Hit and run new law: ವಾಹನ ಸವಾರರೇ ಎಚ್ಚರ, ಎಚ್ಚರ !! ಈ ತಪ್ಪು ಮಾಡಿದ್ರೆ 10 ವರ್ಷ ಜೈಲು, ₹ 7 ಲಕ್ಷ ದಂಡ ಫಿಕ್ಸ್ !!
Hit and run new law: ವಾಹನಗಳ ದಟ್ಟಣೆ ಹೆಚ್ಚಾಗುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಕೂಡ ತೀವ್ರವಾಗುತ್ತದೆ. ಈ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಭಾರತ ಸರ್ಕಾರವು ಮಹತ್ವದ ಕಾನೂನುಗಳನ್ನು ಜಾರಿಗೆ ತರುತ್ತಿದೆ. ಅಂತೆಯೇ 2023 ರಲ್ಲಿ ಕೇಂದ್ರ ಸರ್ಕಾರವು ಭಾರತೀಯ ನ್ಯಾಯಾಂಗ ಸಂಹಿತೆಯನ್ನು ತಿದ್ದುಪಡಿ ಮಾಡಿ ಹಿಟ್ ಅಂಡ್ ರನ್ ಕೇಸ್(hit and run new law) ಅಪರಾಧಿಗೆ ದೊಡ್ಡ ಮಟ್ಟದ ಶಿಕ್ಷೆ ವಿಧಿಸಲು ಮುಂದಾಗಿದೆ.
ಹೌದು 2023 ರಲ್ಲಿ ಕೇಂದ್ರ ಸರ್ಕಾರವು ಭಾರತೀಯ ನ್ಯಾಯಾಂಗ ಸಂಹಿತೆಯನ್ನು ತಿದ್ದುಪಡಿ ಮಾಡಿದ ನಂತರ, ಹೊಸ ಮೋಟಾರು ವಾಹನ ಕಾಯ್ದೆಯು ಅಪಘಾತಕ್ಕೆ ಕಾರಣವಾದ ಟ್ರಕ್ ಚಾಲಕನಿಗೆ ಹತ್ತು ವರ್ಷಗಳ ಜೈಲು ಶಿಕ್ಷೆ ನೀಡುತ್ತಿದೆ. ಇದಲ್ಲದೇ 7 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಹೀಗಾಗಿ ವಾಹನ ಸವಾರರು ಆದಷ್ಟು ಜಾಗರೂಕರಾಗಿ ವಾಹನ ಚಲಾವಣೆ ಮಾಡಿದರೆ ಉತ್ತಮ.
ಇದನ್ನು ಓದಿ: Drinking Water: ದಿನಕ್ಕೆ ಮಹಿಳೆಯರು ಎಷ್ಟು ನೀರು ಕುಡಿಯಬೇಕು ಗೊತ್ತಾ?
ಇನ್ನು ಈ ಹೊಸ ಕಾನೂನನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರಾದ್ಯಂತ ಭಾರೀ ಹೋರಾಟಗಳು ನಡೆಯುತ್ತಿವೆ. ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕಳೆದ ಮೂರು ದಿನಗಳಿಂದ ದೇಶದ ವಿವಿಧ ರಾಜ್ಯಗಳಲ್ಲಿ ಬಸ್ ಮತ್ತು ಟ್ರಕ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವುಗಳಲ್ಲಿ ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಛತ್ತೀಸ್‌ಗಢ, ಉತ್ತರಪ್ರದೇಶ, ಉತ್ತರಾಖಂಡ, ಗುಜರಾತ್ ಮತ್ತು ಪಂಜಾಬ್ ಸೇರಿವೆ.