ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Gruhalakshmi: ರಾಜ್ಯದ ಯಜಮಾನಿಯರಿಗೆ ಶಾಕ್ - ಈ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಿಂದ ಔಟ್ !!

01:42 PM Jul 07, 2024 IST | ಸುದರ್ಶನ್
UpdateAt: 01:46 PM Jul 07, 2024 IST
Advertisement

 

Advertisement

Gruhalakshmi : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಪ್ರಮುಖವಾಗಿರುವ ಯೋಜನೆ 'ಗೃಹಲಕ್ಷ್ಮಿ ಯೋಜನೆ'(Gruhalakshmi Scheme). ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2000 ರೂ ಹಣ ಜಮೆಯಾಗುತ್ತಿದೆ. ಆದರೀಗ ಇದುವರೆಗೂ ಈ ಯೋಜನೆಯ ಫಲಾನುಭವಿಗಳಾದ ಕೆಲವು ಮಹಿಳೆಯರಿಗೆ ಶಾಕ್ ಎದುರಾಗಿದೆ. ಯಾಕೆಂದರೆ ಅವರನ್ನು ಈ ಯೋಜನೆಯಿಂದ ಹೊರಗಿಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಮಾಹಿತಿ ನೀಡಿದ್ದಾರೆ.

 

Advertisement

ಗೃಹಲಕ್ಷ್ಮೀ ಯೋಜನೆಯಡಿ ಮಾರ್ಚ್ ನಂತರ ಹೊಸದಾಗಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳನ್ನೂ ಪರಿಗಣಿಸಲು ಸರಕಾರ ನಿರ್ಧರಿಸಿದ್ದು ಈ ನಡುವೆ ಕೆಲವು ಯಜಮಾನಿಯರಿಗೆ ಶಾಕ್ ಕೊಡಲು ಕೂಡ ಸರ್ಕಾರ ಚಿಂತನೆ ನಡೆಸಿದೆ. ಹೌದು, ಆದಾಯ ತೆರಿಗೆ ಪಾವತಿದಾರರ ಮನೆಯ ಯಜಮಾನಿಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗಿದೆ. ಆದರೂ ಆದಾಯ ತೆರಿಗೆ ಪಾವತಿಸುತ್ತಿರುವ ಲಕ್ಷಾಂತರ ಮಂದಿ ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಸದ್ಯ ಇಂತಹ 1.78 ಲಕ್ಷ ಮಂದಿಯನ್ನು ಪತ್ತೆ ಮಾಡಲಾಗಿದೆ.

 

ಹೀಗೆ ಪತ್ತೆಯಾದವರಲ್ಲಿ ಆದಾಯ ತೆರಿಗೆ ಪಾವತಿಸದ ಕುರಿತು ದೃಢೀಕರಣ ಪತ್ರ ತರಲು ಕೇಳಿದ್ದೆವು. 1.78 ಲಕ್ಷ ಮಂದಿ ಪೈಕಿ 6 ಸಾವಿರಕ್ಕೂ ಹೆಚ್ಚು ಮಂದಿ ದೃಢೀಕರಣ ಪತ್ರ ಸಲ್ಲಿಸಿದ್ದಾರೆ. ಇದೀಗ ಇವರನ್ನು ಯೋಜನೆಗೆ ಪರಿಗಣಿಸಲಾಗುವುದು. ದೃಢೀಕರಣ ಪತ್ರ ಸಲ್ಲಿಸಿದವರಿಗೆ 2 ಸಾವಿರ ರೂ. ನೀಡಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಲೋಕಸಭೆ ಚುನಾವಣೆ ನೀತಿ ಸಂಹಿತೆಗೆ ಮುನ್ನ ಮತ್ತು ನಂತರ ಅರ್ಜಿ ಸಲ್ಲಿಸಿದವರನ್ನೂ ಗೃಹಕ್ಷ್ಮಿ ಯೋಜನೆಗೆ ಪರಿಗಣಿಸಲಾಗುತ್ತಿದೆ. ಈ ಅವಧಿಯಲ್ಲಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಯೋಜನೆಗೆ ಬಿಪಿಎಲ್‌, ಎಪಿಎಲ್‌ ಪಡಿತರ ಹೊಂದಿರುವವರು ಎಂಬ ಭೇದ-ಭಾವವಿಲ್ಲದೆ ಎರಡೂ ವರ್ಗದ ಕಾರ್ಡ್‌ದಾರರನ್ನು ಪರಿಗಣಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Related News

Advertisement
Advertisement