For the best experience, open
https://m.hosakannada.com
on your mobile browser.
Advertisement

H D Kumarswamy: ಬಿಜೆಪಿ ವಿರುದ್ಧ ಕಿಡಿಕಾರಲು ಶುರುಮಾಡಿದ ಕುಮಾರಸ್ವಾಮಿ, BJPಯ ಮೈಸೂರು ಪಾದಯಾತ್ರೆಗೆ JDS ಭಾರೀ ವಿರೋಧ!!

H D Kumarswamy: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
05:15 PM Jul 31, 2024 IST | ಸುದರ್ಶನ್
UpdateAt: 05:15 PM Jul 31, 2024 IST
h d kumarswamy  ಬಿಜೆಪಿ ವಿರುದ್ಧ ಕಿಡಿಕಾರಲು ಶುರುಮಾಡಿದ ಕುಮಾರಸ್ವಾಮಿ  bjpಯ ಮೈಸೂರು ಪಾದಯಾತ್ರೆಗೆ jds ಭಾರೀ ವಿರೋಧ
Advertisement

H D Kumarswamy: ಮಿತ್ರ ಪಕ್ಷ ಬಿಜೆಪಿ ವಿರುದ್ಧ ಕೇಂದ್ರ ಸಚಿವ, ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಕಿಡಿ ಕಾರಲು ಶುರುಮಾಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ, ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ.

Advertisement

ದೆಹಲಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ ನಮ್ಮ ಬೆಂಬಲವಿಲ್ಲ. ಹೀಗಾಗಿ ಇದರಲ್ಲಿ ಭಾಗವಹಿಸದಿರಲು ಜೆಡಿಎಸ್‌ ನಿರ್ಧರಿಸಿದೆ. ನಾವು ನೈತಿಕ ಬೆಂಬಲವೂ ಕೊಡಲ್ಲ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು? ಬೆಂಗಳೂರು ಮೈಸೂರು ವರೆಗೂ ನಮ್ಮ ಶಕ್ತಿ ಇದೆ. ನಮ್ಮನ್ನು ಪರಿಗಣಿಸದಿದ್ದರೆ ಹೇಗೆ? ನನ್ನ ಮನಸ್ಸಿಗೆ ನೋವಾಗಿದೆ, ಯಾಕೆ ಬೆಂಬಲ ಕೊಡಬೇಕು? ಹಿಂದೆ ಸರಿದಿದ್ದೇವೆ ಎಂದು ಹೇಳಿದ್ದಾರೆ.

ಅಂದಹಾಗೆ ಜೆ‌.ಟಿ ದೇವಗೌಡರ (GT Devegowda) ನೇತೃತ್ವದಲ್ಲಿ ಕೋರ್ ಕಮಿಟಿ ಸದಸ್ಯರು ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ. ಕೇರಳದಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದ ಜನರು ಗುಡ್ಡ ಕುಸಿತದಲ್ಲಿ (Wayanad landslide) ಕಣ್ಮರೆಯಾಗಿದ್ದಾರೆ. ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಹಲವೆಡೆ ರೆಡ್, ಎಲ್ಲೋ ಅಲರ್ಟ್ ಘೋಷಿಸಿದೆ. ಹಲವು ಜಿಲ್ಲೆಗಳಲ್ಲಿ ಜಲಾವೃತಗೊಂಡು ಸಂಕಷ್ಟ ಎದುರಿಸುತ್ತಿದ್ದಾರೆ. ಮಂಡ್ಯ ಭಾಗದಲ್ಲಿ ಭತ್ತದ ಸಸಿ ನೆಡುವ ಕೆಲಸ ಶುರುವಾಗಲಿದೆ. ಈ ಹಿನ್ನಲೆಯಲ್ಲಿ ನಮ್ಮ ನಾಯಕರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎಚ್‌ಡಿಕೆ ಹೇಳಿದ್ದಾರೆ.

Advertisement

ಅಂದಹಾಗೆ ಈ ಹಿಂದೆ ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂದರ್ಭದಲ್ಲಿಯು ಬಿಜೆಪಿ ಬಗ್ಗೆ ಕುಮಾರಸ್ವಾಮಿ ತುಸು ಅಸಮಾಧಾನ ವ್ಯಕ್ತಪಡಿಸಿದ್ದರು. ಕೇವಲ 2 ಸೀಟಿಗಾಗಿ ಇಷ್ಟೆಲ್ಲ ಒದ್ದಾಡಬೇಕಾ ಎಂದಿದ್ದು ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅವರು ಕೇಂದ್ರ ಸಚಿವರಾಗಿದ್ದುಕೊಂಡು ಮೈತ್ರಿ ಪಕ್ಷದ ಬಗ್ಗೆ ಅಸಮಾಧಾನದ ಹೇಳಿಕೆ ನೀಡಿದ್ದಾರೆ.

Actor Darshan: ಸನ್ನಡತೆ ಆಧಾರದಲ್ಲಿ ಹೊರ ಬಂದಿದ್ದ ಸಿದ್ಧಾರೂಢಗೆ ಮತ್ತೆ ಜೈಲು ʼದರ್ಶನʼ

Advertisement
Advertisement
Advertisement