For the best experience, open
https://m.hosakannada.com
on your mobile browser.
Advertisement

Indian Railway : ಪ್ರಯಾಣಿಕರಿಗೆ ಗುಡ್ ನ್ಯೂಸ್ - ರೈಲ್ವೆ ಟಿಕೆಟ್ ಬುಕ್ಕಿಂಗ್ ನಲ್ಲಿ ಇನ್ಮುಂದೆ ವೇಟಿಂಗ್‌ ಮಾತೇ ಇಲ್ಲ !!

Indian Railway: ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿರುವ ರೈಲ್ವೆ ಇಲಾಖೆಯು ಬುಕ್ಕಿಂಗ್ ನಲ್ಲಿ ಇನ್ಮುಂದೆ ವೇಟಿಂಗ್‌ ಮಾತೇ ಇಲ್ಲ ಎಂದು ಹೇಳಿದೆ.
12:59 PM Apr 25, 2024 IST | ಸುದರ್ಶನ್
UpdateAt: 01:21 PM Apr 25, 2024 IST
indian railway   ಪ್ರಯಾಣಿಕರಿಗೆ ಗುಡ್ ನ್ಯೂಸ್   ರೈಲ್ವೆ ಟಿಕೆಟ್ ಬುಕ್ಕಿಂಗ್ ನಲ್ಲಿ ಇನ್ಮುಂದೆ ವೇಟಿಂಗ್‌ ಮಾತೇ ಇಲ್ಲ
Advertisement

Indian Railway : ಭಾರತೀಯ ರೈಲ್ವೆ(Indian Railway) ಇಲಾಖೆಯು ತನ್ನ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲೆಂದು ಹಲವು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಅಂತೆಯೇ ಟಿಕೆಟ್ ಬುಕ್ಕಿಂಗ್(Ticket Booking)ವಿಚಾರವಾಗಿ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿರುವ ರೈಲ್ವೆ ಇಲಾಖೆಯು ಬುಕ್ಕಿಂಗ್ ನಲ್ಲಿ ಇನ್ಮುಂದೆ ವೇಟಿಂಗ್‌ ಮಾತೇ ಇಲ್ಲ ಎಂದು ಹೇಳಿದೆ.

Advertisement

ಇದನ್ನೂ ಓದಿ:  Belthangady: ಕಾಂಗ್ರೆಸ್‌ ಆಡಳಿತದಲ್ಲಿ ಮುಸ್ಲಿಮರದ್ದು ಭಯೋತ್ಪಾದಕರ ರೀತಿ ವರ್ತನೆ; ಕಲ್ಲಡ್ಕ ಪ್ರಭಾಕರ್‌ ಭಟ್‌

ಹೌದು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌(Ashwini Vaishnav) ಅವರು ದೇಶದ ರೈಲು ಮಂತ್ರಿ ಆದಾಗಿಂದ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ಮಾಡಿದ್ದಾರೆ. ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿರುವ ಅವರು ಮುಂದಿನ ಐದು ವರ್ಷಗಳಲ್ಲಿ ರೈಲ್ವೆ ಇಲಾಖೆಯಲ್ಲಿ ಮತ್ತಷ್ಟು ಕ್ರಾಂತಿಕಾರಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಿ, ಪ್ರತಿಯೊಬ್ಬರಿಗೂ ಕನ್ಫರ್ಮ್ಡ್‌ ಟಿಕೆಟ್‌ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು. ಟಿಕೆಟ್ ವೇಟಿಂಗ್‌ ಮಾತೇ ಇಲ್ಲ ಎಂದು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:  Car Tips: ಈ ಬಟನ್ ಒತ್ತಿದರೆ ಸಾಕು ತಕ್ಷಣ ಕಾರು ತಂಪಾಗುತ್ತದೆ, ಇದು ಎಷ್ಟೋ ಜನರಿಗೆ ಗೊತ್ತಿರದ ವಿಷಯ!

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಕಳೆದ 10 ವರ್ಷಗಳಲ್ಲಿ ಭಾರತದ ರೈಲ್ವೆಯನ್ನು ನರೇಂದ್ರ ಮೋದಿ ಅವರು ರೂಪಾಂತರಗೊಳಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ ದೇಶದ ರೈಲ್ವೆಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವುದು ನರೇಂದ್ರ ಮೋದಿ ಅವರ ಗ್ಯಾರಂಟಿಯಾಗಿದೆ. ದೇಶಾದ್ಯಂತ ರೈಲುಗಳನ್ನು ಹೆಚ್ಚಿಸಿ, ಪ್ರತಿಯೊಬ್ಬ ಪ್ರಯಾಣಿಕರಿಗೆ ಕನ್ಫರ್ಮ್ಡ್‌ ಟಿಕೆಟ್‌ ಸಿಗುವಂತೆ ಮಾಡಲಾಗುತ್ತದೆ. ಇದರಿಂದ ಪ್ರಯಾಣಿಕರು ವೇಟಿಂಗ್‌ ಲಿಸ್ಟ್‌ ನೋಡುತ್ತ ಕಾಯುವುದು ತಪ್ಪುತ್ತದೆ. ಎಲ್ಲರಿಗೂ ಸುಲಭವಾಗಿ ರೈಲು ಟಿಕೆಟ್‌ ಕೊಡುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ರೈಲ್ವ

ಭಾರತೀಯ ರೈಲ್ವೆ ಇಲಾಖೆ ಬಗ್ಗೆ ಎಲ್ಲರಿಗೂ ತಿಳಿದಿದೆ. ವಿಶ್ವದಾದ್ಯಂತ ನಾಲ್ಕನೇ ಅತಿ ದೊಡ್ಡ ರೈಲ್ವೆ ಪ್ಲಾಟ್ಫಾರ್ಮ್ ನಮ್ಮ ದೇಶದ್ದು ಎಂಬುದು ಎಲ್ಲರಿಗೂ ಹೆಮ್ಮೆಯ ಸಂಗತಿ. ಲಕ್ಷಾಂತರ ಜನ ದಿನನಿತ್ಯ ಸಂಚರಿಸುತ್ತಾರೆ. ಹೀಗಾಗಿ ಇತ್ತೀಚಿನ ದಿನಗಳಲ್ಲಿ ರೈಲ್ವೆ ಇಲಾಖೆಯು ಬಹಳಷ್ಟು ಮಹತ್ತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಹೈಟೆಕ್ ವ್ಯವಸ್ಥೆಗಳನ್ನು ಕಲ್ಪಿಸಿ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲಗಳನ್ನು ಮಾಡಿ ಕೊಡುತ್ತಿದೆ. ಅಲ್ಲದೆ ಇದೀಗ ದೇಶದ ರೈಲ್ವೆ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲಾಗಿದೆ. ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ವಂದೇ ಭಾರತ್‌ನಂತಹ ಅತ್ಯಾಧುನಿಕ ರೈಲುಗಳನ್ನು ಪರಿಚಯಿಸಲಾಗಿದೆ.

Advertisement
Advertisement
Advertisement