ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

H D Kumaraswamy: ಎಚ್ ಡಿ ರೇವಣ್ಣ ಕುಟುಂಬ ಮತ್ತು ನಮ್ಮ ಕುಟುಂಬ ಬೇರೆ ಬೇರೆ - ಎಚ್ ಡಿ ಕುಮಾರಸ್ವಾಮಿ

H D Kumaraswamy: ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್‌ಡ್ರೈವ್‌ ವಿಷಯ ನನ್ನೊಬ್ಬನಿಗೇ ಅಲ್ಲ ಸಮಾಜಕ್ಕೆ ಮುಜುಗರ ತಂದಿದೆಯೆಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
03:52 PM Apr 29, 2024 IST | ಸುದರ್ಶನ್ ಬೆಳಾಲು
UpdateAt: 04:08 PM Apr 29, 2024 IST
Photo Credit: The Economic Times

H D Kumaraswamy: ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್ ನನ್ನೊಬ್ಬನಿಗೇ ಅಲ್ಲ ಇಡೀ ಸಮಾಜಕ್ಕೆ ಮುಜುಗರ ತಂದಿದೆಯೆಂದು ಇಂದು ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ವಿಚಾರದಲ್ಲಿ ದೇವೇಗೌಡರ ಕುಟುಂಬದ ಹೆಸರು ಎಳೆದು ತರಬೇಡಿ ಎಂದು ಕಾಂಗ್ರೆಸ್ ಮುಖಂಡರಿಗೆ ಅವರು ಮನವಿ ಮಾಡಿದ್ದಾರೆ.

Advertisement

ಸೋಮವಾರ ಶಿವಮೊಗ್ಗದಲ್ಲಿ ಮಾತನಾಡಿದ ಅವರು, "ಕಾಂಗ್ರೆಸ್ ಮಹಾನುಭಾವರೆ, ನೀವೆಲ್ಲ ಏನು ಕಳಂಕವಿಲ್ಲದೇ ಬಂದವರಾ? ಇಲ್ಲಿ ದೇವೇಗೌಡ, ಕುಮಾರಸ್ವಾಮಿಯ ಹೆಸರನ್ನು ಯಾಕೆ ಎಳೆದು ತರುತ್ತೀರಿ ?ತಪ್ಪು ಯಾರು ಮಾಡಿದ್ದಾರೋ ಅವರು ಮಾತ್ರ ಶಿಕ್ಷೆ ಅನುಭವಿಸಬೇಕು ಎಂದು ನಾನೇ ಸ್ಪಷ್ಟಪಡಿಸಿದ್ದೇನಲ್ಲ" ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾಲುಂಗುರ ಹಾಕೋದಕ್ಕೂ ಇದೆ ಸೈಂಟಿಫಿಕ್ ರೀಸನ್; ಇಲ್ಲಿದೆ ಫುಲ್ ಡೀಟೇಲ್ಸ್

Advertisement

ಈ ಸಂದರ್ಭದಲ್ಲಿ ಅವರು"ನಮ್ಮ ಕುಟುಂಬವೇ ಬೇರೆ. ಎಚ್.ಡಿ.ರೇವಣ್ಣ ಅವರ ಕುಟುಂಬವೇ ಬೇರೆ. ಹಾಸನದಲ್ಲಿ ಅವರು ನಾಲ್ಕು ಜನ ಪ್ರತ್ಯೇಕವಾಗಿ ವಾಸವಿದ್ದಾರೆ. ಹೀಗಾಗಿ ಇಲ್ಲಿ ಕುಟುಂಬದ ಹೆಸರು ತರಬೇಡಿ. ಇದು ವ್ಯಕ್ತಿ ಪ್ರಶ್ನೆಯೇ ಹೊರತು ಕುಟುಂಬದ ಪ್ರಶ್ನೆ ಅಲ್ಲ. ವ್ಯಕ್ತಿಯ ಬಗ್ಗೆ ಚರ್ಚೆ ಮಾಡಿಕೊಳ್ಳಿ. ವ್ಯಕ್ತಿಗತವಾಗಿ ಒಬ್ಬೊಬ್ಬರದ್ದು ಒಂದೊಂದು ವರ್ತನೆ ಇರುತ್ತದೆ" ಎಂದು ಅವರು ಹೇಳಿದ್ದಾರೆ.

ಮಹಿಳೆಯರೊಂದಿಗೆ ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಅದು ಆಗಬಾರದಿತ್ತು. ಸಮಾಜದಲ್ಲಿ ಇಂತಹದ್ದು ಮತ್ತೆ ನಡೆಯಬಾರದು ಎಂಬುದು ನನ್ನ ಅಭಿಪ್ರಾಯ. ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಮತ್ತು ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಲಕ್ಷಾಂತರ ಮಹಿಳೆಯರು ಕಷ್ಟ-ಸುಖ ಹೇಳಿಕೊಂಡು ನಮ್ಮ ಬಳಿಗೆ ಬಂದಿದ್ದಾರೆ. ಅವರ ಜೊತೆ ನಾವೆಲ್ಲ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಅವರಿಗೆ ನೆರವು ಕೊಟ್ಟು ಸಂಕಷ್ಟದಿಂದ ಪಾರು ಮಾಡಲು ಪ್ರಯತ್ನಿಸಿದ್ದೇವೆ. ಇಂದು ಯಾರು ತಪ್ಪು ಮಾಡಿದ್ದರೂ ಈ ನೆಲದ ಕಾನೂನಿಗೆ ತಲೆಬಾಗಲೇಬೇಕು. ಶಿಕ್ಷೆ ಅನುಭವಿಸಲೆಬೇಕು. ಈಗ ಸರ್ಕಾರ ತನಿಖೆಗೆ ಆದರೆ ಆದೇಶಿಸಿದೆ. ಎಸ್‌ಐಟಿ ತನಿಖೆ ವಿಚಾರದಲ್ಲಿ ಯಾರ ಮೇಲೂ ಪ್ರಭಾವ ಬೀರುವ ಪ್ರಶ್ನೆಯೇ ಇಲ್ಲ. ಆದರೆ ಪಾರದರ್ಶಕ ತನಿಖೆ ನಡೆಯಲಿ" ಎಂದು ಅವರು ಒತ್ತಾಯಿಸಿದರು.

"ಅಶ್ಲೀಲ ಪೆನ್‌ಡ್ರೈವ್ ವಿಚಾರದಲ್ಲಿ ಎಲ್ಲವೂ ವೈಯಕ್ತಿಕವಾಗಿ ನಡೆದ ಸಂಗತಿಗಳು. ಮೊದಲೇ ನಮ್ಮ ಗಮನಕ್ಕೆ ಬಂದಿದ್ದರೆ ತಪ್ಪಿಸಬಹುದಿತ್ತು. ನಮ್ಮ ಮಕ್ಕಳು ಎಲ್ಲಿಗೆ ಹೋಗುತ್ತಾರೆ ಏನು ಮಾಡುತ್ತಾರೆ ಎಂದು ಕಾಯಲು ಆಗುತ್ತದೆಯೇ. ಅದೇ ರೀತಿ ಪ್ರಜ್ವಲ್ ವಿದೇಶಕ್ಕೆ ಹೋಗುವಾಗಲೂ ನನ್ನ ಕೇಳಿ ಹೋಗುತ್ತಾನಾ ? ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಲೋಕಸಭಾ ಚುನಾವಣೆ ಫಲಿತಾಂಶದ ಮೇಲೆ ಪೆನ್‌ಡ್ರೈವ್‌ ಯಾವುದೇ ಪರಿಣಾಮ ಬೀರಲ್ಲ ಎಂದ ಕುಮಾರಸ್ವಾಮಿ, ಪಕ್ಷದಿಂದಲೂ ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಪ್ರಜ್ವಲ್‌ ರನ್ನು ವಿದೇಶದಿಂದ ವಾಪಸ್ ಕರೆಸಿಕೊಳ್ಳುವ ವಿಚಾರ ಸರ್ಕಾರ ತೀರ್ಮಾನ ಎಂದರು.

ಇದನ್ನೂ ಓದಿ: ಅಕ್ಕನ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಲೇ ಹೃದಯಾಘಾತಕ್ಕೆ ಬಲಿಯಾದ ತಂಗಿ !!ಮರುಕ ಹುಟ್ಟಿಸುವ ವಿಡಿಯೋ ವೈರಲ್

Advertisement
Advertisement
Next Article