ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Minister Dinesh Gundurao: ರಾಜ್ಯಾದ್ಯಂತ ಕಾಟನ್‌ ಕ್ಯಾಂಡಿ ಬ್ಯಾನ್‌, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ-ಸಚಿವ ದಿನೇಶ್‌ ಗುಂಡೂರಾವ್‌ ಘೋಷಣೆ

01:23 PM Mar 11, 2024 IST | ಹೊಸ ಕನ್ನಡ

Minister Dinesh Gundurao: ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ಬ್ಯಾನ್‌ ಮಾಡಲಾಗಿದೆ. ಹಾಗೆನೇ ಗೋಬಿ ಮಂಚೂರಿಯಲ್ಲಿ ಯಾವುದೇ ಕೃತಕ ಬಣ್ಣ ಬಳಸುವಂತಿಲ್ಲ, ಈ ಕುರಿತು ಸುತ್ತೋಲೆ ಹೊರಡಿಸಲಾಗುತ್ತದೆ. ಇನ್ನು ಮುಂದೆ ಕಾಟನ್‌ ಕ್ಯಾಂಡಿ ಮಾರಾಟ ಮಾಡಿದರೆ, ಗೋಬಿ ಮಂಚೂರಿಯಲ್ಲಿ ಕೃತಕ ಕಲರ್‌ ಹಾಕಿದರೆ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕೈದೆ 2006 ರ ನಿಯಮ 59 ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

Advertisement

ಇದನ್ನು ಓದಿ: Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವ ಯಾರೆಂಬುದು ಪತ್ತೆ - ಗೃಹಸಚಿವ ಪರಮೇಶ್ವರ್ ಮಾಹಿತಿ !!

ಹೊರಗಡೆ ಆಹಾರ ಸೇವೆ ಹೆಚ್ಚಿನ ಜನರು ಮಾಡುತ್ತಾರೆ. ಇದರಿಂದ ಕ್ಯಾನ್ಸರ್‌ ಹಾಗೂ ಅಸಾಂಕ್ರಮಿಕ ಖಾಯಿಲೆ ಹೆಚ್ಚುತ್ತಿದೆ. ಹೀಗಾಗಿ 171 ತರಹದ ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹ ಮಡಿ ಪರೀಕ್ಷೆ ಮಾಡಿದ್ದೇವೆ. ಇದರಲ್ಲಿ 107 ಮಾದರಿಯಲ್ಲಿ ಕೃತಕ ಬಣ್ಣ ಕಂಡು ಬಂದಿದೆ. 64 ಸುರಕ್ಷಿತವಾದ ಮಾದಿರಿಗೆ ಪತ್ತೆಯಾಗಿದೆ. ಟಾರ್ಟ್ರಾಜಿನ್‌, ಸನ್‌ಸೆಟ್‌ ಯೆಲ್ಲೋ ಮತ್ತು ಕಾರ್ಮೋಸಿನ್‌ನಂತ ಕೃತಕ ಬಣ್ಣಗಳನ್ನು ಬಳಸಲಾಗಿದೆ ಇದು ಆರೋಗ್ಯಕ್ಕೆ ಅಪಾಯಕಾರಿ ಎಂದು ಆರೋಗ್ಯ ಸಚಿವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠ ನಡೆಸಿ ಮಾತನಾಡಿದರು.

Advertisement

 

ಇನ್ನು 25 ವಿಧದ ಕಾಟನ್ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಇದರಲ್ಲಿ ಕೂಡಾ 15 ಮಾದರಿಗಳಲ್ಲಿ ಕೃತಕ ಬಣ್ಣ ಬಳಸಿರುವುದು ಪತ್ತೆಯಾಗಿದೆ. 10ರಲ್ಲಿ ಕೃತಕ ಬಣ್ಣ ಬಳಸಿಲ್ಲ. ಕೃತಕ ಬಣ್ಣ ಬಳಕೆ ಮಾಡಿ ಕ್ಯಾಂಡಿ ತಯಾರು ಮಾಡಬಹುದು. ಆದರೆ ರೊಡಮೈನ್ ಬಿ, ಟಾರ್ಟ್ರಾಜಿನ್ನಂತಹ ಯಾವುದೇ ಬಣ್ಣ ಬಳಸಬಾರದು. ಇದು ಆರೋಗ್ಯಕ್ಕೆ ಹಾನಿಕಾರಕ. ಇದು ಸಂಪೂರ್ಣ ಕಾನೂನು ಬಾಹಿರ. ಪಿಂಕ್ ಕಲರ್ ಬರಲು ರೊಡಮೈನ್ ಬಿ ಬಳಸುತ್ತಾರೆ. ಇನ್ಮುಂದೆ ಬಳಸುವಂತಿಲ್ಲ. ಇದನ್ನು ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ 10 ಲಕ್ಷ ರೂ. ದಂಡ ವಿಧಿಸಲಾಗುವುದು ಸಚಿವರು ಹೇಳಿದ್ದಾರೆ.

Advertisement
Advertisement
Next Article