Bangalore Development Authority Recruitment: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳ ನೇಮಕ: ಈ ಕೂಡಲೇ ಅರ್ಜಿ ಸಲ್ಲಿಸಿ
Bangalore Development Authority Recruitment: ಸರ್ಕಾರಿ ಉದ್ಯೋಗ ಬಯಸುವವರಿಗೆ ಸುವರ್ಣ ಅವಕಾಶ ಒಂದು ಇಲ್ಲಿದೆ. ಹೌದು, ಬೆಂಗಳೂರು ಡೆವಲಪ್ಮೆಂಟ್ ಅಥಾರಿಟಿಯು ಸ್ಟೆನೋಗ್ರಾಫರ್ ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (Bangalore Development Authority Recruitment) ಖಾಲಿ ಇರುವ ಬೆರಳಚ್ಚುಗಾರ ಮತ್ತು ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದ್ದು, ಬ್ಯಾಕ್‌ಲಾಗ್ ಹುದ್ದೆಗಳಾಗಿದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
ಬೆರಳಚ್ಚುಗಾರ : 01
ಶೀಘ್ರಲಿಪಿಗಾರರ : 01
ವಿದ್ಯಾರ್ಹತೆ:
ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಟೈಪ್‌ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯಸ್ಸಿನ ಅರ್ಹತೆ:
ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು. ಹಾಗೂ 40 ವರ್ಷ ವಯಸ್ಸು ಮೀರಿರಬಾರದು. ಮಾಜಿ ಸೈನಿಕರು, ಅಂಗವಿಕಲರು / ವಿಧವೆಯರಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿ ಸಡಿಲಿಕೆ ಅನ್ವಯವಾಗುವುದು.
ವೇತನ ಶ್ರೇಣಿ
ಬೆರಳಚ್ಚುಗಾರ : Rs.21400-42000.
ಶೀಘ್ರಲಿಪಿಗಾರರ : Rs.27650-52650.
ಅರ್ಜಿ ಸಲ್ಲಿಸುವ ವಿಳಾಸ:
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು-560020 ಇವರಿಗೆ, ಅಂಚೆ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ, ಪಿಯುಸಿ / ನಿಗದಿತ ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರ, ಜಾತಿ ದೃಢೀಕರಣ ಪತ್ರ ಖಡ್ಡಾಯವಾಗಿ ಲಗತ್ತಿಸಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 09-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 08-12-2023 ರ ಸಂಜೆ 05-30 ಗಂಟೆವರೆಗೆ.
ಅಭ್ಯರ್ಥಿಗಳಿಗೆ ಸೂಚನೆಗಳು:
ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರು ಹುದ್ದೆಗಳಿಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಅರ್ಜಿಯಲ್ಲಿನ ವಿವರಗಳನ್ನು ತಿದ್ದುಪಡಿ / ಸೇರ್ಪಡೆ ಮಾಡುವಂತೆ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಶುಲ್ಕ ಇರುವುದಿಲ್ಲ.
ಅರ್ಹ ಅಭ್ಯರ್ಥಿಗಳನ್ನು ನಿಗದಿಪಡಿಸಿದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಶೇಕಡವಾರು ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.
ಇದನ್ನೂ ಓದಿ: 7th Pay Commission: ಡಿಎ ಹೆಚ್ಚಳ ಜೊತೆಗೆ ಈ ಭತ್ಯೆಗಳಲ್ಲಿಯೂ ಹೆಚ್ಚಳ!