ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Ananth Kumar Hegde: ಸಂಸದ ಅನಂತ್‌ ಕುಮಾರ ಹೆಗಡೆ ವಿರುದ್ಧ FIR ಗೆ ಬಿತ್ತು ಬ್ರೇಕ್‌

08:19 AM Mar 16, 2024 IST | ಹೊಸ ಕನ್ನಡ
UpdateAt: 08:21 AM Mar 16, 2024 IST

Ananth Kumar Hegde: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ ಸಂಬಂಧ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

Advertisement

ಇದನ್ನೂ ಓದಿ: CAA: ಸಿಎಎ ಆಪ್‌ ಬಿಡುಗಡೆ, ಈ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಿ

ಎಫ್‌ಐಆರ್ ರದ್ದು ಕೋರಿ ಸಂಸದ ಅನಂತಕುಮಾರ ಹೆಗಡೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕ ಸದಸ್ಯ ಪೀಠ, ಅರ್ಜಿ ಕುರಿತ ಮುಂದಿನ ವಿಚಾರಣೆವರೆಗೆ ಎಫ್‌ಐಆರ್ ಗೆ ತಡೆ ನೀಡಿತು.

Advertisement

ಇದನ್ನೂ ಓದಿ: Basavaraj Bommai: ಬೊಮ್ಮಾಯಿ ಮೇಲೆ ಹೆಜ್ಜೇನು ದಾಳಿ

ಜತೆಗೆ, ಪ್ರತಿವಾದಿಗಳಾದ ಮುಂಡಗೋಡು ಠಾಣಾ ಪೊಲೀಸರು ಮತ್ತು ದೂರುದಾರರಾದ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಗಣಪತಿ ಬಸವಂತಪ್ಪ ಹುನ್ನಳ್ಳಿಗೆ ನೋಟಿಸ್ ಜಾರಿಗೊಳಿಸಿತು.

2024 ಫೆ.23ರಂದು ಮುಂಡಗೋಡು ತಾಲೂಕಿನ ಪಾಳಾ ಗ್ರಾಮ ಮತ್ತು ಇಂದೂರ ಗ್ರಾಮದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯ ಕರ್ತರ ಸಭೆ ನಡೆದಿತ್ತು. ಅದರಲ್ಲಿ ಭಾಗವಹಿಸಿದ್ದ ಅನಂತಕುಮಾರ ಹೆಗಡೆ, ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ, "ಸಿದ್ರಾಮುಲ್ಲಾ ಖಾನ್ ಸರಕಾರವನ್ನು ನಾವೆಲ್ಲೂ ನೋಡಿಲ್ಲ. ಅತ್ಯಂತ ಹೇಸಿಗೆ ಬರುವ ರೀತಿ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುವಲ್ಲಿ ನಿರತರಾಗಿದ್ದಾರೆ. ಅಧಿಕಾರ ಕೊಟ್ಟರೆ ನಮ್ಮನ್ನು ಮಾರಾಟ ಮಾಡುತ್ತಾರೆ. ಹಿಂದೂಗಳು ದೇವಸ್ಥಾನದ ಹುಂಡಿಗೆ ಹಾಕಿದ ಹಣವನ್ನು, ಚರ್ಚ್, ಮಸೀದಿಗೆ ಕೊಡುತ್ತಾರೆ,'' ಎಂದು ಹೇಳಿಕೆ ನೀಡಿದ್ದರು.

ಕುರಿತು ಮುಂಡಗೋಡು ಠಾಣೆಯ ಹೆಡ್ ಕಾನ್ಸ್‌ಟೇಬಲ್ ದೂರು ದಾಖಲಿಸಿ, ಸಿದ್ದರಾಮಯ್ಯ ವಿರುದ್ಧ ಅನಂತಕುಮಾರ ಹೆಗಡೆ ಅವಹೇಳನಕಾರಿ ಯಾಗಿ ಮಾತನಾಡಿದ್ದಾರೆ. ಆ ಮೂಲಕ ಶಾಂತಿ-ಸೌರ್ಹದತೆ ಕದಡುವ, ಜಾತಿ- ಧರ್ಮಗಳ ನಡುವೆ ದ್ವೇಷ ಹುಟ್ಟುಹಾಕುವ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದಾರೆ ಆರೋಪಿಸಿದ್ದರು. ಪ್ರಚೋದನಕಾರಿಯಾಗಿ ಎಂದು

ಈ ಸಂಬಂಧ ಮುಂಡಗೋಡು ಠಾಣಾ ಪೊಲೀಸರು ಅನಂತಕುಮಾರ ಹೆಗಡೆ ವಿರುದ್ಧ ಉದ್ದೇಶಪೂರ್ವಕವಾಗಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಸಂಬಂಧ ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪ್ರಧಾನ ಜಿಲ್ಲಾ (ಕಿರಿಯ ಶ್ರೇಣಿ) ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಹಾಗಾಗಿ ಅವರು ವಿಚಾರಣೆ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು

Advertisement
Advertisement
Next Article