಯದಲ್ಲೇ ಹೊಸ ಟೋಲ್ ಸಂಗ್ರಹ ವ್ಯವಸ್ಥೆ ಜಾರಿ !!

ನ್ಯಾಯಾಲಯದಲ್ಲಿ ಯತ್ನಾಳ್ ಪರ ವಾದ ಮಾಡಿಸಿದ ಅರುಣ್ ಶ್ಯಾಮ್ ಅವರು ನನ್ನ ಕಕ್ಷಿದಾರರಿಗೆ ಕಿರುಕುಳ ನೀಡುವ ಉದ್ದೇಶದಿಂದಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನಕಪುರದ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ ಎಂದು ವಾದ ಮಂಡಿಸಿದರು.

ಯತ್ನಾಳ್ ಅವರು ಅರ್ಜಿಯಲ್ಲಿ ನಾನು ವಿಜಯಪುರದ ಶಾಸಕನಾಗಿದ್ದು ವಿಜಯಪುರದಿಂದ ಕನಕಪುರಕ್ಕೆ 565 ಕಿಲೋಮೀಟರ್ ದೂರವಿದ್ದು, ಪ್ರಕರಣವನ್ನು ಕನಕಪುರದಿಂದ ಬೆಂಗಳೂರಿಗೆ ವರ್ಗಾಯಿಸಬೇಕು. ಒಂದು ವೇಳೆ ಕನಕಪುರಕ್ಕೆ ನಾನು ಭೇಟಿ ನೀಡಿದರೆ ನನ್ನ ಮೇಲೆ ಹಲ್ಲೆಯಾಗುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ 2008ರಿಂದಲೂ ಕನಕಪುರದಲ್ಲಿ ಶಾಸಕರಾಗಿದ್ದು, ಅಲ್ಲಿ ಅವರ ಪ್ರಭಾವ ಹೆಚ್ಚಾಗಿದೆ.‌ ಇದರಿಂದಾಗಿ ಅಲ್ಲಿ ಸಾಕ್ಷಿ ತಿರುಗುವ ಸಾಧ್ಯತೆ ಹೆಚ್ಚಿರುತ್ತದೆ. ನಾನು ಹೇಳಿಕೆ ನೀಡಿರುವುದು ವಿಜಯಪುರದಲ್ಲಿ, ಆದರೆ ಪ್ರಕರಣ ದಾಖಲಿಸಿರುವುದು ಕನಕಪುರದಲ್ಲಿ ಆದ್ದರಿಂದ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಬೇಕೆಂದು ಯತ್ನಾಳ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಏನಿದು ಪ್ರಕರಣ?

ಈ ಹಿಂದೆ ಕಾಂಗ್ರೆಸ್‌ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದ ಸಂದರ್ಭದಲ್ಲಿ 2019ರ ಜೂನ್ 23ರಂದು ವಿಜಯಪುರದ ಶಾಸಕ ಯತ್ನಾಳ್ ಅವರು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾ‌ರ್ ಅವರು ನಮ್ಮ (ಬಿಜೆಪಿ) ನಾಯಕರನ್ನು ಭೇಟಿ ಮಾಡಿ ತಮ್ಮ ವಿರುದ್ಧದ ಆದಾಯ ತೆರಿಗೆ ಇಲಾಖೆ ಪ್ರಕರಣಗಳಿಂದ ರಕ್ಷಣೆ ನೀಡುವಂತೆ ಕೋರಿದ್ದಾರೆ. ಈ ಸಂಬಂಧ ಡಿ ಕೆ ಶಿವಕುಮಾ‌ರ್ ಅವರು ನಮ್ಮ ಕೇಂದ್ರ ಸಚಿವರ ಮೂಲಕ ಲಾಬಿ ಮಾಡಿದ್ದು, ವಿವಿಧ ಮೂಲಗಳನ್ನು ಬಳಸಿ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಒತ್ತಡ ಹೇರಲು ಡಿ ಕೆ ಶಿವಕುಮಾ‌ರ್ ಪ್ರಯತ್ನಿಸಿದ್ದಾರೆ ಎಂಬುದು ನನಗೆ ತಿಳಿದಿದೆ. ತಮ್ಮ ವಿರುದ್ಧದ ಇಡಿ ಪ್ರಕರಣಗಳನ್ನು ಮುಕ್ತಾಯಗೊಳಿಸಿದರೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲು ತಮ್ಮ ವಿರೋಧ ಇಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದನ್ನು ಅಂದು ಮಾಧ್ಯಮಗಳು ಪ್ರಸಾರ ಮಾಡಿದ್ದವು.

ಈ ಕುರಿತು ಡಿಕೆ ಶಿವಕುಮಾರ್ ಕನಕಪುರ ನ್ಯಾಯಾಲಯದಲ್ಲಿ ಯತ್ನಾಳ್ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

Advertisement
Advertisement