ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

D K Shivkumar: ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆ ಬಂದ್ - ಡಿ ಕೆ ಶಿವಕುಮಾರ್ ಕೊಟ್ರು ಬಿಗ್ ಅಪ್ಡೇಟ್!!

11:42 AM Jan 28, 2024 IST | ಹೊಸ ಕನ್ನಡ
UpdateAt: 11:42 AM Jan 28, 2024 IST
Advertisement

 

Advertisement

D K Shivkumar: ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂಬ ವಿಚಾರ ಭಾರಿ ಸದ್ದು ಮಾಡುತ್ತಿದೆ ಈ ಕುರಿತು ಬಿಜೆಪಿ ಕೂಡ ಹಲವಾರು ರೀತಿಯಲ್ಲಿ ಪ್ರಚಾರವನ್ನು ಕೈಗೊಳ್ಳುತ್ತಿದೆ. ಆದರೆ ಈಗ ಈ ಬಗ್ಗೆ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್(D K Shivkumar)ಅವರ ಬಿಗ್ ಅಪ್ಡೇಟ್ ಒಂದನ್ನು ನೀಡಿದ್ದಾರೆ.

ಹೌದು, ಲೋಕಸಭೆ ಚುನಾವಣೆ(Parliament election)ನಂತರ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂಬ ಬಿಜೆಪಿ ಆರೋಪದ ಕುರಿತು ಚರ್ಚೆಯಾಗುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಉತ್ತರಿಸಿದ್ದು, ಕೇಂದ್ರದಲ್ಲಿ ಬಿಜೆಪಿ(BJP) ಸರ್ಕಾರ ಅಧಿಕಾರಕ್ಕೆ ಬಂದರೆ ಇದನ್ನು ಬಂದ್ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಇದನ್ನು ಬಂದ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Advertisement

ಅಲ್ಲದೆ ಬಿಜೆಪಿ ಬಗ್ಗೆ ವಾಗ್ದಾಳಿ ನಡೆಸಿದ ಅವರು ಬಿಜೆಪಿಯವರು ಭಾವನೆ ಇಟ್ಟುಕೊಂಡು ರಾಜಕಾರಣ ಮಾಡುತ್ತಾರೆ. ಆದರೆ ನಾವು ಜನರಿಗೆ ಶಕ್ತಿ ತುಂಬುತ್ತೇವೆ. ಜನರನ್ನು ಅಭಿವೃದ್ಧಿ ಪಡಿಸಲು ಅವರ ಸರ್ವತೋಮುಖ ಬೆಳವಣಿಗೆಗೆ ಏನೆಲ್ಲ ಕಾರ್ಯಗಳು ಆಗಬೇಕೆಂಬುದನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ಜಾರಿಗೆ ತರುತ್ತೇವೆ. ಹೀಗಾಗಿ ನಮ್ಮ ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂಬ ಯಾವುದೇ ಆತಂಕ ಬೇಡ. ನಮ್ಮ ಸರ್ಕಾರ ಇರುವವರೆಗೂ ಯೋಜನೆಗಳು ಇರುತ್ತವೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

Advertisement
Advertisement