For the best experience, open
https://m.hosakannada.com
on your mobile browser.
Advertisement

Kabab Colour Ban: ಗೋಬಿ ಬೆನ್ನಲ್ಲೇ ರಾಜ್ಯದಲ್ಲಿ ಕೆಂಪು ಕೆಂಪು ಕಬಾಬ್ ಕೂಡ ಬ್ಯಾನ್ !!

Kabab Colour Ban: ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ ಗೋಬಿಗೆ ಕೃತಕ ಬಣ್ಣ ಬಳಕೆ ನಿರ್ಬಂಧ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಹಾಕುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
08:19 AM Jun 25, 2024 IST | ಸುದರ್ಶನ್
UpdateAt: 08:19 AM Jun 25, 2024 IST
kabab colour ban  ಗೋಬಿ ಬೆನ್ನಲ್ಲೇ ರಾಜ್ಯದಲ್ಲಿ ಕೆಂಪು ಕೆಂಪು ಕಬಾಬ್ ಕೂಡ ಬ್ಯಾನ್
Advertisement

Kabab Colour Ban: ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ(Cotton Candy), ಗೋಬಿಗೆ ಕೃತಕ ಬಣ್ಣ ಬಳಕೆ ನಿರ್ಬಂಧ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಹಾಕುವುದನ್ನು ನಿಷೇಧಿಸಿ(Kabab Colour Ban) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

K S Eshwarappa: ಕೆ ಎಸ್ ಈಶ್ವರಪ್ಪ ಮರಳಿ ಬಿಜೆಪಿ ಸೇರ್ಪಡೆ?! ಹೈಕಮಾಂಡ್ ಒಪ್ಪಿಗೆಯೊಂದೇ ಬಾಕಿ

ಹೌದು, ಕಬಾಬ್ ತಯಾರಿಕೆಯಲ್ಲಿ ಬಳಸುವ ಕಲರ್‌ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಬಾಬ್‌ಗೆ ಕಲರ್ ಬಳಕೆ ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ನೀಡಿದೆ. ಅಲ್ಲದೆ ಯಾರಾದರು ಕಣ್ಣುತಪ್ಪಿಸಿ ಬಳಕೆ ಮಾಡುವುದು ಕಂಡುಬಂದಲ್ಲಿ 7 ವರ್ಷ ಶಿಕ್ಷೆ ಹಾಗೂ 10 ಲಕ್ಷ ದಂಡದ ಎಚ್ಚರಿಕೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಅಂದಹಾಗೆ ಕರ್ನಾಟಕದ(Karnataka) 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ ಕೃತಕ ಬಣ್ಣ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ.

ಇನ್ನು ಈ ಹಿಂದೆ ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನ FSSAI ಸಂಗ್ರಹಿಸಿದ್ದು, ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕಡೆ ಗೋಬಿ ಮಾದರಿ ಟೆಸ್ಟ್​​ ಮಾಡಲಾಗಿದೆ. ಟೆಸ್ಟಿಂಗ್ ವೇಳೆ ಕೃತಕ ಬಣ್ಣಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಇರೋದು ಪತ್ತೆಯಾಗಿತ್ತು. ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ರಾಸಾಯನಿಕ ಅಂಶ ಪತ್ತೆಯಾಗಿದ್ರೆ, ಇತ್ತ ಗೋಬಿ ಮಂಚೂರಿಯಲ್ಲಿ‌ ಸನ್‌ಸೆಟ್‌ ಯೆಲ್ಲೊ‌ ಬಣ್ಣ ಮತ್ತು ಟಾಟ್ರ್ರಾಜಿನ್‌ ಪತ್ತೆಯಾಗಿದೆ. ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ‘ರೋಡಮೈನ್‌-ಬಿ’ ಹಾಗೂ ಗೋಬಿ ಮಂಚೂರಿಯಲ್ಲಿ’ಸನ್‌ಸೆಟ್‌ ಯೆಲ್ಲೊ’ ಬಣ್ಣ ಮತ್ತು ‘ಟಾಟ್ರ್ರಾಜಿನ್‌’ ರಾಸಾಯನಿಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕಲರ್ ಬಳಕೆಯನ್ನು ನಿಷೇಧಿಸಿದೆ.

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್‌

Advertisement
Advertisement
Advertisement