ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Karnataka Draught Fund: ಗ್ರಾ.ಪಂ.ಗಳಲ್ಲಿ ಬರ ಪರಿಹಾರ ಪಟ್ಟಿ- ಕಂದಾಯ ಸಚಿವ

Karnataka Draught Fund: 'ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ
09:41 AM May 10, 2024 IST | ಸುದರ್ಶನ್
UpdateAt: 09:43 AM May 10, 2024 IST
Advertisement

Karnataka Draught Fund: "ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ,'' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

Advertisement

ಇದನ್ನೂ ಓದಿ: Farmers: ರೈತನ ವರಿಸುವ ಕನ್ಯೆಗೆ 5 ಲಕ್ಷ ರೂ.

ವಿಧಾನಸೌಧದಲ್ಲಿ ಭಾನುವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, "ರೈತರು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು,'' ಎಂದು ಮನವಿ ಮಾಡಿದರು.

Advertisement

ಇದನ್ನೂ ಓದಿ: 7th Pay Commission: 7ನೇ ವೇತನ ಆಯೋಗ ಜಾರಿಗೆ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ?!

"ಕುಡಿಯುವ ನೀರು, ಮೇವು, ಇತರ ಸೌಲಭ್ಯ ಒದಗಿಸಲು ಜಿಲ್ಲಾಧಿ ಕಾರಿಗಳ ಖಾತೆಗೆ 870 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪರಿಹಾರದ ಹಣವನ್ನು ಸಮರ್ಪಕವಾಗಿ ಬಳಸಲು ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್ ರಚಿಸಲಾಗಿದೆ. ಈ ಕಾರ್ಯಪಡೆಗಳಿಂದ ಈವರೆಗೆ 431 ಸಭೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲೂ ಟಾಸ್ಕ್‌ಫೋರ್ಸ್ ಸಮಿತಿಗಳಿಂದ 236 ಸಭೆಗಳಾಗಿವೆ. 156 ಹಳ್ಳಿಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ಬಾಡಿಗೆ ಆಧಾರದ ಮೇಲೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 46 ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದ 46 ವಾರ್ಡ್‌ಗಳಲ್ಲಿ ಟ್ಯಾಂಕರ್‌ನಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದರು.

"ಕಳೆದ 5 ವರ್ಷದ ಅಂಕಿ, ಅಂಶಗಳ ಆಧಾರದಲ್ಲಿ

ಮುಂಜಾಗ್ರತಾ ಕ್ರಮವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ 782 ಗ್ರಾಮಗಳು ಹಾಗೂ 1,193 ವಾರ್ಡ್ ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಕೊಳವೆಬಾವಿ ಅವಶ್ಯಕತೆಯಿದ್ದರೆ ಕೊರೆಯುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಿಎಂ ಸೂಚಿಸಿದ್ದಾರೆ. ಮೇವಿನ ಸಮಸ್ಯೆ ನೀಗಿಸಲು 2023ರ ನವೆಂಬರ್‌ನಲ್ಲಿ ಮೊದಲ ಹಂತದ ಕ್ರಮವಾಗಿ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ನೀಡಲಾಗಿದೆ. ಎರಡನೇ ಹಂತದಲ್ಲಿ ಮತ್ತೆ 7 ಲಕ್ಷ ಕಿಟ್ ವಿತರಿಸಲು ಹಣ ಬಿಡುಗಡೆ ಮಾಡಲಾಗಿದೆ. 3 ಕಡೆ ಗೋಶಾಲೆ ತೆರೆಯಲಾಗಿದೆ. ಮೇವಿನ ದಾಸ್ತಾನಿಗೂ ಕ್ರಮ ಕೈಗೊಳ್ಳಲಾಗಿದೆ,'' ಎಂದು ಕಂದಾಯ ಸಚಿವರು ತಿಳಿಸಿದರು.

Related News

Advertisement
Advertisement