For the best experience, open
https://m.hosakannada.com
on your mobile browser.
Advertisement

Farmers Protest: ರೈತರ ಪ್ರತಿಭಟನೆಯ ನಡುವೆಯೇ ರಾಹುಲ್ ಗಾಂಧಿ ಭರ್ಜರಿ ಘೋಷಣೆ! ಗ್ಯಾರಂಟಿ ಹೊರಡಿಸಿದ ಕಾಂಗ್ರೆಸ್‌

05:13 PM Feb 13, 2024 IST | ಹೊಸ ಕನ್ನಡ
UpdateAt: 05:18 PM Feb 13, 2024 IST
farmers protest  ರೈತರ ಪ್ರತಿಭಟನೆಯ ನಡುವೆಯೇ ರಾಹುಲ್ ಗಾಂಧಿ ಭರ್ಜರಿ ಘೋಷಣೆ  ಗ್ಯಾರಂಟಿ ಹೊರಡಿಸಿದ ಕಾಂಗ್ರೆಸ್‌
Advertisement

Rahul Gandhi: ದೆಹಲಿ ಮತ್ತು ಹತ್ತಿರದ ರಾಜ್ಯಗಳಲ್ಲಿ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರೂಪಿಸುವುದು ಸೇರಿದಂತೆ ಇತರ ಬೇಡಿಕೆಗಳಿಗಾಗಿ ಪ್ರತಿಭಟನೆಗೆ ಬರುತ್ತಿರುವ ರೈತರು ಸಜ್ಜಾಗಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ( Rahul Gandhi)ಭರ್ಜರಿ ಘೋಷಣೆ ಮಾಡಿದ್ದಾರೆ. ರೈತರ ಪ್ರತಿಭಟನೆಯ ನಡುವೆಯೇ ಕಾಂಗ್ರೆಸ್ ಮೊದಲ ಭರವಸೆ ನೀಡುತ್ತಾ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ಸ್ವಾಮಿನಾಥನ್ ಆಯೋಗದ ಪ್ರಕಾರ ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ನೀಡಲಾಗುವುದು ಎಂದು ಹೇಳಿದ್ದಾರೆ.

Advertisement

ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಛತ್ತೀಸ್‌ಗಢ ತಲುಪಿದ ರಾಹುಲ್ ಗಾಂಧಿ, “ದೇಶದಲ್ಲಿ ರೈತರಿಗೆ ಸಿಗಬೇಕಾದದ್ದು ಸಿಗುತ್ತಿಲ್ಲ, ಅದಕ್ಕಾಗಿಯೇ ರೈತರು ದೆಹಲಿಯತ್ತ ಹೋಗುತ್ತಿದ್ದಾರೆ, ಆದರೆ ಅವರನ್ನು ತಡೆಯಲಾಗುತ್ತಿದೆ, ಅಶ್ರುವಾಯು ಶೆಲ್‌ಗಳನ್ನು ಹಾರಿಸಲಾಗುತ್ತಿದೆ. ನಮ್ಮ ಶ್ರಮಕ್ಕೆ ತಕ್ಕ ಫಲ ಸಿಗಬೇಕು ಎಂದು ರೈತರು ಹೇಳುತ್ತಿದ್ದಾರೆ.

'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ, 'ರೈತ ಸಹೋದರರೇ, ಇಂದು ಐತಿಹಾಸಿಕ ದಿನ! ಸ್ವಾಮಿನಾಥನ್ ಆಯೋಗದ ಪ್ರಕಾರ ಬೆಳೆಗಳ ಮೇಲೆ ಪ್ರತಿ ರೈತರಿಗೆ ಎಂಎಸ್‌ಪಿ ಕಾನೂನುಬದ್ಧ ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮವು 15 ಕೋಟಿ ರೈತ ಕುಟುಂಬಗಳ ಏಳಿಗೆಯನ್ನು ಖಾತ್ರಿಪಡಿಸುವ ಮೂಲಕ ಅವರ ಜೀವನವನ್ನು ಬದಲಾಯಿಸುತ್ತದೆ. ನ್ಯಾಯದ ಹಾದಿಯಲ್ಲಿ ಇದು ಕಾಂಗ್ರೆಸ್‌ನ ಮೊದಲ ಗ್ಯಾರಂಟಿ.

Advertisement

ಇದನ್ನೂ ಓದಿ : ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕರ ಕ್ಯಾಂಪೇನ್ !!ರಾಜ್ಯದಲ್ಲಿ ಸದ್ದಿಲ್ಲದೆ ನಡೆಯುತ್ತಿದೆ ಬದಲಾವಣೆ

Advertisement
Advertisement
Advertisement