ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Gujarath: ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ನೀಲೇಶ್ ಕುಂಭಾನಿ ಬಿಜೆಪಿ ಸೇರ್ಪಡೆ ?!

Congress: ನಾಮಪತ್ರ ತಿರಸ್ಕೃತವಾದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ (Nilesh Kumbhani) ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಭಾರೀ ಸದ್ದು ಮಾಡುತ್ತಿದೆ.
11:34 PM Apr 23, 2024 IST | ಸುದರ್ಶನ್
UpdateAt: 11:35 PM Apr 23, 2024 IST
Advertisement

Gujarath- ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ ಆದಕಾರಣ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್(BJP Candidate Mukesh Dalal) ಅವರು ಚುನಾವಣೆ ಎದುರಿಸದೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಆದರೆ ಈ ಬೆನ್ನಲ್ಲೇ ನಾಮಪತ್ರ ತಿರಸ್ಕೃತವಾದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ (Nilesh Kumbhani) ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಭಾರೀ ಸದ್ದು ಮಾಡುತ್ತಿದೆ.

Advertisement

ಹೌದು, ಬಿಜೆಪಿಯ ಭದ್ರಕೋಟೆ ಗುಜರಾತ್(Gujarath) ರಾಜ್ಯದ ಸೂರತ್ ಲೋಕಸಭಾ(Surath Lokasabha) ಕ್ಷೇತ್ರವನ್ನು ಬಿಜೆಪಿ ಗೆದ್ದಿದ್ದು, ಅವಿರೋಧವಾಗಿ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್ ಆಯ್ಕೆಯಾಗಿದ್ದಾರೆ. ಈ ಮಧ್ಯೆ ಸೋಮವಾರದಿಂದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ (Nilesh Kumbhani) ಎಲ್ಲಿಯೂ ಕಾಣಿಸಿಕೊಂಡಿಲ್ಲ. ಅವರ ಮನೆಗೂ ಬೀಗ ಹಾಕಿದ್ದು, ಫೋನ್ ಸ್ವಿಚ್ ಆಫ್ ಆಗಿದೆ. ಇದು ಭಾರೀ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಶೀಘ್ರವೇ ನೀಲೇಶ್ ಕುಂಭಾವಿ ಬಿಜೆಪಿ ಸೇರಬಹುದು ಎಂಬ ಸುದ್ದಿ ಹಬ್ಬಿದೆ.

ಇನ್ನು ಈ ಬೆನ್ನಲ್ಲೇ ಸೂರತ್ ಲೋಕಸಭೆ ಚುನಾವಣಾ (Lok Sabha Election) ಪ್ರಕ್ರಿಯೆಯಲ್ಲಿ ಆಡಳಿತ ಪಕ್ಷ ಬಿಜೆಪಿ (BJP) ಪ್ರಭಾವ ಬೀರಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸೂರತ್‌ನಲ್ಲಿ ಮತ್ತೊಮ್ಮೆ ಚುನಾವಣೆ ನಿರ್ವಹಿಸಲು ಕೋರಿ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗದ ಮೊರೆ ಹೋಗಿದೆ. ಜೊತೆಗೆ ಸ್ಥಳೀಯ ಕಾಂಗ್ರೆಸ್ಸಿಗರು ಫುಲ್ ಗರಂ ಆಗಿದ್ದಾರೆ. ನೀಲೇಶ್ ದ್ರೋಹಿ ಎಂಬ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ

Advertisement

ಅಷ್ಟಕ್ಕೂ ನಡೆದದ್ದೇನು?

ಸೂರತ್ ಕ್ಷೇತ್ರದಿಂದ ಒಟ್ಟು 9 ಅಭ್ಯರ್ಥಿಗಳು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಈ ಬೈಕಿ ಬಿಜೆಪಿಯಿಂದ ಮುಕೇಶ್ ದಲಾಲ್ ಹಾಗೂ ಕಾಂಗ್ರೆಸ್‌ನಿಂದ ನಿಲೇಶ್ ಕುಂಭಾನಿ ಪ್ರಮುಖರಾಗಿದ್ದರು. ಇವರಿಬ್ಬರ ನಡುವೆ ನೇರಾನೇರ ಸ್ಪರ್ಧೆ ಎರ್ಪಟ್ಟಿತ್ತು. ಆದರೆ ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಅಲ್ಲದೆ ನಂತರ ಕಣದಲ್ಲಿದ್ದ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement
Advertisement