For the best experience, open
https://m.hosakannada.com
on your mobile browser.
Advertisement

Harish Poonja: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ - ಪೊಲೀಸರ ಕರ್ತವ್ಯಕ್ಕೆ ಅಡ್ಡಿ ,ದುರ್ವರ್ತನೆ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

Harish Poonja: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಶಶಿರಾಜ್‌ ಪರವಾಗಿ, ಶಾಸಕರಾದ ಹರೀಶ್ ಪೂಂಜಾರವರು ಬಿಡುಗಡೆ ಮಾಡುವಂತೆ ಒತ್ತಡ ಹೇರಿದ ಕಾರಣಕ್ಕಾಗಿ ಶಾಸಕ ಹರೀಶ್ ಪೂಂಜ ವಿರುದ್ಧ ದೂರು ದಾಖಲಾಗಿವೆ.
06:20 PM May 19, 2024 IST | Praveen Chennavara
UpdateAt: 06:20 PM May 19, 2024 IST
harish poonja  ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ   ಪೊಲೀಸರ ಕರ್ತವ್ಯಕ್ಕೆ ಅಡ್ಡಿ  ದುರ್ವರ್ತನೆ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು
Advertisement

Harish Poonja:  ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಪ್ರಮೋದ್‌ ಉಜಿರೆ ಹಾಗೂ ಶಶಿರಾಜ್‌ ಶೆಟ್ಟಿ (35) ಎಂಬವರುಗಳ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಿನಾಂಕ 18.05.2024 ರಂದು ಅ.ಕ್ರ: 56/2024, ಕಲಂ: 9B(1)(b) Explosive act 1884 ಕಲಂ 5 The Explosives Substance Act-1908 ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪೈಕಿ ಶಶಿರಾಜ್‌ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

Advertisement

ಇದನ್ನೂ ಓದಿ: Shoking News: ಪತ್ನಿಯ ಶೀಲದ ಮೇಲೆ ಶಂಕೆ : ಮೊಳೆಗಳಿಂದ ಗುಪ್ತಾಂಗಕ್ಕೆ ಹೊಡೆದು, ಹಿತ್ತಾಳೆಯ ಬೀಗ ಹಾಕಿ ಚಿತ್ರಹಿಂಸೆ ನೀಡಿದ ರಕ್ಕಸ ಪತಿ

ಈ  ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಪ್ರಮುಖ ಆರೋಪಿ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಶಶಿರಾಜ್‌ ಪರವಾಗಿ, ಬೆಳ್ತಂಗಡಿ ವಿಧಾನಸಭಾ ಶಾಸಕರಾದ ಹರೀಶ್ ಪೂಂಜಾರವರು, ಇತರ ಕೆಲವು ಜನರೊಂದಿಗೆ, ದಿನಾಂಕ 18.05.2024 ರಂದು ರಾತ್ರಿ, ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ, ಆರೋಪಿಯು ಶಾಸಕರ ಪಕ್ಷದ ಕಾರ್ಯಕರ್ತನಾಗಿದ್ದು, ಆತನನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿರುತ್ತಾರೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಇಲಾಖೆಯ ಬಗ್ಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿರುತ್ತಾರೆ ಎಂದು ಶಾಸಕ ಹರೀಶ್ ಪೂಂಜ ವಿರುದ್ಧ ದೂರು ದಾಖಲಾಗಿವೆ.

Advertisement

ಈ ಕುರಿತು ಶಾಸಕರಾದ ಹರೀಶ್ ಪೂಂಜಾರವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ. 57/2024 , ಕಲಂ:353, 504 IPC ರಂತೆ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Rain Alert: ಕರಾವಳಿಯಲ್ಲಿ ಪೂರ್ವ ಮುಂಗಾರು ಮಳೆ ಬಿರುಸು : ಮೇ.22ರವರೆಗೆ ಯೆಲ್ಲೋ ಅಲರ್ಟ್

Advertisement
Advertisement
Advertisement