For the best experience, open
https://m.hosakannada.com
on your mobile browser.
Advertisement

Schoolarship: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

Schoolarship: 2023-24 ನೇ ಸಾಲಿನ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ (6 ರಿಂದ10 ನೇತರಗತಿ) ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10000/-ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು, ಕರ್ನಾಟಕ ರಾಜ್ಯ ಸರಕಾರವು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
10:56 AM Jun 03, 2024 IST | ಸುದರ್ಶನ್
UpdateAt: 11:00 AM Jun 03, 2024 IST
schoolarship  ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
Advertisement

Schoolarship: ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಹೌದು, 2023-24 ನೇ ಸಾಲಿನ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ (6 ರಿಂದ10 ನೇತರಗತಿ) ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10000/-ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ (Schoolarship) ನೀಡಲು, ಕರ್ನಾಟಕ ರಾಜ್ಯ ಸರಕಾರವು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

Advertisement

ಮುಖ್ಯವಾಗಿ 2023-24 ನೇ ಸಾಲಿನ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ(6 ರಿಂದ10 ನೇತರಗತಿ) ವಿದ್ಯಾರ್ಥಿಗಳಿಗೆ 10000/- ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಆದ್ದರಿಂದ ಆಯಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರು ನೇರ ಭೇಟಿ ನೀಡಿ ಮಾಹಿತಿ ಪಡೆದು ಆನ್ಲೈನ್ ನಲ್ಲಿ ದಿನಾಂಕ 30/06/2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Vidhana Parishath Election : ಕಾಂಗ್ರೆಸ್ ನಿಂದ 7 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ !!

Advertisement

ಷರತ್ತು/ನಿಯಮಗಳು:
1)ಅರ್ಜಿದಾರರು 2023-24ನೇ ಸಾಲಿನ ವಿದ್ಯಾರ್ಥಿಯಾಗಿದ್ದು, ಮಾದ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು.

2)ಅರ್ಜಿದಾರರು ರಾಜ್ಯದ ಕ್ರೀಡಾ ಪ್ರಾಧಿಕಾರದಲ್ಲಿನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ:01/04/2023 ರಿಂದ31/03/2024 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01/04/2023 ರಿಂದ31/03/2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.

ಇದನ್ನೂ ಓದಿ: NHAI: ರಾಷ್ಟ್ರೀಯ ಹೆದ್ದಾರಿಗಳ ಬಳಕೆ ಶುಲ್ಕ ಶೇ 5ರಷ್ಟು ಏರಿಕೆ !!

3)ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.

4)ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.

5)ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ.

6)ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ.10000 ಗಳನ್ನು ಮಾತ್ರ ಮಂಜೂರು ಮಾಡಲಾಗುವುದು.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಸಲ್ಲಿಸುವ ಲಿಂಕ್ ಈ ಕೆಳಗೆ ನೀಡಲಾಗಿದೆ.

ನೋಟಿಫಿಕೇಶನ್‌

Advertisement
Advertisement
Advertisement