G. Parameshwara: ಯಾವುದೇ ಕಾರಣಕ್ಕೂ ʼಗ್ಯಾರಂಟಿʼ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಗೃಹ ಸಚಿವ ಡಾ. ಜಿ. ಪರಮೇಶ್ವರ್
G. Parameshwara: ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಾವು ನಿಲ್ಲಿಸುವುದಿಲ್ಲ. ಕರ್ನಾಟಕದ ರಾಜ್ಯದ ಬಡವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಾವು ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆಯೇ ಹೊರತು ರಾಜಕಾರಣಕ್ಕಾಗಿ ಅಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರು ಹೇಳಿದ್ದಾರೆ.
ಇದನ್ನೂ ಓದಿ: ಚುನಾವಣೆ ಫಲಿತಾಂಶದ ನಂತರ ಸಿದ್ದರಾಮಯ್ಯ ಸರಕಾರದ ಮೊದಲ ವಿಕೆಟ್ ಪತನ
ಉಡುಪಿ ಪಟ್ಟಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, ಪಟ್ಟಣ ಪ್ರದೇಶದವರಿಗಿಂತ ಗ್ರಾಮೀಣ ಪ್ರದೇಶದ ಬಡವರು, ಕೂಲಿ ಕಾರ್ಮಿಕರಿಗೆ ಈ ಯೋಜನೆಗಳಿಂದ ಹೆಚ್ಚು ಅನುಕೂಲವಾಗುತ್ತದೆ ಎಂಬುದು ನಮ್ಮ ಭಾವನೆಯಾಗಿದೆ. ಅದಕ್ಕಾಗಿ ಈ ಗ್ಯಾರಂಟಿ ಯೋಜನೆ ಮತ್ತು ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈಕ ನಡೆದ ಲೋಕಸಭಾ ಚುನಾವಣೆಯಲ್ಲಿ ನಾವು ಬಹಳಷ್ಟು ಕಡೆ ಸೋತಿದ್ದೇವೆ. ನಾವು ಈ ಸೋಲಿನ ವಿಶ್ಲೇಷಣೆ ಹಾಗೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ನಾವು ಈಗಾಗಲೇ ಮಾತುಕತೆ ನಡೆಸಿದ್ದೇವೆ. ಎಲ್ಲಿ ಸೋತಿದ್ದೇವೆ ಮತ್ತು ಎಲ್ಲಿ ಎಡವಿದ್ದೇವೆ ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ ಅವರು ಹೇಳಿದ್ದಾರೆ.