For the best experience, open
https://m.hosakannada.com
on your mobile browser.
Advertisement

Students Study Tour: ರಾಜ್ಯದ ಎಲ್ಲಾ ಶಾಲೆಗಳಿಗೂ ಬಂತು ಹೊಸ ರೂಲ್ಸ್ - ಶಿಕ್ಷಣ ಇಲಾಖೆಯಿಂದ ಘೋಷಣೆ

02:13 PM Nov 22, 2023 IST | ಅಶ್ವಿನಿ ಹೆಬ್ಬಾರ್
UpdateAt: 02:13 PM Nov 22, 2023 IST
students study tour  ರಾಜ್ಯದ ಎಲ್ಲಾ ಶಾಲೆಗಳಿಗೂ ಬಂತು ಹೊಸ ರೂಲ್ಸ್   ಶಿಕ್ಷಣ ಇಲಾಖೆಯಿಂದ ಘೋಷಣೆ
Advertisement

Students Study Tour: ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ(School Students Study Tour)ಶೈಕ್ಷಣಿಕ ಪ್ರವಾಸದ ಕುರಿತಂತೆ ಸ್ಪಷ್ಟೀಕರಣವನ್ನು ನೀಡಿದೆ. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಈ ಕುರಿತು ಸುತ್ತೋಲೆ ಹೊರಡಿಸಿದ್ದು,ಹೊರ ರಾಜ್ಯಗಳಿಗೆ, ಭಾರತೀಯ ರೈಲ್ವೆಯಲ್ಲಿ ಕೂಡ ಶಾಲಾ ಮಕ್ಕಳಿಗೆ ಪ್ರವಾಸ ಕೈಗೊಳ್ಳಲು(Travel Guide) ಅನುಮತಿ ನೀಡಲಾಗಿದೆ.

Advertisement

2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಮಾರ್ಗದರ್ಶನ ಮತ್ತು ಅನುಮತಿ ನೀಡಲು ಕೋರಿದ್ದು, ಹೀಗಾಗಿ, ಷರತ್ತುಗಳನ್ವಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮನವಿಗಳನ್ನು ಪರಿಶೀಲಿಸಿ ಅನುಮತಿ ನೀಡಲು ಸೂಚನೆ ನೀಡಲಾಗಿದೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ಶೈಕ್ಷಣಿಕ ವರ್ಷ ದೇಶದಾದ್ಯಂತ ಶೈಕ್ಷಣಿಕ ಪ್ರವಾಸ(school-students-study-tour) ಕೈಗೊಳ್ಳಲು ಷರತ್ತುಗಳ ಅನುಸಾರ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನುಮತಿ ನೀಡಲು ಸೂಚನೆ ನೀಡಲಾಗಿದೆ. ಇದರ ಜೊತೆಗೆ ಸದರಿ ಶೈಕ್ಷಣಿಕ ಪ್ರವಾಸವನ್ನೂ ಭಾರತೀಯ ರೈಲ್ವೇಯ ರೈಲುಗಳಲ್ಲಿ ಕೂಡ ಹಮ್ಮಿಕೊಳ್ಳಬಹುದು ಎಂದು ತಿಳಿಸಲಾಗಿದೆ.

Advertisement

ಷರತ್ತುಗಳು ಹೀಗಿವೆ:
*ಪ್ರತಿ ವರ್ಷ ಡಿಸೆಂಬರ್ ತಿಂಗಳ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಡಿಸೆಂಬರ್ ಬಳಿಕ ಯಾವುದೇ ಕಾರಣಕ್ಕೂ ಶೈಕ್ಷಣಿಕ ಪ್ರವಾಸ ಕೈಗೊಳ್ಳದೆ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚಿನ ಗಮನ ವಹಿಸುವುದು.
* ಪ್ರವಾಸ ಕೈಗೊಳ್ಳುವ ಖಾಸಗಿ ಶಾಲೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಕಡ್ಡಾಯವಾಗಿ ಶಾಲಾ ಮಾನ್ಯತೆಯನ್ನು ನವೀಕರಿಸಿರಬೇಕು.
* ಪೋಷಕರು ಸಮ್ಮತಿ ನೀಡಿದ ವಿದ್ಯಾರ್ಥಿಗಳನ್ನು ಮಾತ್ರವೇ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವುದು.
* ಶಿಕ್ಷಣ ಇಲಾಖೆಯಿಂದ ಪ್ರವಾಸಕ್ಕೆ ಯಾವುದೇ ಸೌಲಭ್ಯವನ್ನು ನೀಡಲಾಗುವುದಿಲ್ಲ.

* ಪ್ರವಾಸ ಶೈಕ್ಷಣಿಕ ಪ್ರವಾಸವಾಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಸ್ಥಳಗಳನ್ನು ಪ್ರವಾಸಕ್ಕೆ ಆಯ್ಕೆ ಮಾಡಿಕೊಳ್ಳಬೇಕು.
* ಪ್ರವಾಸ ಕೈಗೊಂಡಿರುವ ವಿದ್ಯಾರ್ಥಿನಿಯರ ಮೇಲ್ವಿಚಾರಣೆಯನ್ನು ಪ್ರವಾಸಕ್ಕೆ ನಿಯೋಜಿತ ಮಹಿಳಾ ಶಿಕ್ಷಕರೇ ಕಡ್ಡಾಯವಾಗಿ ನೋಡಿಕೊಳ್ಳಬೇಕು.

* ಶೈಕ್ಷಣಿಕ ಪ್ರವಾಸವನ್ನು ಶಾಲಾ ದಿನಗಳಂದು ಕೈಗೊಂಡಲ್ಲಿ ಮುಂದಿನ ದಿನಗಳಲ್ಲಿ ಅಂದರೆ ಶನಿವಾರ ಪೂರ್ಣದಿನ/ ಭಾನುವಾರ ಶಾಲೆ ನಡೆಸಿ ಬಾಕಿ ಉಳಿದ ಪಠ್ಯ ಚಟುವಟಿಕೆಗಳನ್ನು ಸರಿದೂಗಿಸಬೇಕು.
* ಪ್ರವಾಸದ ಸಮಯದಲ್ಲಿ ಸಂಭವಿಸುವ ಯಾವುದೇ ಅವಘಡಗಳಿಗೆ ಶಾಲೆಯ ಮುಖ್ಯಸ್ಥರೇ ನೇರ ಹೂಣೆಗಾರರಾಗಿರುತ್ತಾರೆಯೇ ಹೊರತು ಶಿಕ್ಷಣ ಇಲಾಖೆ ಜವಾಬ್ದಾರಿಯಾಗಿರುವುದಿಲ್ಲ.
* ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಥವಾ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖಾ ವಾಹನಗಳಲ್ಲೇ ಕಡ್ಡಾಯವಾಗಿ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಬೇಕು.
* ಯಾವುದೇ ಕಾರಣಕ್ಕೂ ಅನಧೀಕೃತವಾಗಿ ಖಾಸಗಿ ಹಾಗೂ ಮಿನಿ ಬಸ್ಗಳಲ್ಲಿ ಪ್ರವಾಸವನ್ನು ಕೈಗೊಳ್ಳಬಾರದು.
* ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚು ಮಹತ್ವ ನೀಡಬೇಕು. ಕೋವಿಡ್ 19ಗೆ ಸಂಬಂಧಿಸಿದಂತೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಇದನ್ನೂ ಓದಿ: Fish Delivery: ಬೆಂಗಳೂರಿನ ಜನತೆಗೆ ಭರ್ಜರಿ ಗುಡ್ ನ್ಯೂಸ್- ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಈ ಹೊಸ ಸೇವೆ

Advertisement
Advertisement
Advertisement