2nd Puc Result 2024: ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ತೃತೀಯ ಸ್ಥಾನಕ್ಕೆ ಏರಿದ ವಿಜಯಪುರ !
2nd Puc Result 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಏ.10) ಪ್ರಕಟ ಮಾಡಿದೆ. ಈ ಬಾರಿ ಕೂಡಾ ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದೆ. ದ್ವಿತೀಯ ಉಡುಪಿ ಸ್ಥಾನ ಪಡೆದುಕೊಂಡಿದೆ.
ದಕ್ಷಿಣ ಕನ್ನಡ ಮುಂಚೂಣಿಯಲ್ಲಿ ನಿಂತಿದ್ದು ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡದಲ್ಲಿ 97.37 ಪರ್ಸೆಂಟ್ ದಾಖಲೆಯ ಫಲಿತಾಂಶ ಬಂದಿದೆ. ಇನ್ನು ಕರಾವಳಿಯ ಉಡುಪಿ ಜಿಲ್ಲೆಯಲ್ಲಿ 96.80 ಪ್ರತಿಶತ ವಿದ್ಯಾರ್ಥಿಗಳು ಪಾಸಾಗಿದ್ದು, ಉಡುಪಿ ದ್ವಿತೀಯ ಸ್ಥಾನದಲ್ಲಿದೆ. ಆಶ್ಚರ್ಯ ವಿಷಯ ಏನೆಂದರೆ ವಿಜಯಪುರ ಜಿಲ್ಲೆಯ ತೃತೀಯ ಸ್ಥಾನ ಪಡೆದುಕೊಂಡಿದೆ. ಉತ್ತರ ಕನ್ನಡಕ್ಕೆ ನಾಲ್ಕನೇ ಸ್ಥಾನ ಬಂದಿದೆ. ಕೊಡಗು ಜಿಲ್ಲೆ ಐದನೇ ಸ್ಥಾನ ಪಡೆದುಕೊಂಡಿದೆ. ಹಾಗೂ ಗದಗ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
ಯಥಾಪ್ರಕಾರ ಈ ಬಾರಿ ಕೂಡ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಯಥಾಪ್ರಕಾರ ಈ ಬಾರಿ ಕೂಡ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ರಾಜ್ಯಕ್ಕೆ ವಿದ್ಯಾಲಕ್ಷ್ಮೀ 598 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ವಿದ್ಯಾಲಕ್ಷ್ಮಿ ಹೆಚ್ಚಿನ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾಳೆ.
ಇಂದು (ಬುಧವಾರ) 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ ನಂತರ 11 ಗಂಟೆಗೆ ವೆಬ್‌ಸೈಟ್‌ನಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟ ಮಾಡಲಾಗಿದೆ. ವಿದ್ಯಾರ್ಥಿಗಳು karresults.nic.in ಅಥವಾ pue.kar.nic ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಲು ಸಾಧ್ಯ.
ಮಾ.1 ರಿಂದ ಮಾರ್ಚ್ 22 ರವರೆಗೆ ಪಿಯುಸಿ ಪರೀಕ್ಷೆಗಳು ನಡೆದಿದ್ದು, ಪಿಯುಸಿ ಪರೀಕ್ಷೆಗೆ 6.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. 3.3 ಲಕ್ಷ ವಿದ್ಯಾರ್ಥಿಗಳು ಹಾಗೂ 3.6 ಲಕ್ಷ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮೂರು ಭಾಗಗಳಲ್ಲಿ ನಡೆಸಲಾಗಿದೆ.
5,52,690 ವಿದ್ಯಾರ್ಥಿಗಳು ಪಾಸಾಗಿದ್ದು ಒಟ್ಟು 81.15% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ಶಿಕ್ಷಣ ಇಲಾಖೆ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಫಲಿತಾಂಶ ಪರಿಶೀಲಿಸುವುದು ಹೇಗೆ ? ಎಲ್ಲಿ?
ವಿದ್ಯಾರ್ಥಿಗಳು ಮೊದಲಿಗೆ karresults.nic.in ಅಥವಾ pue.kar.nic ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
ಅಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
ಅಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಂಡು ಕ್ಲಿಕ್ ಮಾಡಬೇಕು.
ಅಲ್ಲಿ ಆವಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.