ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Karnataka Budget 2024: ಬಜೆಟ್‌ನಲ್ಲಿ ಕ್ರಿಶ್ಚಿಯನ್‌, ಜೈನ ಸಮುದಾಯದವರಿಗೆ ಸಿಹಿ ಸುದ್ದಿ

12:00 PM Feb 16, 2024 IST | ಹೊಸ ಕನ್ನಡ
UpdateAt: 12:02 PM Feb 16, 2024 IST

Karnataka Budget 2024: ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಸಂದರ್ಭ ಸಾರ್ವಜನಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಭಾನುವಾರ ಉಪನೋಂದಣಾಧಿಕಾರಿ ಕಚೇರಿ ಓಪನ್‌ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.

Advertisement

ಇದನ್ನೂ ಓದಿ: Karnataka Budget 2024: ರಾಜ್ಯ ಸರಕಾರದಿಂದ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್‌

ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಭಾನುವಾರವೂ ಸಾರ್ವಜನಿಕರಿಗೆ ಉಪನೋಂದಣಾಧಿಕಾರಿ ಕಚೇರಿ ಓಪನ್‌ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.

Advertisement

ಮಾಜಿ ದೇವದಾಸಿಯರ ಮಾಸಾಶನ 1500 ರೂ.ನಿಂದ 2000 ರೂ. ಹೆಚ್ಚಳ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನ 1200 ರೂ. ಗಳಿಗೆ ಹೆಚ್ಚಳ ಮಾಡಲಾಗುವುದು. 1500 ವಿಶೇಷಚೇತನರಿಗೆ ದ್ವಿಚಕ್ರ ವಾಹನ ವಿತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗೆ 100 ಕೋಟಿ, ಜೈನ ಸಮುದಾಯದ ಅಭಿವೃದ್ಧಿಗೆ 50 ಕೋಟಿ ರೂ. ವಕ್ಫ್‌ ಆಸ್ತಿಗಳ ಸಂರಕ್ಷಣೆಗೆ 100 ಕೋಟಿ ರೂ.ಅನುದಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

Advertisement
Advertisement
Next Article